ಎಪ್ರಿಲ್ 8 ಅಥವಾ 9 ರಂದು ಬಿಜೆಪಿ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ-ಸಿಎಂ ಬೊಮ್ಮಾಯಿ
BJP : ಭಾರತೀಯ ಜನತಾ ಪಕ್ಷವು (ಬಿಜೆಪಿ) ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ನಾಲ್ಕು ಹಂತದ `ಚುನಾವಣೆಯ ಮೊದಲ ಆಯ್ಕೆ` ಯ ವಿಸ್ತಾರವಾದ ಮತ್ತು ವಿಶಿಷ್ಟ ಮಾದರಿಯನ್ನು ಅಳವಡಿಸಿಕೊಂಡಿದೆ.
Karnataka Assembly Election : ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ವೇಳೆ ಭಾರಿ ತಯಾರಿಯಲ್ಲಿರುವ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಮಾಡುತ್ತಿವೆ. ಆದರೆ ಆಡಳಿತಾರೂಢ ಬಿಜೆಪಿ ಮಾತ್ರ ತನ್ನ ಪಟ್ಟಿಯನ್ನು ಇದುವರೆಗೂ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ, ಈ ವಿಚಾರವಾಗಿ ಭಾರತೀಯ ಜನತಾ ಪಕ್ಷವು ನಿಧಾನವಾಗಿ ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎನ್ನಲಾಗುತ್ತಿದೆ.
2008 ಮತ್ತು 2018ರಲ್ಲಿ ಎರಡು ಬಾರಿ 100 ಸೀಟುಗಳ ಗಡಿ ದಾಟಿದ್ದರೂ 113ರ 'ಮ್ಯಾಜಿಕ್ ನಂಬರ್' ತಲುಪಲು ವಿಫಲವಾಗಿ ಮತ್ತು ಅದರ ಪರಿಣಾಮಗಳನ್ನು ಅನುಭವಿಸಿದ ಬಿಜೆಪಿ, ಈ ಬಾರಿ ಆಯ್ಕೆಯಲ್ಲಿನ ತಪ್ಪುಗಳನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಆದ್ದರಿಂದ ಬಿಜೆಪಿಯು ಆರಾಮವಾಗಿ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಆಡಳಿತಾರೂಢ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ನಾನು ಚುನಾವಣೆಗೆ ಸ್ಪರ್ಧಿಸಲ್ಲ: ವದಂತಿಗಳಿಗೆ ಕಿವಿಗೊಡಬೇಡಿ- ಅನಿತಾ ಕುಮಾರಸ್ವಾಮಿ ಮನವಿ
ಕ್ಷೇತ್ರದ ವಿವರ, ಪಕ್ಷದ ಬಲಾಬಲ, ಜಾತಿ ಸಂಯೋಜನೆ ಮತ್ತು ಎದುರಾಳಿಗಳ ವಿರುದ್ಧ ಬಿಜೆಪಿ ಅಭ್ಯರ್ಥಿಗಳ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಕುರಿತು ಮಂಡನೆ ಮಾಡಲು ಪ್ರತಿ ಕೋರ್ ಕಮಿಟಿ ಸದಸ್ಯರಿಗೆ ಹೆಚ್ಚಿನ ಸಮಯವನ್ನು ನೀಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ-ಡಾಂಬಾರು ಹಾಕಿದ ಎರಡೇ ದಿನಕ್ಕೆ ಕಿತ್ತು ಬಂದ ರಸ್ತೆ!!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.