ಬೆಂಗಳೂರು: ರಾಜ್ಯದ ಜನರಿಗೆ ನೀಡಿರುವ​ ಗ್ಯಾರಂಟಿಗಳಿಗೆ ಈಗ ಕಾಂಗ್ರೆಸ್ ಷರತ್ತು ವಿಧಿಸುವುದು ಸರಿಯಲ್ಲವೆಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದ ಎಲ್ಲಾ ಜನರಿಗೂ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಇದೀಗ ಕೊಟ್ಟ ಭರವಸೆಗಳಿಗೆ ಷರತ್ತು ಅನ್ವಯ ಅಂತಾ ಹೇಳುತ್ತಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಲೇಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿದ್ದಕ್ಕೆ ಧನ್ಯವಾದ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌


ಕಾಂಗ್ರೆಸ್ ನಾಯಕರು ರಾಜ್ಯದ ಜನರಿಗೆ ಸ್ಪಷ್ಟತೆಯಿಂದ ಮಾತು ಕೊಟ್ಟಿದ್ದಾರೆ. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ., ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್‌ ಕಾರ್ಡ್‌ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಉಚಿತ, ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂ. ಹಾಗೂ ನಿರುದ್ಯೋಗ ಡಿಪ್ಲೋಮಾ ಪದವೀಧರರಿಗೆ 1,500 ರೂ. ನೀಡುವುದಾಗಿ ಕಾಂಗ್ರೆಸ್‌ ಘೋಷಿಸಿತ್ತು. ಇದಲ್ಲೆ ಆಶಾ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ ಮಾಡುವ ಭರವಸೆ ನೀಡಿದೆ.


ರಾಜ್ಯದ ಜನರಿಗೆ ನೀಡಿರುವ ಭರವಸೆಯಂತೆ ಎಲ್ಲಾ ಗ್ಯಾರಂಟಿಗಳನ್ನು ನೀಡಬೇಕು ಎಂದು ಹೇಳಿದರು. ಹಳ್ಳಿಗಳಲ್ಲಿ ಕರೆಂಟ್ ಬಿಲ್ ಕಟ್ಟಲು ನಿರಾಕರಣೆ ವಿಚಾರವಾಗಿ ಮಾತನಾಡಿದ ಅಶ್ವತ್ಥ್ ನಾರಾಯಣ್, ಕಾಂಗ್ರೆಸ್ ನಾಯಕರು ಹೇಳಿರುವುದನ್ನು ಜನ ಪಾಲಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟುವಂತಿಲ್ಲ ಅಂತಾ ಹೇಳಿದ್ದರು,‌ ಅದಕ್ಕೆ ಕಟ್ಟುತ್ತಿಲ್ಲ. ನಾವು ಇದನ್ನು ಅಸ್ತ್ರ ಮಾಡಿಕೊಂಡಿಲ್ಲ ಎಂದು ಹೇಳಿದರು.


ಇದನ್ನೂ ಓದಿ: ನಾನೂ ಕೂಡ ಸಿಎಂ ಆಕಾಂಕ್ಷಿ: ಹೊಸ ಬಾಂಬ್ ಸಿಡಿಸಿದ ಡಾ. ಜಿ. ಪರಮೇಶ್ವರ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.