ಬೆಳಗಾವಿ: ಕರ್ನಾಟಕದಲ್ಲಿ ಯಾವ ಕಾಲದಲ್ಲೂ ಇಷ್ಟೊಂದು ಭ್ರಷ್ಟಾಚಾರ, ದುರಾಡಳಿತ ಇರಲಿಲ್ಲವೆಂದು ಬಿಜೆಪಿ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಯುವಧ್ವನಿ ಸಮಾವೇಶ ಮತ್ತು ರ‍್ಯಾಲಿಯಲ್ಲಿ ಮಾತನಾಡಿರುವ ಅವರು, ‘ಈಗ ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ನಡೆಯುತ್ತಿದೆ, ಹೀಗೆಂದು ಹೇಳಿದ್ದು ಸ್ವತಃ ಈ ಸಮಸ್ಯೆ ಎದುರಿಸುತ್ತಿರುವ ಗುತ್ತಿಗೆದಾರರು! ಅವರು ನೇರವಾಗಿ ಪ್ರಧಾನಮಂತ್ರಿಗಳಿಗೆ, ಅಮಿತ್ ಶಾ ಅವರಿಗೇ ಪತ್ರ ಬರೆದು 40% ಕಮಿಷನ್ ಬಗ್ಗೆ ದೂರಿದ್ದಾರೆ!’ ಎಂದು ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಹುಲ್ ಗಾಂಧಿಯವರು 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ಪೊಲೀಸರು ಸಾಕ್ಷಿ ಕೇಳಿಕೊಂಡು ಅವರ ಮನೆ ಮುಂದೆ ಹೋಗಿದ್ದಾರೆ. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡಿದರೂ ತನಿಖೆ ನಡೆಸುತ್ತಿಲ್ಲ! ₹100 ಕಾಮಗಾರಿ ಇದ್ದರೆ ₹200 ಅಂದಾಜು ನಿಗದಿ ಮಾಡಿ ಕಮಿಷನ್ ಪಡೆಯುತ್ತಿದ್ದಾರೆ!’ ಎಂದು ಖರ್ಗೆ ಕಿಡಿಕಾರಿದ್ದಾರೆ.


Ayodhya Ram Mandir: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ


‘ಪ್ರಧಾನಿ ಮೋದಿಯವರು ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ಇದೆ ಎಂದಿದ್ದಾರೆ. ಹಾಗಾದರೆ ನಿಮ್ಮ ಜೆಪಿ ನಡ್ಡಾರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ? ಅದಾನಿ ಅವರ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ಕಡತದಿಂದ ತೆಗೆದು ಹಾಕುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ, ಜಾತಿವಾದ, ತಾರತಮ್ಯವಿದೆ ಎಂದು ಹೇಳಿದರೆ ಅದು ತಪ್ಪಾ?’ ಎಂದು ಖರ್ಗೆ ಪ್ರಶ್ನಿಸಿದ್ದಾರೆ.


Karnataka Congress : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 100 ಅಭ್ಯರ್ಥಿಗಳು ಅಂತಿಮ!


ಚುನಾವಣೆಯಲ್ಲಿ 18ಕ್ಕೆ 18 ಸ್ಥಾನಗಳಲ್ಲೂ ಗೆಲ್ಲಿಸುತ್ತೀರಿ ಎಂದು ನಂಬುತ್ತೇನೆ. ಈ ಬಾರಿ ವಾತಾವರಣವೂ ಅದಕ್ಕೆ ಪೂರಕವಾಗಿದೆ’ ಎಂದು ಖರ್ಗೆ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.