ನವದೆಹಲಿ/ಪಾಟ್ನಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರ ಬಿಜೆಪಿ, ಜನತಾ ದಳದ ಯುನೈಟೆಡ್ (ಜೆಡಿಯು) ಮತ್ತು ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ನಡುವಿನ ಸ್ಥಾನ ಹಂಚಿಕೆಯನ್ನು ಘೋಷಿಸಿದೆ. 2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು 17-17 ಮತ್ತು ಎಲ್ಜೆಪಿ ಆರು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಇದರೊಂದಿಗೆ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ರಾಜ್ಯಸಭೆಗೆ ಕಳುಹಿಸಲಾಗುವುದು ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಜೆಡಿ (ಯು) ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಎಲ್ಜೆಪಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಈ ಸಂದರ್ಭದಲ್ಲಿ ಯಾವ ಪಕ್ಷ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಕೈಗೊಂಡಿಲ್ಲ ಎಂದು ಹೇಳಿದರು.


ಈ ಮೈತ್ರಿಯಲ್ಲಿ ಬಿಜೆಪಿ ಹೆಚ್ಚು ತ್ಯಾಗ ಮಾಡಿದೆ. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ 30, ಎಲ್ಜೆಪಿ ಏಳು ಮತ್ತು ಆರ್​ಎಲ್​ಎಸ್​ಪಿ ಮೂರು ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಈ ಚುನಾವಣೆಯಲ್ಲಿ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಯು ಜತೆಗೂಡಿದ ನಂತರ, ಬಿಜೆಪಿ ಹೆಚ್ಚಿ ಸ್ಥಾನವನ್ನು ಜೆಡಿಯುಗೆ ಬಿಟ್ಟು ಕೊಟ್ಟಿದೆ.