Bangalore rural District Assembly Election Result 2023 : ಬೆಂಗಳೂರು ಗ್ರಾಮಾಂತರ 4 ವಿಧಾನಸಭಾ ಕ್ಷೇತ್ರಗಳಲ್ಲಿ 1 ಬಿಜೆಪಿ, 3 ʼಕೈʼ ವಶ...!

Karntaka Assembly election result : ಕುತೂಹಲಕ್ಕೆ ಕಾರಣವಾಗಿದ್ದ 2023ರ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇತ್ತ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ 4 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ವಿಧಾನಸಭಾ  ಕ್ಷೇತ್ರವನ್ನು ವಶಪಡಿಸಿಕೊಂಡಿದೆ. ಒಂದೇ ಕ್ಷೇತ್ರದಲ್ಲಿ ಕಮಲ ಅರಳಿದೆ.

Written by - Krishna N K | Last Updated : May 13, 2023, 07:32 PM IST
  • ಬೆಂಗಳೂರು ಗ್ರಾಮಾಂತರ ಜಿಲ್ಲೆ ಒಟ್ಟು 4 ಮತ ಕ್ಷೇತ್ರಗಳನ್ನು ಒಳಗೊಂಡಿದೆ.
  • 4 ಮತಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳು ಕಾಂಗ್ರೆಸ್ ವಶಕ್ಕೆ.
  • ಉಳಿದ ಮೂರು ಕ್ಷೇತ್ರಗಳಲ್ಲಿ ಭರ್ಜಯರಿ ಜಯ ಗಳಿಸಿ ಕೈ ಅಭ್ಯರ್ಥಿಗಳು.
Bangalore rural District Assembly Election Result 2023 : ಬೆಂಗಳೂರು ಗ್ರಾಮಾಂತರ 4 ವಿಧಾನಸಭಾ ಕ್ಷೇತ್ರಗಳಲ್ಲಿ 1 ಬಿಜೆಪಿ, 3 ʼಕೈʼ ವಶ...! title=

Bangalore Karnataka Assembly Election Result 2023 : 2023ರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬೆಂಗಳೂರು ಗ್ರಾಮಾಂತರ  4 ವಿಧಾನಸಭಾ ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿದ್ದು ಬಿಟ್ಟರೆ ಉಳಿದ ಕ್ಷೇತ್ರಗಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ಜಯ ಗಳಿಸಿದ್ದಾರೆ.

2018ರ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ವಿಧಾನಸಭಾ ಹೊಸಕೋಟೆ ಕ್ಷೇತ್ರದಲ್ಲಿ ಶರತ್‌ ಬಚ್ಚೇಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಕೆ. ಶ್ರೀನಿವಾಸ್ ಮೂರ್ತಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಟಿ ವೆಂಕಟರಮಣಯ್ಯ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಿಸರ್ಗ ನಾರಾಯಣಸ್ವಾಮಿ ಗೆಲುವು ಸಾಧಿಸಿದ್ದರು. 

1) ಹೊಸಕೋಟೆ ವಿಧಾನಸಭಾ ಕ್ಷೇತ್ರ 

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜು ಅವರು ಈ ಬಾರಿಯ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಶರತ್ ಬಚ್ಚೇಗೌಡ ಭರ್ಜರಿ ಜಯ ಸಾಧಿಸಿದ್ದಾರೆ. ಶರತ್‌ ಕುಮಾರ್‌ ಬಚ್ಚೇಗೌಡ 106932 ಗೆಲುವಿನ ನಗೆ ಬಿರಿದ್ದರೆ, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜು 102145 ಮತಗಳನ್ನು ಪಡೆಯುವ ಮೂಲಕ ಸೋಲು ಕಂಡಿದ್ದಾರೆ.    

2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಯಾಗಿ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ದರು. ನಂತರ ಅವರು ಕಾಂಗ್ರೆಸ್‌ ಪಕ್ಷ ಸೇರಿದರು. ಭಾರತೀಯ ಜನತಾ ಪಾರ್ಟಿಯ ಎಂ.ಟಿ.ಬಿ. ನಾಗರಾಜ ವಿರುದ್ಧ 11486 ಮತಗಳ ಅಂತರದಿಂದ ಜಯ ಗಳಿಸಿದ್ದರು. ಒಟ್ಟು 81,671 ಮತಗಳನ್ನು ಶರತ್‌ ಬಚ್ಚೆಗೌಡ ಪಡೆದುಕೊಂಡಿದ್ದರು. 2018 ರ ಚುನಾವಣೆಯಲ್ಲಿ ಗೆದ್ದು ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಆಪ್ತರಾಗಿದ್ದ ಎಂಟಿಬಿ ನಾಗರಾಜ್ ಸಚಿವರಾಗಿದ್ದರು. ನಂತರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷ ಸೇರ್ಪಡೆಗೊಂಡಿದ್ದರು. ಈಗಾಗಿ ಹೊಸಕೋಟೆಯಲ್ಲಿ ಉಪ ಚುನಾವಣೆ  ನಡೆಸಲಾಗಿತ್ತು.

2023ರ ವಿಧಾನಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು

  • ಕಾಂಗ್ರೆಸ್‌: ಶರತ್‌ ಕುಮಾರ್‌ ಬಚ್ಚೇಗೌಡ - ಗೆಲುವು
  • ಬಿಜೆಪಿ : ಎಂಟಿಬಿ ನಾಗರಾಜ್‌
  • ಎಎಪಿ  : ಪ್ರಶಾಂತ್‌ ಸುಬ್ರಮಣಿ

2) ನೆಲಮಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌ನ ಎನ್ ಶ್ರೀನಿವಾಸಯ್ಯ 84229 ಮತಗಳನ್ನು ಪಡೆದುಕೊಳ್ಳುವ ಮೂಲಕ ಜಯ ಸಾಧಿಸಿದ್ದಾರೆ. ಜೆಡಿಎಸ್‌ನ ಹಾಲಿ ಶಾಸಕ ಕೆ. ಶ್ರೀನಿವಾಸಮೂರ್ತಿ 52251, ಬಿಜೆಪಿಯ ಸಪ್ತಗಿರಿ ಶಂಕರ್ 30582 ಮತ ಗಳಿಸುವ ಮೂಲಕ ಸೋಲನ್ನು ಅನುಭವಿಸಿದ್ದಾರೆ.

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆರ್‌. ನಾರಾಯಣಸ್ವಾಮಿ ಅವರ ವಿರುದ್ಧ ಹಾಲಿ ಶಾಸಕ ಜೆಡಿಎಸ್‌ನ ಡಾ. ಕೆ. ಶ್ರೀನಿವಾಸಮೂರ್ತಿ ಅವರು 69,277 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಆರ್‌. ನಾರಾಯಣ ಸ್ವಾಮಿ 44,956 ಮತಗಳನ್ನು, ಬಿಜೆಪಿಯ ಎಂ.ವಿ. ನಾಗರಾಜ್ ಅವರು 42,689 ಮತಗಳನ್ನು ಪಡೆದುಕೊಂಡಿದ್ದರು. 

2023ರ ವಿಧಾನಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು

  • ಕಾಂಗ್ರೆಸ್‌  : ಎನ್ ಶ್ರೀನಿವಾಸಯ್ಯ - ಗೆಲುವು
  • ಬಿಜೆಪಿ : ಸಪ್ತಗಿರಿ ಶಂಕರ್‌ ನಾಯಕ್‌
  • ಜೆಡಿಎಸ್‌ : ಡಾ. ಕೆ. ಶ್ರೀನಿವಾಸ ಮೂರ್ತಿ
  • ಎಎಪಿ : ಬಿ.ಎಂ. ಗಂಗಾಬೈಲಪ್ಪ
  • ಬಿಎಸ್‌ಪಿ : ಮಹಾದೇವ್‌ ಪಿ

3) ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ

ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಅಚ್ಚರಿ ಎಂಟ್ರಿ ನೀಡಿದ್ದ ಧೀರಜ್ ಮುನಿರಾಜ್ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ದೀರಜ್‌ 85144 ಮತಗಳನ್ನು ಪಡೆದುಕೊಳ್ಳುವ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್‌ನ ಟಿ. ವೆಂಕಟರಮಣಯ್ಯನವರನ್ನು 53391 ಮತ್ತು ಜೆಡಿಎಸ್‌ನ ಮುನೇಗೌಡ 39280 ಮತ ಪಡೆದು ಸೋಲು ಅನುಭವಿಸಿದ್ದಾರೆ.

ಕಾಂಗ್ರೆಸ್‌ನ ಟಿ ವೆಂಕಟರಮಣಯ್ಯ ಅವರು  2018 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 73225 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬಿರಿದ್ದರು. ಜೆಡಿಎಸ್‌ ಅಭ್ಯರ್ಥಿ ಬಿ.ಮುನೇಗೌಡ 63280 ಮತ್ತು ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿ 27612 ಮತಗಳನ್ನು ಪಡೆದ ಸೋಲನ್ನು ಅನುಭವಿಸಿದ್ದರು.

2023ರ ವಿಧಾನಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು

  • ಬಿಜೆಪಿ : ಧೀರಜ್ ಮುನಿರಾಜ್ -ಗೆಲುವು
  • ಬಿಎಸ್‌ಪಿ : ಬಿ.ಎಲ್‌. ಪಿಳ್ಳಪ್ಪ
  • ಎಎಪಿ : ಪುರುಶೋತ್ತಮ
  • ಜೆಡಿಎಸ್‌ : ಬಿ. ಮುನೇಗೌಡ

4) ದೇವನಹಳ್ಳಿ ವಿಧಾನಸಭಾ ಕ್ಷೇತ್ರ

ಈ ವಿಧಾನಸಭಾ ಕ್ಷೇತ್ರದ ಚುನಾವಣೆ ಈ ಭಾರಿ ಕೊಂಚ ವಿಭಿನ್ನವಾಗಿದೆ. ಕಳೆದ ಲೋಕಸಭಾ ಚುನಾವಣೆ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಕೆ. ಹೆಚ್‌. ಮುನಿಯಪ್ಪ ಅವರು ಈ ಬಾರಿ ಚುನಾವಣೆಯಲ್ಲಿ 73058 ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿದ್ದಾರೆ. ಹಾಲಿ ಶಾಸಕ ಜೆಡಿಎಸ್‌ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ 68427 ಮತಗಳು ಮತ್ತು ಬಜೆಪಿ ಅಭ್ಯರ್ಥಿ ಪಿಳ್ಳ ಮುನಿಶಾಮಪ್ಪ 34404 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ನಾರಾಯಣಸ್ವಾಮಿಯವರು 86966 ಮಗಳನ್ನು ಪಡೆದು ಗೆಲುವಿನ ನಗೆ ಬಿರಿದ್ದರು. ಕಾಂಗ್ರೆಸ್ ಅಭ್ಯರ್ಥಿ ವೆಂಕಟಸ್ವಾಮಿ 69956 ಮತ್ತು ಭಾರತೀಯ ಜನತಾ ಪಾರ್ಟಿಯಿಂದ ಸ್ಪರ್ಧೆ ಮಾಡಿದ್ದ ಕೆ. ನಾಗೇಶ್‌ ಕೇವಲ 9820 ಮಗಳನ್ನು ಪಡೆದುಕೊಂಡಿದ್ದರು. ಹೆಚ್ಚಾಗಿ ಜೆಡಿಎಸ್‌ ಪ್ರಾಭಲ್ಯಹೊಂದಿರುವ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆ ಕುತೂಹಲ ಮೂಡಿಸಿತ್ತು. 

2023ರ ವಿಧಾನಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು

  • ಕಾಂಗ್ರೆಸ್‌ : ಕೆ.ಎಚ್. ಮುನಿಯಪ್ಪ - ಗೆಲುವು  
  • ಜೆಡಿಎಸ್‌ : ನಿಸರ್ಗ ನಾರಾಯಣಸ್ವಾಮಿ ಎಲ್.ಎನ್.
  • ಬಿಜೆಪಿ : ಪಿಳ್ಳ ಮುನಿಶಾಮಪ್ಪ
  • ಎಎಪಿ : ಬಿ.ಕೆ. ಶಿವಪ್ಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News