ಬೆಂಗಳೂರು: ಬಿಜೆಪಿ ಪಕ್ಷವು ಇಂದು 10 ಕ್ಷೇತ್ರಗಳ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿ.
ಹಳೆ ಬೇರು ಹೊಸ ಚಿಗುರಿನ ಈ ಶಕ್ತಿ ಭವಿಷ್ಯದ ದಿಕ್ಸೂಚಿ. #BJPYeBharavase #DoubleEngineSarkara pic.twitter.com/oAv5p6e7ah
— BJP Karnataka (@BJP4Karnataka) April 17, 2023
ಇಂದು ಬೆಳಗ್ಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಹೇಶ್ ತೆಂಗಿನಕಾಯಿ ಅವರನ್ನು ಕಣಕ್ಕೆ ಇಳಿಸಲಾಗಿದೆ.ಇನ್ನೊಂದೆಡೆಗೆ ರೋಣ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಹಾಲಿ ಶಾಸಕ ಕಳಕಪ್ಪ ಬಂಡಿ ಯಶಸ್ವಿಯಾಗಿದ್ದಾರೆ.ಈ ಬಾರಿ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ ಎಂದು ಭಾವಿಸಲಾಗಿತ್ತು, ಆದರೆ ಅಂತಿಮ ಕ್ಷಣದಲ್ಲಿ ಅವರು ಟಿಕೆಟ್ ಪಡೆದಿದ್ದಾರೆ.
ಇದನ್ನೂ ಓದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೀಟು ಮೀಸಲಿಟ್ಟ ಕಾಂಗ್ರೆಸ್...!
ಇನ್ನೂ ಮಹದೇವಪುರ ಎಸ್ಸಿ ಮೀಸಲು ಕ್ಷೇತ್ರಕ್ಕೆ ಅರವಿಂದ್ ಲಿಂಬಾವಳಿ ಅವರ ಬದಲು ಅವರ ಪತ್ನಿ ಮಂಜುಳಾ ಲಿಂಬಾವಳಿ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ.ಆದರೆ ಅಚ್ಚರಿ ಎನ್ನವಂತೆ ಮೈಸೂರಿನ ರಾಮದಾಸ್ ಗೆ ಬಿಜೆಪಿ ಈ ಬಾರಿ ಮಣೆ ಹಾಕದೆ ಕೃಷ್ಣರಾಜ ಕ್ಷೇತ್ರದಿಂದ ಶ್ರೀವಸ್ತರನ್ನು ಕಣಕ್ಕೆ ಇಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.