ಮೇ 20 ರಂದು ಎಂಟು ಕ್ಯಾಬಿನೆಟ್ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಕ್ರಮವಾಗಿ ಸಿಎಂ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಮೇ 27 ರಂದು 24 ಹೆಚ್ಚುವರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು.
ಶಾಸಕರು, ಎಂಎಲ್‌ಸಿಯೂ ಅಲ್ಲದ ಬೋಸರಾಜ್ ಅವರಿಗೆ ಸಚಿವ ಸ್ಥಾನ ಹೇಗೆ ಸಿಕ್ತು ಎಂದು ಒಳಗೊಳಗೆ ಕೈ ಪಡೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ವಿಚಾರ ರಾಜ್ಯ ರಾಜಕೀಯದಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸ್ವತಃ ಜನರಿಗೂ ಈ ಕುರಿತು ಶಾಕ್ ಉಂಟಾಗಿದ್ದು, ಯಾರು ಈ ಬೋಸರಾಜು ಅಂತ ತಲೆಕಡಿಸಿಕೊಂಡಿದ್ದಾರೆ.
ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು, ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡರು.
Speaker UT Khadar : ರಾಜ್ಯದ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ. ಖಾದರ್ ಅವರು ಆಯ್ಕೆಯಾಗಿದ್ದಾರೆ. ತಡರಾತ್ರಿ ಎಐಸಿಸಿ ನಾಯಕರು ನಡೆಸಿದ ಸಭೆಯ ಬಳಿಕ ಖಾದರ್ ಅವರು ಸಭಾಪತಿ ಸ್ಥಾನವನ್ನು ಅಲಂಕರಿಸಲು ಸಮ್ಮತಿ ಸೂಚಿಸಿದ್ದಾರೆ.
ಲೋಕಸಭೆ ನಂತರವೂ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರು 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಇದರಿಂದ ಡಿ.ಕೆ. ಶಿವಕುಮಾರ್ ಅವರು ಡಿಸಿಎಂ ಸ್ಥಾನದಲ್ಲೇ 5 ವರ್ಷ ಇರಲಿದ್ದಾರಾ ಎಂಬ ಅನುಮಾನ ಮೂಡುತ್ತಿದೆ.
ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವು ಇನ್ನೂ ಸುದ್ದಿಯಲ್ಲಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಬಿಜೆಪಿಯನ್ನು ಭ್ರಷ್ಟವೆಂದು ಬಣ್ಣಿಸಿರುವ ಕಾಂಗ್ರೆಸ್ ಸೋಮವಾರ ವಿಧಾನಸೌಧವನ್ನು ಗೋಮೂತ್ರದಿಂದ ಶುದ್ಧೀಕರಿಸಿದೆ.
#SidduVsDKSVsCong: ಜನಾಧಿಕಾರ ನೀಡಿದ್ದು ಷರತ್ತುಗಳ ಮೇಲೆ ಸರ್ಕಾರ ನಡೆಸುವುದಕ್ಕಲ್ಲ ಎಂಬುದನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅರಿತುಕೊಳ್ಳಬೇಕು ಎಂದು ಬಿಜೆಪಿ ಟೀಕಿಸಿದೆ.
Congress Five Guarantees: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿತ್ತು. ಅದರಂತೆ ತನ್ನ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ.
Congress Five Guarantees: ಉಚಿತ ಯೋಜನೆಗಳನ್ನು ಯಾರಿಗೆ ಕೊಡಬೇಕು, ಫಲಾನುಭವಿಗಳ ಹೆಸರಲ್ಲಿ ಖಾತೆ ಇರಬೇಕು, ಅದಕ್ಕೆ ಲೆಕ್ಕ ಬೇಕು. ಅಕೌಂಟೆಬಿಲಿಟಿ ಇರಬೇಕು. ಬಳಿಕ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು.
Karnataka CM Oath Taking Ceremony: ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ಪ್ರಮುಖವಾಗಿ ನಮ್ಮ ಪ್ರಣಾಳಿಕೆಯ ಮೂಲಕ ಅನೇಕ ಭರವಸೆ ನೀಡಿದ್ದೇವೆ. ಎಲ್ಲಾ ಭರವಸೆಗಳನ್ನು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2013-2018 ರಲ್ಲಿ ಕೊಟ್ಟ ಮಾತು ಈಡೇರಿಸಿದ್ದೇವೆ. ಈ ಚುನಾವಣೆಯಲ್ಲಿಯೂ ಸಹ ನಮ್ಮ ಪ್ರಣಾಳಿಕೆ ಮೂಲಕ ಅನೇಕ ಭರವಸೆ ನೀಡಿದ್ದೇವೆ. ಎಲ್ಲಾ ಭರವಸೆ ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಭಾಗ್ಯಗಳ ಬಗ್ಗೆ ಮಾತನಾಡಿದರು.
ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನುಡಿದಂತೆ ನಡೆಯುತ್ತೇವೆ. ಮುಂದಿನ ಕೆಲವೇ ಗಂಟೆಗಳಲ್ಲಿ ರಾಜ್ಯದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಈ ಐದೂ ಗ್ಯಾರಂಟಿ ಯೋಜನೆಗಳು ಕಾನೂನು ರೂಪಪಡೆದು ಜಾರಿಗೆ ಬರಲಿದೆ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
Congress 5 guarantees list : ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ 5 ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಣೆ ಮಾಡಿತ್ತು. ಒಂದು ವೇಳೆ ಅವು ಯಾವುವು..? ಅವುಗಳ ಲಾಭಗಳೇನು ಅಂತ ನಿಮಗೆ ಗೊತ್ತಿಲ್ಲವಾದ್ರೆ, ಇನ್ನೋಮ್ಮೆ ನೋಡಿ..
ನಾವು ಐದು ಯೋಜನೆಗಳನ್ನ ಘೋಷಿಸಿದ್ವಿ, ಮಹಿಳೆಯರಿಗೆ 2000 ರೂ., 200 ಯೂನಿಟ್ ವಿದ್ಯುತ್ ಉಚಿತ, 10 ಕೆ.ಜೆ. ಅಕ್ಕಿ, ಇಡೀ ರಾಜ್ಯದಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಪದವೀಧರರಿಗೆ 3೦೦೦, ಡಿಪ್ಲಮೋದಾರರಿಗೆ 1500 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದೆವು. ಈಗ ಕೊಟ್ಟ ಮಾತಿನಂತೆ ನಾವು ನಡೆಯುತ್ತೇವೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಬೆಂಗಳೂರು, ಮೇ 20 : ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು.
CM Siddaramaiah Oath : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಸೇರಿದಂತೆ ಒಟ್ಟು 8 ಜನರು ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು. ಈ ಕುರಿತು ಫೋಟೋಸ್ ಇಲ್ಲಿವೆ ನೋಡಿ..
ನಯನಾ ಮೋಟಮ್ಮ ಅವರ ಖಾಸಗಿ ಫೋಟೋಸ್‌ಗಳನ್ನು ಒಳಗೊಂಡ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಯನ ಅವರು ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕಿಯೂ ಸಹ ಹೌದು.
ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನವನ್ನು ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಾವು ರಾಜ್ಯದ ಜನತೆಗೆ ನೀಡಿದ್ದ ಐದು 'ಗ್ಯಾರಂಟಿಗಳ' ಆಶ್ವಾಸನೆಯನ್ನು ಮರೆಯಬೇಡಿ ಎಂದು ರಾಜ್ಯ ಬಿಜೆಪಿ ಟ್ಟೀಟ್ ಮಾಡುವ ಮೂಲಕ ಕಾಂಗ್ರೆಸ್‌ಗೆ ಟಾಂಗ್ ನೀಡಿದೆ.
ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ. ನಿನ್ನೆ ರಾತ್ರಿಯೇ ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ರೈಲಿನಲ್ಲಿ ಪ್ರಯಾಣಿಸಿ ರಾಜಧಾನಿಗೆ ಆಗಮಿಸಿದ್ದಾರೆ.
ಇಂದು ಮ ಮಧ್ಯಾಹ್ನ ಸರಿಯಾಗಿ 12:30 ಗಂಟೆಗೆ ಕೃತ್ತಿಕಾ ನಕ್ಷತ್ರ, ಅಜಗಂಡ ನಾಮಯೋಗ, ಸಿಂಹಲಗ್ನದಲ್ಲಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಜೊತೆ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಹಾಗೂ 8 ಜನ ಸಚಿವರ ಪದಗ್ರಹಣ ನಡೆಯಲಿದೆ.