Karnataka Assembly Election 2023 : ಅಭಿವೃದ್ಧಿಗೆ ಆದ್ಯತೆ : ಕೊವಿಡ್ ಬಗ್ಗೆ ನಾವು ಯಾರೂ ಯೋಚಿಸಿರಲಿಲ್ಲ. ಅದರ ಅನುಭವದ ಆಧಾರದ ಮೇಲೆ ಈ ಪ್ರಣಾಳಿಕೆ ಮಾಡಿದ್ದೇವೆ. ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರೈತರಿಗೇ ಈಗಾಗಲೇ ಬಜೆಟ್ ನಲ್ಲಿ ಯೋಜನೆಗಳನ್ನು ಘೋಷಣೆ ಮಾಡಿದ್ದೇವೆ. ಒಂದು ಸಾವಿರ ಕೃಷಿ ಉತ್ಪಾದನಾ ಕೇಂದ್ರಗಳನ್ನು ತೆರೆಯುವುದು, ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುವ ಸಂಕಲ್ಪ, ಸಿರಿ ಧಾನ್ಯಕ್ಕೆ ಅತಿ ಹೆಚ್ಚು ಒತ್ತುಕೊಡುವ ಕೆಲಸ ಮಾಡಲಾಗಿದೆ.
ನಗರ ಪ್ರದೇಶದಲ್ಲಿ 5 ಲಕ್ಷ ಮನೆ, ಗ್ರಾಮೀಣ ಪ್ರದೇಶಗಳಲ್ಲಿ 10 ಲಕ್ಷ ಮನೆ ನಿರ್ಮಾಣ ಪ್ರತಿ ಮನೆ ನಿರ್ಮಾಣ 5 ಲಕ್ಷ ರೂ. ನೀಡಲಾಗುವುದು. ಪಡಿತರದಲ್ಲಿ ಅಕ್ಕಿಯ ಜೊತೆಗೆ ಐದು ಕೆಜಿ ಸಿರಿ ಧಾನ್ಯ ನೀಡಲಾಗುವುದು. ಅರ್ಧ ಲೀ ಟರ್ ಹಾಲು ಕೊಡಲಾಗುವುದು. ಬಿಪಿಎಲ್ ಕಾರ್ಡ್ ದಾರರಿಗೆ ಆಯುಷ್ಮಾನ್ ಭಾರತ ಯೋಜನೆ ಅಡಿ 10 ಲಕ್ಷ ರೂ ವಿಮೆ ನೀಡಲಾಗುವುದು. ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದರು.
ಇದನ್ನೂ ಓದಿ-ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಕಿಶನ್ ರೆಡ್ಡಿ..!
ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ
ಜನರಿಂದ ಜನರಿಗೋಸ್ಕರ ಇರುವ ಪ್ರಜಾ ಪ್ರಣಾಳಿಕೆ ಇದಾಗಿದೆ. ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ (ವೈಬ್ರಂಟ್ ಸ್ಟೇಟ್) ಮಾಡುವ ಗುರಿ ನಮ್ಮದು. ಪ್ರಧಾನ ಮಂತ್ರಿ ಯ ಐದು ಟ್ರಿಲಿಯನ್ ಡಾಲರ್ ಎಕಾನಮಿಯ ಗುರಿ ಮುಟ್ಟಲು ಐಟಿ ಬಿಟಿ, ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಇದು ಜನರ ಜನಪರ ಪ್ರಣಾಳಿಕೆ ಇದಕ್ಕೆ ಕರ್ನಾಟಕದ ಜನರು ಗಮನಿಸಿ ಬಿಜೆಪಿಗೆ ಬೆಂಬಲ ಕೊಡುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಮುಖ್ಯಮಂತ್ರಿಗಳು.ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ-ಆರ್ ಆರ್ ನಗರ ಕ್ಷೇತ್ರದಲ್ಲಿ ಪಾಕಿಸ್ತಾನ ಧ್ವಜವಿರುವ ಕರಪತ್ರ ಹಂಚಿಕೆ; ಮುನಿರತ್ನ ವಿರುದ್ಧ ಕುಸುಮಾ ಗರಂ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ