Chamarajanagar Vidhansabha Chunavane Result 2023: ಕರ್ನಾಟಕದ ಗಡಿ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಸಾಮಾನ್ಯವಾಗಿ ಚಾಮರಾಜನಗರವನ್ನು ಕಾಂಗ್ರೆಸ್ ಭದ್ರಕೋಟೆ ಎಂದು ಬಿಂಬಿಸಲಾಗುವ ಈ ಕ್ಷೇತ್ರದಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹನೂರು ಹೊರತು ಪಡಿಸಿ ಉಳಿದ ಮೂರು ಸ್ಥಾನಗಳನ್ನು ಕಾಂಗ್ರೆಸ್ ತೆಕ್ಕೆಗೆ ಹಾಕಿಕೊಂಡಿದೆ.
ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಹವಣಿಸುತ್ತಿದ್ದ, ಇದಕ್ಕಾಗಿ ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿಯ ರಣತಂತ್ರ ಇಲ್ಲಿ ಯಾವುದೇ ಪರಿಣಾಮವನ್ನು ಬೀರಿಲ್ಲ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಅರಳದ ಕಮಲ!
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿಸುವ ಬಿಜೆಪಿಯ ಕನಸು ಹುಸಿಯಾಗಿದ್ದು, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸೋಲು ಅನುಭವಿಸಿದ್ದಾರೆ. 18 ಸುತ್ತಿನಲ್ಲೂ ಮುನ್ನಡೆ ಸಾಧಿಸಿ ಪಾರಮ್ಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಪಾರಮ್ಯ ಮೆರೆದಿದ್ದು, ಸತಾರ ನಾಲ್ಕನೇ ಬಾರಿಗೆ ಶಾಸಕರಾದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ- 83,136 ಮತಗಳನ್ನು ಗಳಿಸಿದ್ದು, ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ 75,753 ಮತಗಳನ್ನು ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 7383 ಮತಗಳಿಂದ ಸಿ.ಪುಟ್ಟರಂಗಶೆಟ್ಟಿಗೆ ಜಯ ಲಭಿಸಿದ್ದು ಸೋಲಿಲ್ಲದ ಸರದಾರರಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದ ಅಭ್ಯರ್ಥಿಗಳೆಂದರೆ:-
- ಚಾಮರಾಜನಗರ: ಕಾಂಗ್ರೆಸ್
- ಗುಂಡ್ಲುಪೇಟೆ- ಕಾಂಗ್ರೆಸ್
- ಕೊಳ್ಳೇಗಾಲ- ಕಾಂಗ್ರೆಸ್
- ಹನೂರು- ಜೆಡಿಎಸ್
10 ಮೇ 2023ರಂದು ನಡೆದಿದ್ದ ವಿಧಾನಸಭಾ ಚುನಾವಣೆಯ ಮತದಾನ ಇಂದು ನಡೆಯಲಿದೆ. ಮತ ಎಣಿಕೆಗೆ ಕೆಲವೇ ಕ್ಷಣಗಳು ಬಾಕಿ ಉಳಿದಿದ್ದು ಎಲ್ಲಾ ಪಕ್ಷಗಳ ಹಣೆಬರಹ ಇಂದು ಬಹಿರಂಗಗೊಳ್ಳಲಿದೆ. ಚಾಮರಾಜನಗರದಲ್ಲಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಎಲ್ಲರ ಚಿತ್ತ ಸ್ರ್ಟಾಂಗ್ ರೂಂ ನತ್ತ ನೆಟ್ಟಿದೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರ ವಿರುದ್ಧ ಕೈ ಅಭ್ಯರ್ಥಿ ಪಾರಮ್ಯ!
2018ರ ವಿಧಾನಸಭಾ ಚುನಾವಣೆಯ ಚಿತ್ರಣ:
ಚಾಮರಾಜನಗರ ಜಿಲ್ಲೆಯಲ್ಲಿ ಜೆಡಿಎಸ್ ಅಷ್ಟು ಪ್ರಬಲವಾಗಿಲ್ಲ. ಸಾಮಾನ್ಯವಾಗಿ ಚಾಮರಾಜನಗರದ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಹಾಗಾಗಿಯೇ ಇದನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಹೇಳಲಾಗುತ್ತದೆ. ಆದರೂ, 2018ರ ಚುನಾವಣೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್ ಕೈ ತಪ್ಪಿದ್ದವು. ಈ ಚುನಾವಣೆಯಲ್ಲಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದು ಬೀಗಿದ್ದರೆ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಎನ್. ಮಹೇಶ್ ಬಿಜೆಪಿ ಸೇರುವ ಮೂಲಕ ಈ ಕ್ಷೇತ್ರವನ್ನೂ ಬಿಜೆಪಿಯ ಸುಪರ್ದಿಗೆ ನೀಡಿದಂತಾಯಿತು. 2023ರ ಚುನಾವಣೆಯಲ್ಲಿ ಶತಾಯಗತಾಯ ಚಾಮರಾಜನಗರದ ನಾಲ್ಕೂ ಕ್ಷೇತ್ರಗಳನ್ನು ಗೆಲ್ಲಲೇ ಬೇಕು ಎಂದು ಯತ್ನಿಸುತ್ತಿರುವ ಕಾಂಗ್ರೆಸ್ ಭಾರೀ ಕಸರತ್ತು ನಡೆಸಿದೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರ (Chamarajanagar Assembly Constituency):
ಚಾಮರಾಜನಗರ ವಿಧಾನಸಭಾ ಕ್ಷೇತ್ರದ 2018ರ ಫಲಿತಾಂಶ:
ಸಿ.ಪುಟ್ಟರಂಗಶೆಟ್ಟಿ (ಕಾಂಗ್ರೆಸ್): ಪಡೆದ ಮತ 75,963.
ಮಲ್ಲಿಕಾರ್ಜುನಪ್ಪ (ಬಿಜೆಪಿ) ಪಡೆದ ಮತ -71,050.
2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ. ಪುಟ್ಟರಂಗಶೆಟ್ಟಿ ಅವರು 4,913 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಮೂಲಕ ಸತತ ಮೂರು ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ಬಾರಿಸಿದ್ದರು.
ಚಾಮರಾಜನಗರ ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶ (Chamarajanagar Assembly Constituency Election Result 2023):
ಈ ಬಾರಿಯ ಚುನಾವಣೆಯಲ್ಲಿ ಯಾವ ಪಕ್ಷದಿಂದ ಯಾರು ಕಣದಲ್ಲಿ?
* ಪುಟ್ಟರಂಗಶೆಟ್ಟಿ (ಕಾಂಗ್ರೆಸ್) - 83,136 ಗೆಲುವು
* ವಿ.ಸೋಮಣ್ಣ (ಬಿಜೆಪಿ) - 75,753
* ಆಲೂರು ಮಲ್ಲು (ಜೆಡಿಎಸ್)-
* ಹ.ರಾ.ಮಹೇಶ್ (ಬಿಎಸ್‌ಪಿ) -
* ಡಾ.ಗುರುಪ್ರಸಾದ್ (ಎಎಪಿ)-
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸಿ.ಪುಟ್ಟರಂಗಶೆಟ್ಟಿ ಮತ್ತು ಬಿಜೆಪಿಯ ವಿ.ಸೋಮಣ್ಣ ನಡುವೆ ನೇರ ಹಣಾಹಣಿ ಇದ್ದು ಇಬ್ಬರ ನಡುವೆ ಪ್ರಬಲ ಪೈಪೋಟಿ ಇದೆ. ಆದಾಗ್ಯೂ, ಈ ಕ್ಷೇತ್ರದಲ್ಲಿ ಈಗಾಗಲೇ ಹ್ಯಾಟ್ರಿಕ್ ಜಯಭೇರಿ ಗಳಿಸಿರುವ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಮತ್ತೆ ನಾಲ್ಕನೇ ಬಾರಿಗೆ ಜಯ ಸಾಧಿಸಿ ಸೋಲಿಲ್ಲದ ಸರದಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
-----------------------------------------------
ಹನೂರು ವಿಧಾನಸಭಾ ಕ್ಷೇತ್ರ (Hanur Assembly Constituency):
ಹನೂರು ವಿಧಾನಸಭಾ ಕ್ಷೇತ್ರದಲ್ಲಿ 2018ರ ಫಲಿತಾಂಶವನ್ನು ನೋಡುವುದಾದರೆ...
ಆರ್.ನರೇಂದ್ರ- ಕಾಂಗ್ರೆಸ್- 60444
ಪ್ರೀತನ್ ನಾಗಪ್ಪ- ಬಿಜೆಪಿ- 56931
ಎಂ.ಆರ್.ಮಂಜುನಾಥ್- ಜೆಡಿಎಸ್ -44957
2018ರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್.ನರೇಂದ್ರ
3700 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು.
ಹನೂರು ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶ (Hanur Assembly Constituency Election Result 2023) :
ಹನೂರು ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಕಣದಲ್ಲಿದ್ದ ಅಭ್ಯರ್ಥಿಗಳು:
>> ಆರ್.ನರೇಂದ್ರ (ಕಾಂಗ್ರೆಸ್)
>> ಡಾ.ಪ್ರೀತನ್ ನಾಗಪ್ಪ (ಬಿಜೆಪಿ)
>> ಎಂ.ಆರ್.ಮಂಜುನಾಥ್ (ಜೆಡಿಎಸ್) ಗೆಲುವು
ಚಾಮರಾಜನಗರ ಜಿಲ್ಲೆಯಲ್ಲಿ ಜೆಡಿಎಸ್ ಅಷ್ಟು ಪ್ರಬಲವಾಗಿಲ್ಲ. 2018ರ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ನಾಲ್ಕಕ್ಕೆ ನಾಲಕ್ಕೂ ಕ್ಷೇತ್ರಗಳಲ್ಲಿ ಸೋಲುಂದಿದ್ದ ಜೆಡಿಎಸ್ ಈ ಬಾರಿ ಹನೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ.
-----------------------------------------------
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ (Gundlupet Assembly Constituency):
2018ರ ಚುನಾವಣಾ ಫಲಿತಾಂಶದ ಚಿತ್ರಣ:
ಸಿ.ಎಸ್.ನಿರಂಜನಕುಮಾರ್ (ಬಿಜೆಪಿ) - 94151
ಗೀತಾ ಮಹಾದೇವಪ್ರಸಾದ್ (ಕಾಂಗ್ರೆಸ್) 77,467
ಈ ಕ್ಷೇತ್ರದಲ್ಲಿ ಸತತ ಸೋಲುಂಡಿದ್ದ ಬಿಜೆಪಿ ಅಭ್ಯರ್ಥಿ ಸಿ. ಎಸ್. ನಿರಂಜನಕುಮಾರ್ 2018ರ ವಿಧಾನಸಭಾ ಚುನಾವಣೆಯಲ್ಲಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 16 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಈ ಮೂಲಕ ಕಾಂಗ್ರೆಸ್ ಭದ್ರಕೋಟೆಯಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ್ದರು.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶ (Gundlupet Assembly Constituency Election Result 2023):
ಈ ಬಾರಿಯ ಚುನಾವಣೆಯಲ್ಲಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷಿಸುತ್ತಿರುವ ಸ್ಪರ್ಧಾಳುಗಳು:
* ಗಣೇಶ್ ಪ್ರಸಾದ್ (ಕಾಂಗ್ರೆಸ್) ಗೆಲುವು
* ಸಿ.ಎಸ್. ನಿರಂಜನ್ ಕುಮಾರ್ (ಬಿಜೆಪಿ)
* ಕಡಬೂರು ಮಂಜುನಾಥ್ (ಜೆಡಿಎಸ್)
* ಎಂ.ಪಿ.ಸುನೀಲ್ ಕುಮಾರ್ (ಬಿಜೆಪಿ ಬಂಡಾಯ ಅಭ್ಯರ್ಥಿ)
ಕಾಂಗ್ರೆಸ್ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಪ್ರಸಾದ್ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಗಣೇಶ್ ಪ್ರಸಾದ್ ಅವರ ತಂದೆ ಹಾಗೂ ತಾಯಿ ಇಬ್ಬರೂ ಕೂಡ ಇದೇ ಕ್ಷೇತ್ರದಿಂದ ಸ್ಪರ್ದಿಸಿ ಗೆಲುವು ಸಾಧಿಸಿದ್ದರು.
-----------------------------------------------
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ (Kollegala Assembly Constituency):
2018 ರ ಚುನಾವಣಾ ಫಲಿತಾಂಶ:
ಎನ್. ಮಹೇಶ್- (ಆಗ ಬಿಎಸ್‌ಪಿ ಈಗ ಬಿಜೆಪಿ) - 71792
ಎ.ಆರ್.ಕೃಷ್ಣಮೂರ್ತಿ(ಕಾಂಗ್ರೆಸ್) - 52338
ಜಿ.ಎನ್.ನಂಜುಂಡಸ್ವಾಮಿ (ಬಿಜೆಪಿ) - 39690
2018ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ಎನ್. ಮಹೇಶ್ ಬರೋಬ್ಬರಿ 19 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಳಿಕ ಬಿಜೆಪಿ ಸೇರಿದ್ದಾರೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶ (Kollegala Assembly Constituency Election Result 2023): 1 ಮತತ ಸೋಲಿನಿಂದ ಸತತ ಕಂಗೆಟ್ಟಿದ್ದ ಎ.ಆರ್.ಕೃಷ್ಣಮೂರ್ತಿಗೆ ಗೆಲುವಿನ ಹಾರ:
2023ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷದಿಂದ ಯಾವ ಅಭ್ಯರ್ಥಿ ಕಣದಲ್ಲಿದ್ದಾರೆ ಎಂದು ನೋಡುವುದಾದರೆ:-
>> ಎನ್.ಮಹೇಶ್ (ಬಿಜೆಪಿ)
>> ಎ.ಆರ್.ಕೃಷ್ಣಮೂರ್ತಿ (ಕಾಂಗ್ರೆಸ್) ಗೆಲುವು
>> ಬಿ.ಪುಟ್ಟಸ್ವಾಮಿ (ಜೆಡಿಎಸ್)
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಎ.ಆರ್. ಕೃಷ್ಣಮೂರ್ತಿಯವರಿಗೆ ಜನ ಮಣೆ ಹಾಕಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 1 ಮತತ ಸೋಲಿನಿಂದ ಸತತ ಕಂಗೆಟ್ಟಿದ್ದ ಎ.ಆರ್.ಕೃಷ್ಣಮೂರ್ತಿಗೆ ಗೆಲುವಿನ ಹಾರ. 30 ಸಾವಿರಕ್ಕೂ ಅಧಿಕ ಮತಗಳಿಂದ ಎಆರ್ ಕೆ ಅವರಿಗೆ ಕೊಳ್ಳೇಗಾಲ ಮತದಾರರು ಗೆಲುವಿನ ಹಾರ ತೊಡಿಸಿದ್ದಾರೆ.
ಸತತ ಸೋಲಿನಿಂದ ಕಂಗೆಟ್ಟ ಎ.ಆರ್.ಕೃಷ್ಣಮೂರ್ತಿ ಅವರಿಗೆ ಒಂದು ಅವಕಾಶ ಕೊಡಬೇಕೆಂಬ ಜನರ ಭಾವನೆ ಹಾಗೂ ಎ.ಆರ್.ಕೃಷ್ಣಮೂರ್ತಿ ಸಜ್ಜನ ವ್ಯಕ್ತಿತ್ವ, ಸೌಮ್ಯ ಗುಣ, ಇದೆಲ್ಲದರ ಜೊತೆಗೆ ಕ್ಷೇತ್ರದಲ್ಲಿ ಬಿಎಸ್‌ಪಿ ಬೆಂಬಲ ಇವರ ಗೆಲುವಿಗೆ ಕರಣವಾಗಬಹುದು ಎಂದು ಹೇಳಲಾಗುತ್ತಿದೆ.
ಬಿಜೆಪಿ ಶಾಸಕ ಎನ್. ಮಹೇಶ್ ಕೈ ಹಿಡಿಯದ ಮತದಾರರು:
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕನಿಗೆ ಮುಖಭಂಗ ಅನುಭವಿಸಿದ್ದಾರೆ. ಬಿಎಸ್‌ಪಿ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದ ಎನ್. ಮಹೇಶ್ ಈ ಬಾರಿಯ ಚುನಾವಣೆಯಲ್ಲಿ ಸೋಲುಂಡಿದ್ದಾರೆ.
ನಿಮ್ಮ ಜಿಲ್ಲೆಯ ಚುನಾವಣೆ ಫಲಿತಾಂಶವನ್ನು ತಿಳಿಯಲು ಜೀ ಕನ್ನಡ ನ್ಯೂಸ್ ನಲ್ಲಿ ಕ್ಷಣ ಕ್ಷಣದ ಮಾಹಿತಿಯನ್ನು ಕಾಣಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.