ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಎಂದು ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಇದೀಗ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಖರ್ಗೆ ಅವರ ಮನಸ್ಸಿನಲ್ಲಿಯೇ ವಿಷವಿದೆ ಎಂದು ಹೇಳುವ ಮೂಲಕ ಕಿಡಿಕಾರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಖರ್ಗೆ ಅವರ ಮನಸ್ಸಿನಲ್ಲಿ ವಿಷವಿದೆ, ಇದು ಪ್ರಧಾನಿ ಮೋದಿ ಮತ್ತು ಬಿಜೆಪಿ ಬಗ್ಗೆ ಪೂರ್ವಾಗ್ರಹ ಪೀಡಿತ ಮನಸ್ಸು, ರಾಜಕೀಯವಾಗಿ ಅವರ ವಿರುದ್ಧ ಹೋರಾಡಲು ಸಾಧ್ಯವಾಗದ ಕಾರಣ ಹತಾಶೆಯಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜನರು ಇದೆಲ್ಲವನ್ನು ನೋಡುತ್ತಿದ್ದಾರೆ. ಅವರ ಹಡಗು ಮುಳುಗುತ್ತಿದೆ, ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಇದನ್ನೂ ಓದಿ: ನಾಳೆ ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ಇನ್ನು, ಸಾಕಷ್ಟು ಆಕ್ರೋಶ ವ್ಯಕ್ತವಾದ ಹಿನ್ನೆಲೆ ತಮ್ಮ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಖರ್ಗೆ ಅವರು, ನಾನು ಪ್ರಧಾನಿ ಮೋದಿಯನ್ನು ಉದ್ದೇಶಿಸಿಲ್ಲ ಆ ಹೇಳಿಕೆ ನೀಡಿಲ್ಲ. ಬಿಜೆಪಿಯ ಸಿದ್ಧಾಂತ "ಹಾವಿನಂತೆ" ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ನಾನು ಪ್ರಧಾನಿ ಮೋದಿಯವರಿಗೆ ವೈಯಕ್ತಿಕವಾಗಿ ಹೇಳಿಲ್ಲ, ಬಿಜೆಪಿ ಸಿದ್ಧಾಂತವು ಹಾವಿನಂತಿದೆ, ಅದನ್ನು ಮುಟ್ಟಲು ಪ್ರಯತ್ನಿಸಿದರೆ ಸಾವು ಖಚಿತ ಎಂದು ಹೇಳಿದ್ದಾಗಿ ಖರ್ಗೆ ಸ್ಪಷ್ಟಪಡಿಸಿದರು.
#WATCH | There is a poison in the mind of Kharge. It's a prejudiced mind towards PM Modi and BJP. This kind of thinking comes because of desperation as they are unable to fight him politically and they are seeing that their ship is sinking... People will teach them a lesson:… pic.twitter.com/V7d0rfrS1z
— ANI (@ANI) April 27, 2023
#WATCH | Union Minister Anurag Thakur slams Congress chief Mallikarjun Kharge over his remark on PM Modi
"Congress should apologise to the nation," he says pic.twitter.com/ocF0pZWYmU
— ANI (@ANI) April 27, 2023
ಖರ್ಗೆ ಅವರ ಹೇಳಿಕೆಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಕೂಡ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ರಾಷ್ಟ್ರದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಖರ್ಗೆ ಅವರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಗುಡುಗಿದ್ದಾರೆ.
ಇದನ್ನೂ ಓದಿ: ʼಮೋದಿ ವಿಷ ಸರ್ಪʼ ಅಂತ ನಾನು ಹೇಳಿಲ್ಲ : ಖರ್ಗೆ ಯುಟರ್ನ್
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹ ಖರ್ಗೆ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ಹಿರಿಯ ನಾಯಕರು ಮತ್ತು ಅಧ್ಯಕ್ಷರು, ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಪ್ರಧಾನಿ ಮತ್ತು ಇಡೀ ಜಗತ್ತು ಅವರನ್ನು ಗೌರವಿಸುತ್ತದೆ. ಪ್ರಧಾನಿಗಾಗಿ ಇಂತಹ ಭಾಷೆಯನ್ನು ಬಳಸುವುದು ಕಾಂಗ್ರೆಸ್ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದನ್ನು ತೋರಿಸುತ್ತದೆ. ಖರ್ಗೆ ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.