ಮಹಾರಾಷ್ಟ್ರ: IPL-2022ರ ಪಂದ್ಯಾಟದಲ್ಲಿ ಸತತ ಗೆಲುವುಗಳಿಂದ ಅಬ್ಬರಿಸುತ್ತಿರುವ ಗುಜರಾತ್ ಟೈಟನ್ಸ್ ತಂಡವು ಇಂದು ಸನ್‌ರೈಸರ್ಸ್ ಹೈದರಾಬಾದ್‌ಗೆ ಸವಾಲು ನೀಡಲಿದೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಹ್ಯಾಟ್ರಿಕ್ ಗೆಲುವಿನ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇನ್ನು ಮಹಾರಾಷ್ಟ್ರದ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹಣಾಹಣಿಯಲ್ಲಿ ಯಾರಿಗೆ ಜಯ ಲಭಿಸಲಿದೆ ಎಂಬುದು ಕಾದುನೋಡಬೇಕಾಗಿದೆ.
ಇದನ್ನು ಓದಿ: ಇಂದು ಪ್ರಧಾನಿ ಮೋದಿ-ಯುಎಸ್ ಅಧ್ಯಕ್ಷ ಜೋ ಬೈಡೆನ್ ಮಹತ್ವದ ಸಭೆ
ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವಿನ ನಗೆ ಬೀರಿದ್ದ ಹೈದರಾಬಾದ್ ತಂಡ ಉತ್ತಮ ಲಯವನ್ನು ಮುಂದುವರಿಸುವ ಛಲದಲ್ಲಿದೆ. ಇನ್ನು ಪಂಜಾಬ್ ಎದುರಿನ ಪಂದ್ಯದಲ್ಲಿ ಗುಜರಾತ್ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ವೃತ್ತಿಜೀವನದ ಗರಿಷ್ಠ ಮೊತ್ತ ಗಳಿಸಿದ್ದರು. ಹೀಗಾಗಿ ಈ ಬಾರಿಯ ಆಟದಲ್ಲೂ ಸಾಧನೆ ತೋರಲಿದ್ದಾರೆಯೇ ಎಂದು ಜನರು ನಿರೀಕ್ಷಿಸುತ್ತಿದ್ದಾರೆ.
ಇದನ್ನು ಓದಿ: IPL 2022: ಲಕ್ನೋ ವಿರುದ್ಧ ರಾಜಸ್ತಾನ ರಾಯಲ್ಸ್ ಗೆ 3 ರನ್ ಗಳ ರೋಚಕ ಜಯ
ಲಾಕಿ ಫರ್ಗ್ಯುಸನ್ ಮತ್ತು ಮೊಹಮ್ಮದ್ ಶಮಿ ಬೌಲಿಂಗ್‌ನಲ್ಲಿ ಹೈದರಾಬಾದ್‌ಗೆ ಸವಾಲಾಗುವ ಸಾಧ್ಯತೆಯಿದೆ. ಇನ್ನು ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮತ್ತು ಅಭಿಷೇಕ್ ಶರ್ಮಾ ಕೂಡ ಮಿಂಚುವ ನಿರೀಕ್ಷೆಯಿದೆ
ಪಂದ್ಯ ಆರಂಭ: ರಾತ್ರಿ 7.30 ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.