ನವದೆಹಲಿ: ರೇವಾರಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸ್ವೀಕಾರಾರ್ಹವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್, "ರೇವಾರಿ ಗ್ಯಾಂಗ್ ರೇಪ್ ಪ್ರಕರಣ ದೇಶವೇ ತಲೆತಗ್ಗಿಸುವ ವಿಷಯವಾಗಿದೆ. ಈ ಕ್ರೂರ ಪ್ರಕರಣದ ಬಗ್ಗೆ ನಿಮ್ಮ ಮೌನ ಸ್ವಿಕಾರಾರ್ಹವಲ್ಲ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಒದಗಿಸದಿರುವ ಮತ್ತು ಅತ್ಯಾಚಾರಿಗಳು ನಿರ್ಭಯವಾಗಿ ಓಡಾಡಲು ಅವಕಾಶ ನೀಡಿರುವ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು" ಎಂದು ವಾಗ್ದಾಳಿ ನಡೆಸಿದ್ದಾರೆ.
India hangs its head in shame as another one of its daughters is brutally gang raped.
Prime Minister, your silence is unacceptable. Shame on a government that leaves India’s women unprotected and afraid and allows rapists to walk free.
— Rahul Gandhi (@RahulGandhi) September 18, 2018
ಈ ಹಿಂದೆ ಬಿಹಾರ ಮತ್ತು ಉತ್ತರಪ್ರದೇಶದ ಆಶ್ರಯ ಮನೆಗಳ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾಣಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸುವ ಮೂಲಕ ಹರಿಯಾಣದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಕಾಂಗ್ರೆಸ್ ಸೋಮವಾರ ಒತ್ತಾಯಿಸಿದೆ.