ನವದೆಹಲಿ : ಮುಂದಿನ ವರ್ಷ ಮೇನಲ್ಲಿ ನಡೆಯಲಿರುವ ಪರೀಕ್ಷೆಗೆ ಕಾಯುವುದಲ್ಲದೆ, ಈ ವರ್ಷವೇ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಹೇಳಿದೆ.


COMMERCIAL BREAK
SCROLL TO CONTINUE READING

ಮುಂದಿನ ವರ್ಷದಿಂದ ಮಹಿಳಾ ಅಭ್ಯರ್ಥಿಗಳಿಗೆ ಎನ್‌ಡಿಎ ಪರೀಕ್ಷೆ(NDA Entrance Exam)ಯನ್ನು ತೆಗೆದುಕೊಳ್ಳಲು ಅವಕಾಶ ನೀಡಬೇಕು ಎಂದು ಕೇಂದ್ರವು ಸಲ್ಲಿಸಿದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಮತ್ತೆ ನಿರಾಕರಿಸಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ (NDA) ಪ್ರವೇಶ ಪರೀಕ್ಷೆಗೆ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಅಧಿಸೂಚನೆಯು ಮೇ 2022 ರೊಳಗೆ ಹೊರಬೀಳಲಿದೆ ಎಂದು ರಕ್ಷಣಾ ಸಚಿವಾಲಯ ಮೊದಲೇ ಹೇಳಿದೆ.


ಇದನ್ನೂ ಓದಿ : Muslim Population: ದೇಶದ ಮುಸ್ಲಿಂ ಜನಸಂಖ್ಯೆಯ ಕುರಿತ ಆಘಾತಕಾರಿ ವರದಿ ಬಂಹಿರಂಗ, ಹಿಂದೂಗಳ ಬಗ್ಗೆಯೂ ಕೂಡ ಉಲ್ಲೇಖ


ನವೆಂಬರ್ 2021 ರಲ್ಲಿ ಈ ವರ್ಷ ಎನ್‌ಡಿಎ ಪರೀಕ್ಷೆಗೆ ಹಾಜರಾಗಲು ಮಹಿಳೆಯರಿಗೆ(Womens) ಅವಕಾಶ ನೀಡಿದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯರಿಗೆ ಪರೀಕ್ಷೆಗೆ ಹಾಜರಾಗುವ ಹಕ್ಕನ್ನು ನಿರಾಕರಿಸಲು ಅವರು ಬಯಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.


"ಸಶಸ್ತ್ರ ಸೇವೆಗಳು ಅತ್ಯಂತ ಕಷ್ಟಕರ ಸನ್ನಿವೇಶಗಳನ್ನು ಎದುರಿಸಿದೆ. ತುರ್ತು ಪರಿಸ್ಥಿತಿಯನ್ನು ನಿಭಾಯಿಸುವುದು ಅವರ ತರಬೇತಿ(Training)ಯ ಒಂದು ಭಾಗವಾಗಿದೆ. ಅವರು ಕೂಡ ಈ 'ತುರ್ತು ಪರಿಸ್ಥಿತಿ' ಯನ್ನು ಜಯಿಸಲು ಸಾಧ್ಯವಾಗುತ್ತದೆ ಎಂದು ನಮಗೆ ಖಚಿತವಾಗಿದೆ ಎಂದು ಕೋರ್ಟ್ ತಿಳಿಸಿದೆ.


ಇದನ್ನೂ ಓದಿ : Garlic Farming: ಬೆಳ್ಳುಳ್ಳಿ ಕೃಷಿ ನೀಡಲಿದೆ ದೊಡ್ಡ ಲಾಭ: 6 ತಿಂಗಳಲ್ಲಿ ಲಕ್ಷಾಂತರ ರೂ. ಸಂಪಾದಿಸಿ, ಇದಕ್ಕೆ ತಗಲುವ ವೆಚ್ಚ ಎಷ್ಟು ಗೊತ್ತೇ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.