`ಪ್ರಜಾಪ್ರಭುತ್ವ ಉಳಿಸಿ` ಎಂದು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಆರೋಪಿಸಿದ್ದಾರೆ.
ಬೆಂಗಳೂರು: ಭಾರತೀಯ ಜನತಾ ಪಕ್ಷದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ 'ಪ್ರಜಾಪ್ರಭುತ್ವವನ್ನು ಉಳಿಸಿ' ಎಂದು ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಆರೋಪಿಸಿದ್ದಾರೆ.
ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ನಗರದ ಪ್ರಸಿದ್ಧ ಕಬ್ಬನ್ ಪಾರ್ಕ್‌ನಿಂದ ಪ್ರಾರಂಭವಾದ 'ಸೇವ್ ಡೆಮಾಕ್ರಸಿ' ಪ್ರತಿಭಟನಾ ಮೆರವಣಿಗೆ ರಾಜ್ ಭವನದವರೆಗೂ ಸಾಗಿತು.
"ಕರ್ನಾಟಕವನ್ನು ಉಳಿಸಿ ಪ್ರಜಾಪ್ರಭುತ್ವವನ್ನು ಉಳಿಸಿ" ಎಂಬ ಘೋಷ ವಾಕ್ಯ ಬರೆದಿದ್ದ ಬ್ಯಾನರ್‌ಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಣೆಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು.