ಲಖನೌ : ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಬಿಜೆಪಿ ಸರ್ಕಾರ ರಚನೆಗೆ ಸಿದ್ಧತೆ ಆರಂಭವಾಗಿದೆ. ಚುನಾವಣಾ ಫಲಿತಾಂಶದ ನಂತರ ಯೋಗಿ ಆದಿತ್ಯನಾಥ್ ಅವರು ಇಂದು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಇದರ ನಂತರ, ಅವರು ಯುಪಿಯಲ್ಲಿ ಸರ್ಕಾರ ರಚಿಸಲು ಹಕ್ಕು ಸಾಧಿಸಬಹುದು.


COMMERCIAL BREAK
SCROLL TO CONTINUE READING

ರಾಜ್ಯಪಾಲರನ್ನು ಭೇಟಿ ಮಾಡುವ ಮುನ್ನ ಸಿಎಂ ಯೋಗಿ(Yogi Adityanath) ತಮ್ಮ ಅಧಿಕಾರಾವಧಿಯ ಕೊನೆಯ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದಾದ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿದರು.


ಬಿಜೆಪಿ ಮೈತ್ರಿಗೆ ಪೂರ್ಣ ಬಹುಮತ


ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ(BJP) ಮೈತ್ರಿಕೂಟ 273 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತ ಗಳಿಸಿದೆ. ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಆದರೆ, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕೌಶಂಬಿ ಜಿಲ್ಲೆಯ ಸಿರತು ಕ್ಷೇತ್ರದಲ್ಲಿ ಏಳು ಸಾವಿರಕ್ಕೂ ಹೆಚ್ಚು ಮತಗಳಿಂದ ಸೋತಿದ್ದಾರೆ.


ಇದನ್ನೂ ಓದಿ : ಮಾರ್ಚ್ 16 ಕ್ಕೆ ಪಂಜಾಬ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಭಗವಂತ್ ಮಾನ್


ಪ್ರಮುಖ ವಿರೋಧ ಪಕ್ಷ ಎಸ್‌ಪಿ 111 ಸ್ಥಾನಗಳನ್ನು ಗೆದ್ದಿದೆ. ಎಸ್‌ಪಿಯ ಮಿತ್ರ ಪಕ್ಷ ಆರ್‌ಎಲ್‌ಡಿ ಎಂಟು ಸ್ಥಾನಗಳನ್ನು ಗೆದ್ದಿದೆ ಮತ್ತು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷವು ಆರು ಸ್ಥಾನಗಳನ್ನು ಗೆದ್ದಿದೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್(Akhilesh Yadav) ಅವರು ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ಪ್ರೊಫೆಸರ್ ಎಸ್‌ಪಿ ಸಿಂಗ್ ಬಘೆಲ್ ಅವರನ್ನು 67 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ.


ಅದ್ಭುತ ಮೋದಿ-ಯೋಗಿ ಆಡಳಿತ


ಈ ಬಾರಿ ಯುಪಿ ಚುನಾವಣೆಯಲ್ಲಿ ಡಬಲ್ ಇಂಜಿನ್ ಸರ್ಕಾರ ಮರಳುತ್ತಿದೆ. ರಾಜ್ಯದಲ್ಲಿ ಮೋದಿ-ಯೋಗಿ(Modi and Yogi) ಆಡಳಿತ  ನೆಚ್ಚಿಕೊಂಡು ಜನರು ಮತ ಹಾಕಿದ್ದು, ಮತ್ತೆ ಬಿಜೆಪಿ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಕಾರಣ ಎಂಬುದು ಫಲಿತಾಂಶದಿಂದ ಸ್ಪಷ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಣಾಸಿ ಮತ್ತು ಯೋಗಿ ಆದಿತ್ಯನಾಥ್ ಅವರ ತವರು ಮತ್ತು ಕ್ಷೇತ್ರ ಗೋರಖ್‌ಪುರದಲ್ಲಿ ಬಿಜೆಪಿ ಏಕಪಕ್ಷೀಯ ಯಶಸ್ಸು ಗಳಿಸಿದೆ.


ಇದನ್ನೂ ಓದಿ : Yogi Adityanath : ಸಿಎಂ ಯೋಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುಹೂರ್ತ ಫಿಕ್ಸ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.