ಸ್ವಂತ ಶಕ್ತಿ ಮೇಲೆ ನಿಶ್ಚಿತವಾಗಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ: ಬಿಎಸ್ವೈ
Karnataka Assembly election 2023: ಯಾರೂ ಏನೇ ಹೇಳಲಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿಗೆ ಈ ಬಾರಿ ಮತದಾರ ಸ್ಪಷ್ಟ ಬಹುಮತ ನೀಡಲಿದ್ದಾನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬೆಂಗಳೂರು: ಕೇಂದ್ರೀಯ ಸಂಸದೀಯ ಮಂಡಳಿಯು ಮೊದಲ ಹಂತದಲ್ಲಿ ಸಮರ್ಥ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ರಾಜ್ಯದೆಲ್ಲೆಡೆ ಬಿಜೆಪಿ ಪರ ಅಲೆ ಬೀಸುತ್ತಿದ್ದು, ಸ್ವಂತ ಶಕ್ತಿ ಮೇಲೆ ನಿಶ್ಚಿತವಾಗಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ನಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಂಸದೀಯ ಮಂಡಳಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಸ್ವಂತ ಬಲದ ಮೇಲೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ಹೇಳಿದರು.
ಇದನ್ನೂ ಓದಿ: ʼರೆಡ್ಡಿ ಪಕ್ಷʼಕ್ಕೆ ಬಿಜೆಪಿ ಅತೃಪ್ತ ನಾಯಕರ ಸಾಥ್..? : ʼಬಿಜೆಪಿʼ ಗೆಲ್ಲೋದು ಡೌಟ್
‘ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬರುವುದು 100ಕ್ಕೆ 100 ನಿಶ್ಚಿತ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇಡೀ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಇನ್ನೆರಡು ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ನಮ್ಮ ಪ್ರವಾಸ ನಡೆಯಲಿದೆ. ಬಿಜೆಪಿ ಮುಖಂಡರು ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದಾರೆ. ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಾರಂಭವಾಗುತ್ತಿದೆ. ಚುನಾವಣೆಗೆ ನಾವು ಎಲ್ಲ ರೀತಿಯ ಸಿದ್ಧತೆ ಮಾಡಿದ್ದೇವೆ’ ಎಂದು ಹೇಳಿದರು.
ಬಿಜೆಪಿಗೆ ಸೇರ್ಪಡೆಯಾದರು.
ಇದನ್ನೂ ಓದಿ: ಸವದಿ, ಶೆಟ್ಟರ್, ಈಶ್ವರಪ್ಪ..! ಘಟಾನುಘಟಿ ನಾಯಕರ ಸಿಟ್ಟಿಗೆ ಬಲಿಯಾಗುತ್ತಾ ʼಬಿಜೆಪಿʼ..?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.