ಹುಬ್ಬಳ್ಳಿ: ಕ್ವಾಂಯ್ಕ್ ಅಂದ್ರೆ ಎನ್ ಕೌಂಟರ್ ಭಾರತದ ವಿರುದ್ಧ ಮಾತಾಡಿದ್ರೆ ಢಂ ಢಂ ರೋಡ್ ಮೇಲೆಯೇ ಡಿಷ್ಕ್ಯಾಂ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಅವರು ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಹಿರೇಹರಕುಣಿ ಗ್ರಾಮದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ- ಸತತ ಸುತ್ತಾಟ: ಲೋ ಬಿಪಿಯಿಂದ ಬಳಲಿದ ವರುಣಾ, ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಯುಪಿ ಯಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಅವರ ಮಾದರಿಯೇ ರಾಜ್ಯದಲ್ಲಿ ಜಾರಿಗೆ ಬರಲಿದೆ.ಯುಪಿಯಲ್ಲಿ ಇಬ್ಬರು ಅಣ್ಣ ತಮ್ಮಂದಿರ ಎನ್ ಕೌಂಟರ್ ಆಯ್ತು, ಹೀಗಾಗಿ ಕೆಲವರು ಜೈಲಿನಿಂದ ಹೊರಗೆ ಬರೋಕು ಹೆದ್ರಿತಿದಾರೆ.ಯುಪಿಯಲ್ಲಿ ವಾಹನಗಳು ಪಲ್ಟಿಯಾಗುತ್ತಲೆ ಇರುತ್ತೆ.ರೌಡಿಗಳ ಹರಣವಾಗುತ್ತಲೇ ಇರುತ್ತೆ ಎಂದು ಅವರು ಹೇಳಿದರು.
ಇದನ್ನೂ ಓದಿ- ನಮ್ಮ ಸರ್ಕಾರದ ಯೋಜನೆಗಳನ್ನೇ ಕಾಂಗ್ರೆಸ್ ಕಾಪಿ ಮಾಡಿದೆ – ಸಿಎಂ ಬೊಮ್ಮಾಯಿ
ಇದೆ ಮಾದರಿಯಲ್ಲಿ ಕರ್ನಾಟಕದಲ್ಲಿ ಯಾರಾದ್ರೂ ಹಾರಾಡಿದ್ರೆ ಎನ್ ಕೌಂಟರ್ ಖಚಿತ ಹಿಂದೂಗಳ ಬಗ್ಗೆ, ದೇಶದ ಬಗ್ಗೆ ಮಾತಾಡಿದ್ರೆ ಢಂ ಢಂ ಖಚಿತ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ದಾರೆ.
ಮೋದಿ ಕುರಿತ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕಿಡಿಕಾರಿದ ಯತ್ನಾಳ್, ಮೋದಿ ಬಗ್ಗೆ ಖರ್ಗೆ ಅವರ ಮಗ ಮಾತಾಡಿದ್ದಾನೆ.ನಾನು ನೋಡಿದೆ, ಊರ ಬದ್ಮಾಷರು ನಿಮ್ಮ ಪಾರ್ಟಿಯಲ್ಲಿದ್ದಾರೆ, ನಿಮ್ಮ ಪಕ್ಷದಲ್ಲಿಯೇ ಮೂರ ಬಿಟ್ಟವರು ಇದಾರೆ,ಎಲ್ಲ ಬಿಟ್ಟ ನಿಂತ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಿಮ್ಮ ಪಾರ್ಟಿಯಲ್ಲಿ ಇದಾರೆ,ಇವರು ಈಗ ಹತಾಶರಾಗಿದ್ದಾರೆ, ಮೋದಿ ದೇಶದ ಪ್ರಧಾನಿ150 ಕೋಟಿ ಜನರ ಆಶೀರ್ವಾದದಿಂದ ಮೋದಿ ಪ್ರಧಾನಿಯಾಗಿದ್ದಾರೆ ಅವರ ಬಗ್ಗೆ ಹಗುರವಾಗಿ ಮಾತಾಡ್ತಿದಾರೆ.ನೀವು ಯೋಚನೆ ಮಾಡಿ' ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.