ಜಗತ್ತಿನ ಅತ್ಯಂತ ಎತ್ತರದ ಸರ್ದಾರ್ ವಲ್ಲಭ ಬಾಯಿ ಪಟೇಲ್ ಪ್ರತಿಮೆ ಅಕ್ಟೋಬರ್ 31ಕ್ಕೆ ಅನಾವರಣ
ಗುಜರಾತ್`ನ ಅಹಮದಾಬಾದ್`ನಲ್ಲಿ ನಿರ್ಮಿಸಲಾಗಿರುವ 182 ಅಡಿ ಎತ್ತರದ ಪ್ರತಿಮೆಯು ದೇಶದ ಏಕತೆ ಮತ್ತು ಸಮಗ್ರತೆಯ ಚಿಹ್ನೆಯಾಗಿದೆ.
ಅಹಮದಾಬಾದ್: ವಿಶ್ವದಲ್ಲೇ ಅತಿ ಎತ್ತರದ ಪ್ರತಿಮೆ ಎನ್ನಲಾಗಿರುವ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಾ ಬಾಯಿ ಪಟೇಲ್ ಅವರ ಪ್ರತಿಮೆಯನ್ನು ಅಕ್ಟೋಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ಅನಾವರಣ ಮಾಡಲಿದ್ದಾರೆ.
ಈ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿರುವ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು, ಗುಜರಾತ್'ನ ಅಹಮದಾಬಾದ್'ನಲ್ಲಿ ನಿರ್ಮಿಸಲಾಗಿರುವ 182 ಅಡಿ ಎತ್ತರದ ಪ್ರತಿಮೆಯು ದೇಶದ ಏಕತೆ ಮತ್ತು ಸಮಗ್ರತೆಯ ಚಿಹ್ನೆ. ಈ ಪ್ರತಿಮೆಯನ್ನು ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಜನ್ಮದಿನಾಚರಣೆಯಂದು ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
2013ರಲ್ಲಿ ಅಂದಿನ ಗುಜರಾತ್ ಸಿಎಂ ಆಗಿದ್ದ ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ ನಿರ್ಮಾಣದ ಘೋಷಣೆ ಮಾಡಿದ್ದರು. ಅದರಂತೆ ಬಿಜೆಪಿ ರಾಷ್ಟ್ರಾದ್ಯಂತ ಉಕ್ಕು, ಮಣ್ಣು ಮತ್ತು ನೀರನ್ನು ಸಂಗ್ರಹಿಸಿದ ಫಲವಾಗಿ ಈ ಪ್ರತಿಮೆ ನಿರ್ಮಾಣ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.