ಬೆಂಗಳೂರು: ಕಾಂಗ್ರೆಸ್ಸಿನ ಭ್ರಷ್ಟ ಬೇರುಗಳು ಎಷ್ಟೇ ಆಳಕ್ಕೆ ಹೋಗಿದ್ದರು ಅದನ್ನು ಸಿಎಂ ಬಸವರಾಜ್ ಬೊಮ್ಮಾಯಿಯವರ ನೇತೃತ್ವದ ಸರ್ಕಾರ ಮೂಲೋತ್ಪಾಟನೆ ಮಾಡಲಿದೆ. ಜನತೆಗೆ ಪಾರದರ್ಶಕ ಆಡಳಿತ ನೀಡುವ ಸಲುವಾಗಿ ಕಾಂಗ್ರೆಸ್‌ನ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಒಪ್ಪಿಸಲಿದೆ. ಬಿಜೆಪಿ ಯಾವತ್ತಿಗೂ ಭ್ರಷ್ಟರ ಸಿಂಹಸ್ವಪ್ನವೆಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ಹೂತಿಟ್ಟ ಭ್ರಷ್ಟಾಚಾರದ ಬೇರುಗಳನ್ನು ಸಿಎಂ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಬುಡಮೇಲು ಮಾಡಿ, ಜನರಿಗೆ ಪಾರದರ್ಶಕ ಆಡಳಿತ ನೀಡುತ್ತಿದೆ. ಪ್ರಧಾನಿ ಮೋದಿಯವರ ದಕ್ಷ ಆಡಳಿತವು ಎಲ್ಲಾ ಯೋಜನೆಗಳಲ್ಲೂ 'ಕೈ' ಆಡಿಸುವ ಭ್ರಷ್ಟರಿಗೆ ತಕ್ಕ ಶಾಸ್ತಿ ಮಾಡುತ್ತಿದೆ’ ಎಂದು ಕುಟುಕಿದೆ.


ಬಿಬಿಎಂಪಿ ಅಧಿಕಾರಿಗಳಿಂದ ಎಲೆಕ್ಷನ್ ಜಾಥಾ


‘ತನ್ನ ಆಡಳಿತಾವಧಿಯಲ್ಲಿ ಕಾಂಗ್ರೆಸ್ ರಾಜ್ಯವನ್ನು ಅಕ್ಷರಶಃ ಲೂಟಿ ಮಾಡಿತು. ಅರ್ಕಾವತಿ ಅವ್ಯವಹಾರ, ಮರಳು, ಗಣಿ ಮಾಫಿಯಾಗಳಿಂದ ಕೋಟ್ಯಂತರ ರೂಪಾಯಿ ಹಣ ಲಪಟಾಯಿಸಿತು. ಹಗರಣ ಮುಚ್ಚಿಹಾಕಲು ಸಿದ್ದರಾಮಯ್ಯ ಲೋಕಾಯುಕ್ತದ ಕತ್ತನ್ನೇ ಹಿಸುಕಿದರು. ಆದರೆ ಸಿಎಂ ಬೊಮ್ಮಾಯಿಯವರ ಸರ್ಕಾರ ಪಾರದರ್ಶಕತೆಯನ್ನು ಮರಳಿ ಸ್ಥಾಪಿಸುತ್ತಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಬಿಜೆಪಿ ಟ್ವೀಟ್ ಮಾಡಿದೆ.


ಬಿ.ಎಸ್.ಯಡಿಯೂರಪ್ಪ ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ: ಕಾಂಗ್ರೆಸ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.