ಮತದಾನದ ಮೂಲಕ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಮುಂದಾದ ಬಿಜೆಪಿ

ಪ್ರಸಕ್ತ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಆಡಳಿತಾರೂಢ ಬಿಜೆಪಿಯು ವಿನೂತನ ವ್ಯವಸ್ಥೆ ಅಳವಡಿಸಿಕೊಂಡಿದ್ದು, ಇಂದು ರಾಜ್ಯದ 224 ಕ್ಷೇತ್ರಗಳಲ್ಲಿ ಪಕ್ಷದ ಸ್ಥಳೀಯ ಪದಾಧಿಕಾರಿಗಳು ಹಾಗೂ ಮುಖಂಡರು ಮತದಾನದ ಮೂಲಕ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಲಿದ್ದಾರೆ.

Written by - Zee Kannada News Desk | Last Updated : Mar 31, 2023, 04:36 PM IST
  • ಇಂದು ಬೆಳಿಗ್ಗೆ ೧೦ ಯಿಂದ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಓಟಿಂಗ್ ಪ್ರಾರಂಭ
  • ಈ ಬಾರಿ ಕಮಲ ಪಕ್ಷದಿಂದ ವಿನೂತನ ಪದ್ಧತಿ 22000 ಸ್ಥಳೀಯ ನಾಯಕರಿಂದ ಮತದಾನ
  • ಅಭ್ಯರ್ಥಿಗಳ ಆಯ್ಕೆಗೆ 4 ಹಂತಗಳ ಪ್ರಕ್ರಿಯೆ
ಮತದಾನದ ಮೂಲಕ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಮುಂದಾದ ಬಿಜೆಪಿ title=
screengrab

ಬೆಂಗಳೂರು: ಪ್ರಸಕ್ತ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಆಡಳಿತಾರೂಢ ಬಿಜೆಪಿಯು ವಿನೂತನ ವ್ಯವಸ್ಥೆ ಅಳವಡಿಸಿಕೊಂಡಿದ್ದು, ಇಂದು ರಾಜ್ಯದ 224 ಕ್ಷೇತ್ರಗಳಲ್ಲಿ ಪಕ್ಷದ ಸ್ಥಳೀಯ ಪದಾಧಿಕಾರಿಗಳು ಹಾಗೂ ಮುಖಂಡರು ಮತದಾನದ ಮೂಲಕ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಲಿದ್ದಾರೆ.

ಬಳಿಕ ಶನಿವಾರ ಮತ್ತು ಭಾನುವಾರ (ಏ.1 ಮತ್ತು 2) ಎರಡು ದಿನ ಎಲ್ಲ ಜಿಲ್ಲಾ ಘಟಕಗಳ ಕೋ‌ ಕಮಿಟಿಗಳ ಸದಸ್ಯರು ಬೆಂಗಳೂರಿಗೆ ಆಗಮಿಸಿ ರಾಜ್ಯ ಘಟಕದ ಪ್ರಮುಖರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ ಅಭ್ಯರ್ಥಿಗಳ ಕುರಿತು ತಮ್ಮ ಅಭಿಪ್ರಾಯ ದಾಖಲಿಸಲಿದ್ದಾರೆ. ನಂತರ ಏ.3 ಅಥವಾ 4ರಂದು ರಾಜ್ಯ ಕೋರ್ ಕಮಿಟಿ ಸಭೆ ಪಡೆದು ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಿದೆ, ಅಂತಿಮವಾಗಿ ಏ.4ರ ಬಳಿಕ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದೆ. ಹೀಗೆ ಒಟ್ಟು ನಾಲ್ಕು ಹಂತಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ : ಈ ಲಿಂಕ್ ಮೂಲಕ ರಿಸಲ್ಟ್ ತಿಳಿಯಿರಿ

4 ಹಂತಗಳು ಏನು?

1) ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಸ್ಥಳೀ ಯ ಪದಾಧಿಕಾರಿಗಳು, ಮುಖಂಡರಿಂದ

2) ಬಳಿಕ ಎರಡು ದಿನ ಬೆಂಗಳೂರಿನಲ್ಲಿ ಜಿಲ್ಲಾ ಕೋರ್ ಕಮಿಟಿ ಸದಸ್ಯರಿಂದ ರಾಜ್ಯ ಪ್ರಮುಖರಿಗೆ ಅಭಿಪ್ರಾಯ ಸಲ್ಲಿಕೆ

3) ನಂತರ ಬೆಂಗಳೂರಿನಲ್ಲಿ ರಾಜ್ಯ ಕೋ‌ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳ ಬಗ್ಗೆ ಬಹುತೇಕ ಅಂತಿಮ ನಿರ್ಧಾರ

4) ಕೊನೆಗೆ ದೆಹಲಿಯಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಅಂತಿಮ

ಇದನ್ನೂ ಓದಿ :  ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ಪರೀಕ್ಷಗೂ ಮುನ್ನವೇ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್

ಈ ಹಿನ್ನೆಲೆಯಲ್ಲಿ ಶುಕ್ರವಾರ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇದಕ್ಕಾಗಿ ಒಂದೊಂದು ಜಿಲ್ಲೆಗೆ ತೆರಳಲು ಸಚಿವರು ಹಾಗೂ ನಡೆಯುವಂತೆ ನೋಡಿಕೊಳ್ಳಲಿದ್ದಾರೆ. ಮಾಜಿ ಸಚಿವರನ್ನು ಒಳಗೊಂಡ ಹಿರಿಯ ನಾಯಕರ ನೇತೃತ್ವದ ಸಮಿತಿಗಳನ್ನು ರಚಿಸಿದ್ದು, ಆ ಎಲ್ಲ ನಾಯಕರು ಜಿಲ್ಲಾ ವ್ಯಾಪ್ತಿಯ ಒಂದೊಂದು ವಿಧಾನಸಭಾ ಕ್ಷೇತ್ರದ ಮುಖಂಡರ ಪ್ರತ್ಯೇಕ ಸಭೆ ನಡೆಸಿ ಮತದಾನ ಪ್ರಕ್ರಿಯೆ ಸುಗಮವಾಗಿ,ಪ್ರತಿ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರಗಳ ಪ್ರಮುಖರು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪ್ರಮುಖರು, ಜಿಲ್ಲಾ ಘಟಕಗಳಿಗೆ ನೇಮಕಗೊಂಡವರು ಅಭ್ಯರ್ಥಿಗಳ ಆಯ್ಕೆಗೆ ಮತ ಚಲಾಯಿಸಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News