ಚುನಾವಣಾ ದಿನಾಂಕ ಸೋರಿಕೆ ವಿರೋಧಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ
ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳ್ವಿಯಾ ವಿರುದ್ಧ ಎಫ್ಐಅರ್ ದಾಖಲಿಸಬೇಕು- ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್
ನವದೆಹಲಿ: ಚುನಾವಣಾ ದಿನಾಂಕ ಸೋರಿಕೆ ವಿರೋಧಿಸಿ ನವದೆಹಲಿಯಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ, ಯೂತ್ ಕಾಂಗ್ರೆಸ್ ಕಚೇರಿಯಿಂದ ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ಕೈಗೊಂಡಿರುವ ಪ್ರತಿಭಟನೆ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಚುನಾವಣಾ ಆಯೋಗಕ್ಕೂ ಮೊದಲೇ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿದ್ದಾರೆ.
ಬಿಜೆಪಿಯವರಿಗೆ ಪ್ರಜಾತಂತ್ರ ವ್ಯವಸ್ಥೆ ಬಗ್ಗೆ ಕಾಳಜಿ ಇಲ್ಲ ಎಂದು ಆಪಾದಿಸಿರುವ ಅವರು, ಬಿಜೆಪಿ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಂಡಿದೆ. ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಬೇಕು, ಜೊತೆಗೆ ಚುನಾವಣಾ ಆಯೋಗ ಕೂಡ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.