ಲಕ್ನೋ: ಕಳೆದ ಎರಡು ವರ್ಷಗಳಲ್ಲಿ ಯೋಗಿ ಸರ್ಕಾರವು ಭ್ರಷ್ಟಾಚಾರದ ವಿರುದ್ಧ ಹಲವು ಕ್ರಮ ಕೈಗೊಂಡಿದೆ. ಇದೀಗ ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಮುಂದಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ 600 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಕ್ರಮ ಕೈಗೊಂಡಿದೆ.


COMMERCIAL BREAK
SCROLL TO CONTINUE READING

ಇದರೊಂದಿಗೆ ಯೋಗಿ ಸರ್ಕಾರ 200 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ನೌಕರರನ್ನು ತಾವಾಗಿಯೇ ನಿವೃತ್ತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅದೇ ಸಮಯದಲ್ಲಿ, 400 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಲಾಗಿದೆ.


ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ, ಅಸಮರ್ಥ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಹಿಂದೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದ್ದರು.