ರಾಜ್ಯದ ಎಲ್ಲಾ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಲು ಬದ್ದವಾಗಿರುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ, ಜೂನ್ 11 ರಿಂದ ಉಚಿತ ಬಸ್ ಸೇವೆ ಪ್ರಾರಂಭವಾಗಲಿದೆ. ಓಲ್ವೋ, ಐಷಾರಾಮಿ ಬಸ್ ಗಳನ್ನ ಹೊರತುಪಡಿಸಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಉಚಿತ ಬಸ್ ಸೇವೆ ಲಭ್ಯವಿದೆ ಎಂದು ಸ್ಪಷ್ಟಪಡಿಸಿದೆ.
ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಜೂನ್ 3 ರಿಂದ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಿದ್ದು, ಜೂನ್ 7 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಕರ್ನಾಟಕದಲ್ಲಿ, ಎಲ್ಲಾ ಐದು ದಿನಗಳಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ
ಮೈಸೂರಿನಿಂದ ಬೆಂಗಳೂರಿಗೆ ಕೆಲಸ ಮುಗಿಸಿ ಮರಳುತ್ತಿದ್ದ ಕರಿಕಲ್ ತಾಂಡ್ಯ ನಿವಾಸಿ ಪವನ್, ಟೋಲ್ ಪಡೆಯುವ ವಿಚಾರದಲ್ಲಿ ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿದ್ದಕ್ಕೆ ಸಿಬ್ಬಂದಿ ಪವನ್ನನ್ನು ಹತ್ಯೆ ಮಾಡಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತು ವಿಧಿಸಿದ ಹಿನ್ನೆಲೆ, ಸಿದ್ದರಾಮಯ್ಯ ಸರ್ಕಾರದ ವಿರುದ್ದ ಬಿಜೆಪಿ ಅಧ್ಯಕ್ಷ ಉಮೇಶ್ ನೇತೃತ್ವದಲ್ಲಿ ಮಂಡ್ಯದಲ್ಲಿ ವಿಶ್ವೇಶ್ವರಯ್ಯ ಪ್ರತಿಮೆ ಮುಂದೆ ಪ್ರೊಟೆಸ್ಟ್ ನಡೆಸಿದ್ದಾರೆ.
ನವಲಗುಂದ ತಾಲ್ಲೂಕಿನ ಚಿಲಕವಾಡಾ ಗ್ರಾಮದ ವಾಸಿ ಯಂಕ್ಕಪ್ಪ ಪೂಜಾರರವರು ನವಲಗುಂದದ ಭೀರೇಶ್ವರ ಸಹಕಾರಿ ಪತ್ತಿನ ಸಂಘದಲ್ಲಿ ದಿ:04/01/2021 ರಂದು 1 ಲಕ್ಷ 68 ಸಾವಿರ ಹಾಗೂ 50 ಸಾವಿರರೂ. ಗಳನ್ನು ಒಂದು ವರ್ಷದ ಖಾಯಂ ಠೇವಣಿಗೆ ಇಟ್ಟಿದ್ದರು.ಒಂದು ವರ್ಷದಅವಧಿ ಮುಗಿದರೂ ಎದುರುದಾರ ಸಂಘದವರು ದೂರುದಾರರಿ ಗೆಠೇವಣಿ ಮತ್ತು ಅದರ ಮೇಲಿನ ಬಡ್ಡಿ ಹಣಕೊಟ್ಟಿರಲಿಲ್ಲ.
ಸರ್ಕಾರಿ ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಡೆದಿದೆ.ಘಾಟಿಯ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸವಾರನು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಧಾರವಾಡ ಗ್ರಾಮೀಣಭಾಗದ ಅನೇಕ ಹಳ್ಳಿಗಳಲ್ಲಿ ಅನಧಿಕೃತವಾಗಿ ಇಸ್ಪೆಟ್ ಅಡ್ಡೆ, ಮನೆಗಳಲ್ಲಿ ಸಾರಾಯಿ ಮಾರಾಟ ಮಾಡುತ್ತಿರುವ ಕುರಿತು ಗ್ರಾಮಸ್ಥರಿಂದ ವಿಶೇಷವಾಗಿ ಮಹಿಳೆಯರಿಂದ ದೂರುಗಳು ಬಂದಿದ್ದು, ಪೆÇಲೀಸ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಇಂದಿನಿಂದಲೇ ಕಾರ್ಯಚರಣಿ ಕೈಗೊಂಡು ಅಕ್ರಮಗಳನ್ನು ತಕ್ಷಣದಿಂದ ನಿಲ್ಲಿಸಲು ಕ್ರಮ ವಹಿಸಬೇಕೆಂದು ಶಾಸಕ ವಿನಯ ಕುಲಕರ್ಣಿ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕೋವಿಡ್ ಇದ್ದಾಗ ಚುನಾವಣೆ ನಡೆಸೋದು ಸೂಕ್ತವಲ್ಲ,ಆದಾದ ನಂತರವಾದ್ರೂ ಎಲೆಕ್ಷನ್ ನಡೆಸಬೇಕಿದ್ದ ಅಂದಿನ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ಎಲೆಕ್ಷನ್ ಮಾಡಲೇ ಇಲ್ಲ,ಆಮೇಲೆ ಚುನಾವಣೆ ಮಾಡಿಯೇ ಬಿಡ್ತೀವಿ ಅಂತ 198 ವಾರ್ಡ್ಗಳನ್ನು 243 ವಾರ್ಡ್ಗಳಾಗಿ ಡೀಲಿಮಿಟ್ ಮಾಡಿದ್ರು, ಇದೀಗ ಬಿಜೆಪಿ ವಾರ್ಡ್ ವಿಂಗಡನೆ ಪ್ಲಾನ್ಗೆ ಕಾಂಗ್ರೆಸ್ ಸರ್ಕಾರ ಠಕ್ಕರ್ ಕೊಡೋಕೆ ತಯಾರಿ ಆರಂಭಿಸಿದೆ.