ಬೆಂಗಳೂರು: ಯಾರೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿರುತ್ತಾರೆ ಅಂತಹವರ ಮೇಲೆ ದಾಳಿ ಆಗುತ್ತಿದೆ. ನಿನ್ನೆ ಕೂಡ ಕೆಲವರು ನನ್ನ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳು ನೀನು ಭಾರತ ಜೋಡೋ ಯಾತ್ರೆಗೆ ಕೋಟಿಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿದ್ದಾರೆ. ಅವರು ಎಷ್ಟಾದರೂ ದಾಳಿ ಮಾಡಿ ಬೆದರಿಕೆ ಹಾಕಲಿ, ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಉತ್ತಮ ಆಡಳಿತ ನೀಡುತ್ತೇವೆ. ರಾಜ್ಯದ ಜನ ಬಿಜೆಪಿ ಆಡಳಿತಕ್ಕೆ ಬೇಸತ್ತಿದ್ದು, ರಾಜ್ಯದಲ್ಲಿ ಬದಲಾವಣೆ ತರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ,ಶಿವಕುಮಾರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಅವರು ತಮ್ಮ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು


‘ಕಾಂಗ್ರೆಸ್ ಪಕ್ಷ ರಘುನಾಥ ನಾಯ್ಡು ಅವರಿಗೆ ಟಿಕೆಟ್ ನೀಡಿದ್ದು, ಅವರಿಗೆ ಅನೇಕ ಬಿಜೆಪಿ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ. ಪದ್ಮನಾಭನಗರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ. ನಾನು ಕೂಡ ಅವರ ಪರವಾಗಿ ಪ್ರಚಾರ ಮಾಡುತ್ತೇನೆ. ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗುತ್ತಿದ್ದಾರೆ’ ಎಂದು ತಿಳಿಸಿದರು.


ಬಿ.ವಿ. ನಾಯ್ಕ್ ಅವರು ನಿರಾಣಿ ಅವರನ್ನು ಭೇಟಿ ಮಾಡಿ ಬಿಜೆಪಿ ಸೇರುವ ಬಗ್ಗೆ ಚರ್ಚೆ ಇದ್ದು, ಅವರ ಸೊಸೆಗೆ ನೀಡಲಾಗಿರುವ ಟಿಕೆಟ್ ಅನ್ನು ಬೇರೆಯವರಿಗೆ ನೀಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ‘ಅವರ ಸೊಸೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆ. ಅವರ ಬದಲಿಗೆ ಬೇರೆಯವರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ನನ್ನವರೆಗೂ ಬಂದಿಲ್ಲ. ಅಲ್ಲಿ ನಮ್ಮ ಅಭ್ಯರ್ಥಿ ಬಲಿಷ್ಠಯಾಗಿದ್ದಾರೆ’ ಎಂದರು.


ಎಸ್.ಆರ್ ಪಾಟೀಲ್ ಅವರನ್ನು ಬಿಜೆಪಿ ಸೆಳೆಯಲು ಪ್ರಯತ್ನಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಕಳೆದ ಮೂರು ತಿಂಗಳಿಂದ ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಎಸ್.ಆರ್ ಪಾಟೀಲ್ ಅವರು ಹಿರಿಯ ನಾಯಕರು. ನಾವು ಅವರ ಜತೆ ಮಾತನಾಡಿದ್ದೇವೆ’ ಎಂದು ತಿಳಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.