ನವದೆಹಲಿ: ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ವಿಧಿಸಿದ ಅಧಿಕಾರಿಗಳೇ ಮಹಿಳೆಯೊಬ್ಬರಿಂದ ಒದೆ ತಿಂದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಕೋವಿಡ್-19 ಮಾರ್ಗಸೂಚಿ(COVID-19 Guidelines)ಪಾಲಿಸಿಲ್ಲವೆಂದು ದಂಡ ವಿಧಿಸಿದ್ದಕ್ಕೆ ಮಹಿಳೆಯು ಅಧಿಕಾರಿಯ ಕೆನ್ನೆಗೆ ಹೊಡೆದು, ಕಾಲಿನಿಂದ ಜಾಡಿಸಿ ಒದ್ದು ಆತನ ಶರ್ಟ್ ಹಿಡದು ಎಳೆದಾಡಿದ್ದಾರೆ. ಅಲ್ಲದೆ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆಯೂ ಹಲ್ಲೆ ನಡೆಸಿದ್ದು, ಅವರ ಕೂದಲು ಹಿಡಿದು ಎಳೆದಾಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗುತ್ತಿದೆ. ಘಟನೆ ಸಂಬಂಧ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.


COMMERCIAL BREAK
SCROLL TO CONTINUE READING

ದೆಹಲಿಯ ಪೀರಾಗಢಿ ಮೆಟ್ರೋ ಸ್ಟೇಷನ್(Peeragarhi Metro station) ಬಳಿ ಈ ಘಟನೆ ನಡೆದಿದೆ. ಮೆಟ್ರೋದಲ್ಲಿ ಸಂಚರಿಸಲು ಸ್ಟೇಷನ್ ಒಳಗೆ ಹೋಗುತ್ತಿದ್ದ ಇಬ್ಬರು ಮಹಿಳೆಯರು ಮಾಸ್ಕ್ ಧರಿಸಿರಲಿಲ್ಲ. ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕೋವಿಡ್ ನಿಯಮ ಪಾಲನೆ ಮಾಡದ ಜನರಿಗೆ ದಂಡ ವಿಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಮಾಸ್ಕ್ ಧರಿಸದೆ ಮೆಟ್ರೋದೊಳಗೆ ಹೋಗಲು ಯತ್ನಿಸಿದ್ದ ಆ ಇಬ್ಬರು ಮಹಿಳೆಯರಿಗೆ ಸ್ಥಳದಲ್ಲಿದ್ದ ಅಧಿಕಾರಿಗಳು ದಂಡ ವಿಧಿಸಿ, ಚಲನ್ ನೀಡಿದ್ದರು.


ಇದನ್ನೂ ಓದಿ: ತ್ರಿಪುರಾ ಸಿಎಂ ಬಿಬ್ಲಬ್ ದೇವ್ ಹತ್ಯೆಗೆ ಯತ್ನ: ಮೂವರ ಬಂಧನ


ದಂಡ ವಿಧಿಸಿದ್ದಕ್ಕೆ ಕೋಪಿಸಿಕೊಂಡ ಮಹಿಳೆಯರು ಅಧಿಕಾರಿಯ ಜೊತೆಗೆ ಜಗಳಕ್ಕಿಳಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಮಹಿಳೆಯೊಬ್ಬಳು ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾಳೆ. ಕಾಲಿನಿಂದ ಜಾಡಿಸಿ ಒದ್ದು, ಶರ್ಟ್ ಹಿಡಿದು ಎಳೆದಾಡಿದ್ದಾರೆ. ಅಲ್ಲದೆ ಮಹಿಳಾ ಅಧಿಕಾರಿಯ ಕೂದಲನ್ನೇ ಹಿಡಿದು ಎಳೆದಾಳಿ ಹೊಡೆದು ಗಲಾಟೆ ಮಾಡಿದ್ದಾರೆ. ಇದ್ದಕ್ಕಿದ್ದಂತೆ ತನ್ನ ಮೇಲೆ ಹಲ್ಲೆ ನಡೆಸಿದ್ದರಿಂದ ಆ ಅಧಿಕಾರಿ ಕಕ್ಕಾಬಿಕ್ಕಿಯಾಗಿದ್ದಾರೆ. ಸ್ಥಳದಲ್ಲಿ ನೆರೆದಿದ್ದ ಜನರು ಮಹಿಳೆಯ ರಂಪಾಟದ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.  


ಕೂಡಲೇ ಮೆಟ್ರೋ ಸ್ಟೇಷನ್(Metro station​)ನಲ್ಲಿದ್ದ ಇತರೆ ಸಿಬ್ಬಂದಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ಹಿಡಿದುಕೊಂಡಿದ್ದಾರೆ. ತನ್ನ ಬಾಸ್​ಗೆ ಫೋನ್ ಮಾಡಿದ ಆ ಮಹಿಳೆ ಅಧಿಕಾರಿಯ ವಿರುದ್ಧವೇ ದೂರಿದ್ದಾಳೆ. ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ಆಧರಿಸಿ ಪೊಲೀಸರು ಆ ಮಹಿಳೆಯರಿಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.


Shocking News: ಬ್ಲೂಟೂತ್ ಹೆಡ್‌ಫೋನ್‌ ಸ್ಫೋಟದಿಂದ ಯುವಕ ಸಾವು..!


ದಂಡ ವಿಧಿಸಿದ ಅಧಿಕಾರಿಗಳ ಮೇಲೆಯೇ ದರ್ಪ ತೋರಿ ಹಲ್ಲೆ ನಡೆಸಿರುವ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣ(Social Media)ಗಳಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಈ ಘಟನೆಯ ವಿಡಿಯೋ ನೋಡಿದ ನೆಟ್ಟಿಜನ್ ಗಳು ಶಾಕ್ ಆಗಿದ್ದಾರೆ. ಸರ್ಕಾರಿ ಅಧಿಕಾರಿ ಎಂದು ಗೌರವ ಕೊಡದೆ ಕಾಲಿನಿಂದ ಒದ್ದಿರುವ ಮಹಿಳೆಯ ನಡೆಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿ ಕಾಮೆಂಟ್ ಮಾಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ