ಬಿ.ಎಸ್.ಯಡಿಯೂರಪ್ಪ ಕುಳಿತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ; ತಪ್ಪಿದ ಅನಾಹುತ!

ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ವಿಜಯಪುರ-ಕಲಬುರಗಿ ರಸ್ತೆ ಬದಿಯ ಜಮೀನಿನಲ್ಲಿರುವ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್‌ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

Written by - Puttaraj K Alur | Last Updated : Mar 6, 2023, 04:49 PM IST
  • ಯಡಿಯೂರಪ್ಪ ಕುಳಿತುಕೊಂಡಿದ್ದ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ
  • ಪೈಲಟ್ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲಿಯೇ ತಪ್ಪಿದೆ ಬಹುದೊಡ್ಡ ಅನಾಹುತ
  • ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಹಾಗೂ ತಟ್ಟಿನ ಚೀಲಗಳು
ಬಿ.ಎಸ್.ಯಡಿಯೂರಪ್ಪ ಕುಳಿತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ; ತಪ್ಪಿದ ಅನಾಹುತ! title=
ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ!

ಕಲಬುರಗಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ ಕಂಡುಬಂದಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ. ಪೈಲಟ್ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲಿಯೇ ಅನಾಹುತ ತಪ್ಪಿದೆ.

ಜೇವರ್ಗಿ ಪಟ್ಟಣದ ಹೊರವಲಯದ ವಿಜಯಪುರ ರಸ್ತೆಯ ಪಕ್ಕದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‍ನಲ್ಲಿ ಈ ಘಟನೆ ನಡೆದಿದೆ. ಬಿಎಸ್‌ವೈ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಪ್ಲಾಸ್ಟಿಕ್ ಹಾಗೂ ತಟ್ಟಿನ ಚೀಲಗಳು ಹಾರಿಬಂದಿವೆ. ಹೆಲಿಪ್ಯಾಡ್ ಸುತ್ತಮುತ್ತಲ ಜಮೀನಿನನಲ್ಲಿ ಹಾಕಲಾಗಿರುವ ಪ್ಲಾಸ್ಟಿಕ್ ಚೀಲಗಳು ಲ್ಯಾಂಡಿಂಗ್ ವೇಳೆ ಹೆಲಿಕ್ಯಾಪ್ಟರ್ ಮೇಲೆ ಹಾರಿ ಬಂದಿವೆ.

ಇದನ್ನೂ ಓದಿ: Praveen Nettaru murder case : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ

ಇದರಿಂದ ತಕ್ಷಣವೇ ಎಚ್ಚೆತ್ತುಕೊಂಡ ಪೈಲೆಟ್‌ ಬೇರೆಡೆ ಹೆಲಿಕಾಪ್ಟರ್ ತೆಗೆದುಕೊಂಡು ಹೋಗಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಪ್ಲಾಸ್ಟಿಕ್ ಚೀಲಗಳ ತೆರವುಗೊಳಿಸಿದ್ದಾರೆ. ನಂತರ ಒಂದೆರಡು ಸುತ್ತು ಹಾರಾಟ ನಡೆಸಿದ ಹೆಲಿಕ್ಯಾಪ್ಟರ್ ಸುರಕ್ಷಿತವಾಗಿ ಹೆಲಿಪ್ಯಾಡ್‍ನಲ್ಲಿ ಲ್ಯಾಂಡ್ ಆಗಿದೆ.

ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕ್ಷಣಕಾಲ ಕಕ್ಕಾಬಿಕ್ಕಿಯಾಗಿದ್ದರು. ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದೇ ಇರೋದ್ರಿಂದ ಭದ್ರತಾ ಲೋಪವಾಗಿತ್ತು. ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಬಿಎಸ್‍ವೈ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು.

ಇದನ್ನೂ ಓದಿ: Amit Shah: ಲೋಕಾಯುಕ್ತ ದಾಳಿ ಹಿನ್ನಲೆ  ಹೊನ್ನಾಳಿಯ  ಅಮಿತ್ ಶಾ ಕಾರ್ಯಕ್ರಮ ಮುಂದೂಡಿಕೆ

ಹೆಲಿಕ್ಯಾಪ್ಟರ್ ಲ್ಯಾಂಡ್ ಆದ ಬಳಿಕ ಯಡಿಯೂರಪ್ಪನವರು ಸುರಕ್ಷಿತವಾಗಿ ಕೆಳಗೆ ಇಳಿದರು. ಯಾವುದೇ ಅನಾಹುತ ಸಂಭವಿಸಿಲ್ಲವೆಂದು ಜೇವರ್ಗಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News