ಬೆಂಗಳೂರು: ರಾಜ್ಯದ ಅಸೆಂಬ್ಲಿ ಚುನಾವಣಾ ಫಲಿತಾಂಶ ಅನಿರೀಕ್ಷಿತ. ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯಾಧ್ಯಕ್ಷನಾಗಿ ಸೋಲಿನ ಹೊಣೆ ಹೊರುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಒಳ್ಳೆಯ ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿದ್ದೇವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇದನ್ನೂ ಓದಿ : Kalaburagi Assembly Election Result 2023: ಕಲಬುರಗಿ ಜಿಲ್ಲೆಯ 9ರ ಪೈಕಿ 7 ಕ್ಷೇತ್ರಗಳು ‘ಕೈ’ವಶ..!
ಆಯ್ಕೆಯಾದ ನಮ್ಮ ಅಭ್ಯರ್ಥಿಗಳಿಗೆ ಅಭಿನಂದನೆಗಳು. ರಾಜ್ಯದ ಮತದಾರರಿಗೆ ಮತ್ತು ವಿಶೇಷವಾಗಿ ನಮ್ಮ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದ ಅವರು, ಅಹೋರಾತ್ರಿ ದುಡಿದು ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಅದಕ್ಕಾಗಿ ಕಾರ್ಯಕರ್ತರು ಮತ್ತು ಮುಖಂಡರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ನಮ್ಮ ಸರಕಾರ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಅಭಿವೃದ್ಧಿ ಕಾರ್ಯದಲ್ಲಿ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರು ಉತ್ತಮ ಸಾಧನೆ ಮಾಡಿದ್ದಾರ. ಹೊಸ ಸರಕಾರದ ಒಳ್ಳೆಯ ಕಾರ್ಯಗಳಿಗೆ ಸಹಕಾರ ನೀಡಲಿದ್ದೇವೆ ಎಂದು ಹೇಳಿದ್ದಾರೆ. ಹಿನ್ನೆಡೆಗೆ ಏನು ಕಾರಣ ಎನ್ನುವುದನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಎರಡು ಕುಟುಂಬದ ಅಧಿಕಾರಕ್ಕೆ ಬ್ರೇಕ್: ಹನೂರಲ್ಲಿ ಜೆಡಿಎಸ್ ಕಮಾಲ್
ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮುಖ್ಯ ವಕ್ತಾರ ಎಂ.ಜಿ.ಮಹೇಶ್, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಮತ್ತಿತರರು ಇದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ