ಎರಡಕ್ಕೂ ಹೆಚ್ಚು ಮಕ್ಕಳಿದ್ದವರಿಗೆ ಮತದಾನ ಹಕ್ಕು ನೀಡಬಾರದು: ರಾಮ್ದೇವ್
ಎರಡಕ್ಕೂ ಹೆಚ್ಚು ಮಕ್ಕಳಿದ್ದವರಿಗೆ ಸರ್ಕಾರಿ ನೌಕರಿ ಸಹ ನೀಡಬಾರದು.
ನವದೆಹಲಿ: ದೇಶದ ಜನಸಂಖ್ಯೆ ತೀವ್ರವಾಗಿ ವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಂತ್ರಿಸಲು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತದಾನದ ಹಕ್ಕು ನೀಡಬಾರದೆಂದು ಯೋಗ ಗುರು ಬಾಬಾ ರಾಮ್ ದೇವ್ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಾಮದೇವ್, ದೇಶದಲ್ಲಿ ಯಾರೆಲ್ಲ ಇಬ್ಬರಿಗಿಂತಲೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೋ ಅವರಿಂದ ಮತದಾನದ ಹಕ್ಕನ್ನು ಕಿತ್ತುಕೊಳ್ಳಬೇಕು. ಅಂಥವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು. ಅವರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಸೀಟು ನೀಡಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ನೀಡಬಾರದು. ಅವರಿಗೆ ಸರ್ಕಾರಿ ನೌಕರಿ ನೀಡಬಾರದು ಎಂದು ಜನಸಂಖ್ಯಾ ನಿಯಂತ್ರಣಕ್ಕೆ ಕೆಲ ಪರಿಹಾರ ಕ್ರಮಗಳನ್ನು ಸೂಚಿಸಿದ್ದಾರೆ. ಜೊತೆಗೆ ತಾವು ಹೇಳಿದ ಕ್ರಮಗಳನ್ನು ಕೈಗೊಂಡರೆ ತಾನೇ ತಾನಾಗಿ ಜಸಂಖ್ಯೆ ಇಳಿಮುಖವಾಗಲಿದೆ ಎಂದು ಭರವಸೆಯನ್ನೂ ವ್ಯಕ್ತಪಡಿಸಿದ್ದಾರೆ.