ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ತುಮಕೂರಿನ ಗ್ರಾಮಾಂತರ ಭಾಗದ ಸರ್ಕಾರಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ‘ಬಿಜೆಪಿಯಿಂದ ಮಾತ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದರು.
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಮತ್ತು ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ನನ್ನ ಪ್ರಣಾಮಗಳು ಎಂದು ಹೇಳಿದ ಪ್ರಧಾನಿ ಮೋದಿ, ‘ಇಲ್ಲಿ ಸೇರಿರುವ ಜನರನ್ನು ನೋಡಿದರೆ ಗೊತ್ತಾಗುತ್ತದೆ. ಬಿಜೆಪಿ ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ಬರುವುದು ನಿಶ್ಚಿತ. ಜೈ ಬಜರಂಗ ಬಲಿ ಕೀ ಜೈ ಎಂದು ಹೇಳಿದರು.
‘ರಾಷ್ಟ್ರಕವಿ ಕುವೆಂಪು ಅವರು "ಓ ಲಂಕಾ ಭಯಂಕರ ಸಮೀರಕುಮಾರ ಹೇ ಆಂಜನೇಯ" ಎಂದು ತಮ್ಮ ಕವನವೊಂದರಲ್ಲಿ ಆಂಜನೇಯನನ್ನು ಕುರಿತ ಹಾಡಿ ಹೊಗಳಿದ್ದಾರೆ. ಆದರೆ ಕಾಂಗ್ರೆಸ್ಸಿಗೆ "ಜೈ ಬಜರಂಗಬಲಿ" ಎಂದು ಹೇಳಿದರೆ ಸಂಕಟವಾಗುತ್ತದೆ. ತುಮಕೂರಿನಲ್ಲಿ ಕೆಲವು ದಿನಗಳ ಹಿಂದೆ ನನಗೆ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಮಾಡುವ ಸೌಭಾಗ್ಯ ಸಿಕ್ಕಿತ್ತು. ಕಳೆದ 9 ವರ್ಷಗಳಲ್ಲಿ ಮಹಿಳೆಯರು, ರೈತರು, ಬಡವರು ಸೇರಿದಂತೆ ಎಲ್ಲರ ಅಭಿವೃದ್ಧಿ ಆಗಿದೆ. ಇದು ಕಳೆದ 70 ವರ್ಷಗಳಲ್ಲಿ ಆಗಿರಲಿಲ್ಲ’ವೆಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್‌ನ ಆಟಗಳನ್ನು ತಿಳಿದಿರುವ ಕರ್ನಾಟಕದ ಜನತೆ ಸುಭದ್ರ ಕರ್ನಾಟಕಕ್ಕಾಗಿ ಮಾಡಿರುವ ಒಂದೇ ಸಂಕಲ್ಪ... ಒಂದೇ ಘೋಷಣೆ... ಒಂದೇ ಮಂತ್ರ... ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ.
- ಪ್ರಧಾನಿ ಶ್ರೀ @narendramodi #ModiWinningKarnataka #PoornaBahumata4BJP #BJPYeBharavase… pic.twitter.com/BBiefg4WCi
— BJP Karnataka (@BJP4Karnataka) May 5, 2023
‘ರೈತರು ರಸಗೊಬ್ಬರಗಳಿಗೆ ಹೆಚ್ಚಿನ ಹಣ ಸಂದಾಯ ಮಾಡಬಾರದೆಂದು, ಯೂರಿಯಾ ಗೊಬ್ಬರವನ್ನು 50 ರೂ.ಗೆ ಕೊಂಡು ರೈತರಿಗೆ 5 ರೂ.ನಲ್ಲಿ ನೀಡುತ್ತಿದ್ದೇವೆ. ಹಿಂದಿನ ಸರ್ಕಾರದಲ್ಲಿ ಪ್ರತಿಯೊಂದು ಆಸ್ತಿಯು ಸಹ ತಂದೆ ಅಥವಾ ಮಕ್ಕಳ ಹೆಸರಲ್ಲಿರುತ್ತಿತ್ತು. ಮೋದಿ ಬಂದ ನಂತರ 3 ಕೋಟಿ "ಅಕ್ಕ-ತಂಗಿಯರ"ಯರ ಹೆಸರಲ್ಲಿ ಮನೆ ಮತ್ತು ಆಸ್ತಿ ನೋಂದಣಿಯಾಗಿದೆ. ಸೌಭಾಗ್ಯ ಯೋಜನೆಯಡಿ ದೇಶದ 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. 9 ಕೋಟಿ ಮನೆಗಳಿಗೆ ನಲ್ಲಿ ಮೂಲಕ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಪಿಎಂ ಗ್ರಾಮ ಸಡಕ್ ಯೋಜನೆಯಡಿ ಎಲ್ಲಾ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.
ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ ! ನಾಳೆ ಈ ಎಲ್ಲಾ ರಸ್ತೆಗಳು ಬಂದ್ !
‘ಬಿಜೆಪಿ ಡಬಲ್ ಎಂಜಿನ್ ಸರ್ಕಾರ "ಕಲ್ಪತರು ನಾಡಿ"ನ ಕೊಬ್ಬರಿ ಬೆಳೆ ರೈತರ ಹಿತಕ್ಕಾಗಿ MSP ಹೆಚ್ಚು ಮಾಡಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕದ ಮಕ್ಕಳ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿದೆ. ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾಂಗ್ರೆಸ್ ತಡೆಯುತ್ತೇವೆಂದು ಪ್ರಣಾಳಿಕೆಯಲ್ಲಿ ಹೇಳಿದೆ. ಕಾಂಗ್ರೆಸ್ ಸರ್ಕಾರದಲ್ಲಿ 85% ಕಮಿಷನ್ ಇತ್ತು, ಹೀಗಾಗಿ ಕರ್ನಾಟಕದ ಹೆಮ್ಮೆ HALನ್ನು ಲೂಟಿ ಮಾಡಿ ಹಾಳು ಮಾಡಿಟ್ಟಿತ್ತು. ಆದರೆ ಈಗ HAL ಲಾಭದಲ್ಲಿ ದಾಖಲೆ ಸೃಷ್ಟಿ ಮಾಡಿದೆ. ಕಾಂಗ್ರೆಸ್ ಕಾಲದಲ್ಲಿ ಯಾಕೆ ಲಾಭದಲ್ಲಿರಲಿಲ್ಲ, ಮೋದಿ ಬಂದ ಮೇಲೆ ಹೇಗೆ ಲಾಭ ಬಂತು?’ ಎಂದು ಪ್ರಶ್ನಿಸಿದರು.
‘ಕಾಂಗ್ರೆಸ್ ಮತ್ತು ಜೆಡಿಎಸ್‌ನ ಆಟಗಳನ್ನು ತಿಳಿದಿರುವ ಕರ್ನಾಟಕದ ಜನತೆ ಸುಭದ್ರ ಕರ್ನಾಟಕಕ್ಕಾಗಿ ಮಾಡಿರುವ ಒಂದೇ ಸಂಕಲ್ಪ... ಒಂದೇ ಘೋಷಣೆ... ಒಂದೇ ಮಂತ್ರ... ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ’ ಎಂದು ಪ್ರಧಾನಿ ಮೋದಿ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.