Karnataka Assembly Election 2023: ವೀರಶೈವ - ಲಿಂಗಾಯತ ಸಮಾಜವನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ವೀರಶೈವ ಲಿಂಗಾಯತ ಸಮಾಜವನ್ನು ಎತ್ತಿ ಕಟ್ಟುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರ ಇದ್ದಾಗ ಏನೂ ಮಾಡಿಲ್ಲ, ಇವಾಗ ಓಲೈಕೆ ಮಾಡುತ್ತಿದೆ. ವೀರಶೈವ ಲಿಂಗಾಯತ ಸಮುದಾಯದ ಜೊತೆಗೆ ನಾವು ಇದ್ದೇವೆ. ಈ ಸಮಾಜವನ್ನು ಹಿಂದೆ ಒಡೆಯುವ ಪ್ರಯತ್ನ ಕಾಂಗ್ರೆಸ್ ಮಾಡಿತ್ತು. ವೀರಶೈವ ಲಿಂಗಾಯತ ಸಮಾಜ ಬಿಜೆಪಿ ಜೊತೆ ಗಟ್ಟಿಯಾಗಿ ನಿಂತಿದೆ. ನಮ್ಮನ್ನು ಬೆಳೆಸಿದ್ದು ವೀರಶೈವ ಲಿಂಗಾಯತ ಸಮಾಜ ಎಂದರು.
ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಅಗತ್ಯ ಇದೆ. ಮೋದಿ ದೇಶದ ಅಭಿವೃದ್ಧಿ ಬಗ್ಗೆ ಹಗಲಿರುಳು ಚಿಂತಿಸುತ್ತಾರೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪಿಎಂ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ವಿಶೇಷ ಪ್ರಯತ್ನ ನಡೆಸುತ್ತಿದ್ದಾರೆ.
ಇದನ್ನೂ ಓದಿ- ರಾಜಧಾನಿಯ ಮಹಿಳೆಯರಿಗೆ ಪ್ರತೀ ಕ್ಷೇತ್ರದಲ್ಲಿ ಪಿಂಕ್ ಬೂತ್ ನಿರ್ಮಾಣ
ಎಲ್ಲಾ ಯೋಜನೆಗಳನ್ನು ಜಾರಿಗೆ ತರುವ ಪ್ರಧಾನಿ ಎಲ್ಲರಿಗೂ ಸಿಕ್ಕಿರುವುದು ಸೌಭಾಗ್ಯವಾಗಿದೆ. ಜಾತಿ ಧರ್ಮ ಮೀರಿ ಬಸವೇಶ್ವರ ತತ್ವದಂತೆ ಆಡಳಿತ ನಡೆಸುತ್ತಿದ್ದಾರೆ. ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮೋದಿ ಕೈ ಬಲಪಡಿಸುವ ಅಗತ್ಯ ಇದೆ.
ಕರ್ನಾಟಕದಲ್ಲಿ ಎಲ್ಲ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕುಡಿಯುವ ನೀರು, ಶೌಚಾಲಯ, ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ನಾಯಕ ಸಿಕ್ಕಿರುವುದು ಸೌಭಾಗ್ಯ. ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಬಳಿಕ ದೇಶ ಆರ್ಥಿಕ ಶಕ್ತಿ ಹೊಂದಿದೆ.
ಪ್ರಧಾನಿ ರೋಡ್ ಶೋ ಮಾಡಿದ್ದಾರೆ, ಜನರ ನಾಡಿ ಮಿಡಿತ ಅರ್ಥ ಮಾಡಿಕೊಂಡಿದ್ದಾರೆ. 135 ಕ್ಕಿಂತ ಹೆಚ್ಚು ಕ್ಷೇತ್ರ ಗೆಲುವು ನಿಶ್ಚಿತ. ಸೂರ್ಯ ಚಂದ್ರ ಇರುವಷ್ಟು ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮ್ಮಿಶ್ರ ಸರ್ಕಾರ ಅನುಭವ ನೋಡಿದ್ದೇವೆ. ಅಂಥಹ ಪರಿಸ್ಥಿತಿ ಮತ್ತೆ ಬರದ ನಿಟ್ಟಿನಲ್ಲಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ. ಎಸ್ ಟಿ ಎಸ್ ಸಿ ಮೀಸಲಾತಿ ನೀಡಿದ್ದೇವೆ. 80% ಎಸ್ ಟಿ ಎಸ್ ಸಿ ಜನರು ಬಿಜೆಪಿಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಇದನ್ನೂ ಓದಿ- ಬಿಜೆಪಿಯ ಅಭಿವೃದ್ಧಿ, ಕಾಂಗ್ರೆಸ್ನ ಒಡೆದು ಆಳುವ ನೀತಿ ನಡುವೆ ಚುನಾವಣೆ ನಡೆದಿದೆ - ಸಿಎಂ ಬೊಮ್ಮಾಯಿ
ರಾಜ್ಯ ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಜಾತಿ ರಾಜಕಾರಣ ಮಾಡಿಲ್ಲ. ಹಿಂದೂ ಮುಸ್ಲಿಂ ಕ್ರೈಸ್ತರು ಒಂದೇ ಮಕ್ಕಳಂತೆ ಬದುಕಬೇಕು. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬುವುದು ನಮ್ಮ ಆಶಯವಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ. ಉತ್ತರ ಪ್ರದೇಶದಲ್ಲಿ ರಾಹುಲ್, ಪ್ರಿಯಾಂಕ ಓಡಾಟ ಮಾಡಿ ಗೆದ್ದಿದ್ದು ಐದು ಸ್ಥಾನ. ಮೋದಿ, ಅಮಿತ್ ಶಾ ಮುಂದೆ ರಾಹುಲ್ ಸಮಾನ ಆಗಲು ಸಾಧ್ಯವಿಲ್ಲ ಎಂದರು.
ಬಿಜೆಪಿ ಸರ್ಕಾರ ಬಂದರೆ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಐದರಿಂದ ಏಳು ರೂಪಾಯಿಗೆ ಏರಿಕೆ ಮಾಡುತ್ತೇವೆ. ಮಲೆನಾಡಿನಲ್ಲಿ ಅಡಿಕೆ ಮಂಡಳಿ ಸ್ಥಾಪನೆ ಮಾಡುತ್ತೇವೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.