ನವದೆಹಲಿ:  ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜಾರ್ಖಂಡ್ ರಾಜಧಾನಿ ರಾಂಚಿಯ ಪ್ರಭಾತ್ ತಾರಾ  ಮೈದಾನದಲ್ಲಿ ಏರ್ಪಡಿಸಿದ್ದ ಮುಖ್ಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ ಮಾಡಿದರು. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಯೋಗಾಭ್ಯಾಸ ಮಾಡಲು ಪ್ರೋತ್ಸಾಹಿಸುವ ಸಲುವಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಜನಪ್ರಿಯ ಕಾರ್ಟೂನ್ ಸೀರಿಯಲ್ 'ಮೋಟು-ಪತ್ಲು' ಜೋಡಿ ಯೋಗಾಭ್ಯಾಸ ಮಾಡುತ್ತಿದ್ದ ದೃಶ್ಯ ಕಂಡುಬಂದಿತು.


COMMERCIAL BREAK
SCROLL TO CONTINUE READING

ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದ ಈ ಯೋಗ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಪ್ರಾರ್ಥನೆಯೊಂದಿಗೆ ಆರಂಭವಾದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 'ಮೋಟು-ಪತ್ಲು' ಜೋಡಿ, ಅಲ್ಲಿ ನೆರೆದಿದ್ದವರ ಕಣ್ಮನ ಸೆಳೆಯಿತು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 


ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯೋಗ ಕೇವಲ ವ್ಯಾಯಾಮವಲ್ಲ, ಅದು ಜೀವನ ಧರ್ಮವಾಗಲಿ. ಅನಾರೋಗ್ಯದಿಂದ ಆರೋಗ್ಯದೆಡೆಗೆ ಕೊಂಡೊಯ್ಯಲು ಯೋಗ ಅತ್ಯುತ್ತಮ ಸಾಧನ. ಯೋಗಕ್ಕೆ ಜಾತಿ, ಮತ, ಬಣ್ಣ, ಲಿಂಗ, ಬಡವ-ಬಲ್ಲಿದ ಎಂಬ ಯಾವ ಬೇಧವಿಲ್ಲ. ಅದು ಎಲ್ಲ ಸರಹದ್ದುಗಳನ್ನು ಮೀರಿದ್ದು ಎಂದು ಯೋಗದ ಮಹತ್ವ ಸಾರಿದರು.


ಸುಮಾರು 30 ಸಾವಿರಕ್ಕೂ ಅಧಿಕ ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಗಾಭ್ಯಾಸ ಮಾಡಿದರು.