ಬೆಂಗಳೂರು : ರಾಜ್ಯದಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿ ಇದೀಗ ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಮೇಲೆ ವಾಗ್ದಾಳಿ ಪ್ರಾರಂಭಿಸಿದೆ. ಅಲ್ಲದೆ, ಸಿಇಟಿ ಪರೀಕ್ಷೆ ಇರುವುದರಿಂದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡುವಂತೆ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

ಹೌದು... ಬಹುಮತದೊಂದಿಗೆ ಕಾಂಗ್ರೆಸ್‌ ಸರ್ಕಾರ ರಚನೆ ಮುಂದಾಗಿದೆ ನಾಳೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಸದ್ಯ ಇದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ ಟ್ಟೀಟ್‌ ಮೂಲಕ ಕಿಡಿಕಾರಿದೆ. ನಿಯೋಜಿತ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರೇ ನಾಳೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ನಡೆಯುತ್ತವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ.


ಇದನ್ನೂ ಓದಿ: ರಾಷ್ಟ್ರರಾಜಧಾನಿಯಲ್ಲಿ ʼಕೈ ಸಚಿವ ಸಂಪುಟʼ ರಚನೆ : ಈ ನಾಯಕರಿಗೆ ಮಂತ್ರಿಗಿರಿ ಫಿಕ್ಸ್‌...?


ನಿಮ್ಮ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಿಂದ ಸಹಜವಾಗಿಯೇ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಅತೀವ ತೊಂದರೆಯಾಗಲಿದೆ. ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಮ್ಮ ಪ್ರಮಾಣ ವಚನ ಸ್ವೀಕರಿಸುವ ದಿನವನ್ನು ಮುಂದೂಡಬಹುದಲ್ಲವೇ..? ನೀಟ್ ಪರೀಕ್ಷಾರ್ಥಿಗಳ ಮೇಲಿದ್ದ ಕಾಳಜಿ ಸಿಇಟಿ ಪರೀಕ್ಷಾರ್ಥಿಗಳ ಮೇಲೆ ಏಕೆ ಇಲ್ಲ..? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.


ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ವೇದಿಕೆ ಸಜ್ಜು : ಕಾರ್ಯಕ್ರಮದಲ್ಲಿ ಸೇರಲಿದೆ ಗಣ್ಯರ ದಂಡು, ಭದ್ರತೆಗೆ ಹೆಚ್ಚಿನ ಒತ್ತು


2000 ನೋಟು ನಿಷೇಧ : ಪ್ರಧಾನ ಮಂತ್ರಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ


RBI 2000 ರೂ. ಮುಖಬೆಲೆಯ ನೋಟುಗಳನ್ನಿ ನಿಷೇಧಿಸಿದ ಬೆನ್ನಲ್ಲೆ ವಿಪಕ್ಷಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ಪ್ರಾಹ ಪ್ರಾರಂಭಿಸಿವೆ. ಇದೀಗ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಈ ಕುರಿತು ಟ್ಟೀಟ್‌ ಮೂಲಕ ಕಿಡಿಕಾರಿದ್ದಾರೆ. ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.


ಅಲ್ಲದೆ, ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ  ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ