ಬೆಂಗಳೂರು: ಮುಸ್ಲಿಂರ ಬಗೆಗೆ ವಿಶ್ವಾಸ ಇದೆ. ಮುಸ್ಲಿಂರ ಸಹಕಾರ ಬೆಂಬಲ ಬೇಕು. ಆದರೆ ಮುಸ್ಲಿಮರಿಗೆ ಟಿಕೆಟ್ ಕೊಟ್ಟರೆ ಗೆಲ್ಲುವ ವಿಶ್ವಾಸ ಈವರೆಗೆ ನಮಗೆ ಬಂದಿಲ್ಲ. ವಿಶ್ವಾಸ ಬಂದಾಗ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳುವ ಮೂಲಕ ಮುಸ್ಲಿಂ ಸಮುದಾಯ ವಿಶ್ವಾಸಾರ್ಹತೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ ಮಾಜಿ ಸಿಎಂ  ಬಿ ಎಸ್ ಯಡಿಯೂರಪ್ಪ‌.


COMMERCIAL BREAK
SCROLL TO CONTINUE READING

ಹಿಂದೂ ಮುಸ್ಲಿಂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದು ಬಯಸುವುದು ಬಿಜೆಪಿ. ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 70% ಲಾಭ ಆಗಿದ್ದು ಮುಸ್ಲಿಂ ಹೆಣ್ಣುಮಕ್ಕಳಿಗೆ ಎಂದರು.


ಬಿಜೆಪಿ ಸಮುದಾಯದ ರಾಜಕೀಯ ಮಾಡುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಸಿಎಂ ಸ್ಥಾನಕ್ಕೆ ನಾನೇ ರಾಜೀನಾಮೆ ನೀಡಿದ್ದೇನೆ. ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದು ನನ್ನ ವೈಯಕ್ತಿಕ ನಿರ್ಧಾರ. ಬಿಜೆಪಿ ಲಿಂಗಾಯತರಿಗೆ ಎಲ್ಲಾ ಸ್ಥಾನಮಾನ ನೀಡಿದೆ. ನನ್ನನ್ನು ಕಡೆಗಣಿಸಿಲ್ಲ, ನಾನು ಸಂತೃಪ್ತಿಯಲ್ಲಿ ಇದ್ದೇನೆ” ಎಂದರು.


ಇನ್ನು ಎಲ್ಲಾ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ವರುಣಾದಲ್ಲಿ ಸಿದ್ದರಾಮಯ್ಯ ಸೋಲುತ್ತಾರೆ, ಸೋಮಣ್ಣ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಕಾಂಗ್ರೆಸ್ ವಿರುದ್ಧ  ಬಿಎಸ್ ವೈ ಆರೋಪ!


ವೀರಶೈವ - ಲಿಂಗಾಯತ ಸಮಾಜವನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಎಸ್ ಯಡಿಯೂರಪ್ಪ ಆರೋಪಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.


ವೀರಶೈವ ಲಿಂಗಾಯತ ಸಮಾಜವನ್ನು ಎತ್ತಿ ಕಟ್ಟುವ ಕೆಲಸ ಕಾಂಗ್ರೆಸ್ ‌ಮಾಡುತ್ತಿದೆ. ಅಧಿಕಾರ ಇದ್ದಾಗ ಏನೂ ಮಾಡಿಲ್ಲ, ಇವಾಗ  ಓಲೈಕೆ ಮಾಡುತ್ತಿದೆ. ವೀರಶೈವ ಲಿಂಗಾಯತ ಸಮುದಾಯದ ಜೊತೆಗೆ ನಾವು ಇದ್ದೇವೆ. ಈ ಸಮಾಜವನ್ನು ಹಿಂದೆ ಒಡೆಯುವ ಪ್ರಯತ್ನ ಕಾಂಗ್ರೆಸ್ ಮಾಡಿತ್ತು. ವೀರಶೈವ ಲಿಂಗಾಯತ ಸಮಾಜ ಬಿಜೆಪಿ ಜೊತೆ ಗಟ್ಟಿಯಾಗಿ ನಿಂತಿದೆ. ನಮ್ಮನ್ನು ಬೆಳೆಸಿದ್ದು ವೀರಶೈವ ಲಿಂಗಾಯತ ಸಮಾಜ ಎಂದರು.


ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಅಗತ್ಯ ಇದೆ. ಮೋದಿ ದೇಶದ ಅಭಿವೃದ್ಧಿ ಬಗ್ಗೆ ಹಗಳಿರುಳು ಚಿಂತನೆ ಮಾಡುತ್ತಿದ್ದಾರೆ. ಇನ್ನೊಂದೆಡೆ, ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪಿಎಂ ಮೋದಿ ಅಮಿತ್ ಶಾ, ಜೆಪಿ ನಡ್ಡಾ ವಿಶೇಷ ಪ್ರಯತ್ನ ನಡೆಸುತ್ತಿದ್ದಾರೆ ಎಂದರು.


ಎಲ್ಲಾ ಯೋಜನೆಗಳನ್ನು ಜಾರಿಗೆ ತರುವ ಪ್ರಧಾನಿ ಎಲ್ಲರಿಗೂ ಸಿಕ್ಕಿರುವುದು ಸೌಭಾಗ್ಯವಾಗಿದೆ. ಜಾತಿ ಧರ್ಮ ಮೀರಿ ಬಸವೇಶ್ವರ ತತ್ವದಂತೆ ಆಡಳಿತ ನಡೆಸುತ್ತಿದ್ದಾರೆ. ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮೋದಿ ಕೈ ಬಲಪಡಿಸುವ ಅಗತ್ಯ ಇದೆ ಎಂದರು.


ಕರ್ನಾಟಕದಲ್ಲಿ ಎಲ್ಲ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕುಡಿಯುವ ನೀರು, ಶೌಚಾಲಯ, ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ನಾಯಕ ಸಿಕ್ಕಿರುವುದು ಸೌಭಾಗ್ಯ. ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಬಳಿಕ ದೇಶ ಆರ್ಥಿಕ ಶಕ್ತಿ ಹೊಂದಿದೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.