ಪತಿಯಿಂದ ದೈಹಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆ

ಪತಿಯ ದೈಹಿಕ ಹಿಂಸೆ ತಾಳಲಾರದೆ ಪತ್ನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

Updated: Jun 7, 2019 , 04:01 PM IST
ಪತಿಯಿಂದ ದೈಹಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆ

ಬಾಂದಾ: ಪತಿಯ ದೈಹಿಕ ಹಿಂಸೆ ತಾಳಲಾರದೆ ಪತ್ನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಕಮಾಸಿನ್ ಪ್ರದೇಶದ ಖಾರೌಲಿ ಗ್ರಾಮದಲ್ಲಿ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

"ಸಂತ್ರಸ್ತೆ ಗೌರ(30)ಗೆ ಹೊಡೆದು ದೈಹಿಕ ಹಿಂಸೆ ನೀಡುತ್ತಿರುವ ಬಗ್ಗೆ ಸ್ಥಳಿಯರು ಪೊಲೀಸರಿಗೆ ವಿಷಯ ತಿಲಿಸುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿರುವಾಗಲೇ, ಆಕೆ ಮನೆಯೊಳಗೆ ಓಡಿ ಹೋಗಿ ಬೆಂಕಿ ಹಚ್ಚಿಕೊಂಡಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದರು" ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ, ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.