ರಾಮನಗರ (ಕನಕಪುರ): ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ಬಿಜೆಪಿ ಕಾರ್ಯಕರ್ತರ ಪಕ್ಷ. ಅಶ್ವತ್ಥ್ ನಾರಾಯಣ್ ಅವರು ಈ ಭಾಗದಲ್ಲಿ ಸಾಕಷ್ಟು ಸಂಘಟನೆ ಮಾಡಿದ್ದಾರೆ. ಇಲ್ಲಿ ಶಕ್ತಿ ಬರಬೇಕಾದರೆ ಸಾಮ್ರಾಟ್ ಅಶೋಕ್ ಅವರೇ ಬರಬೇಕು ಅಂತ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಡಬಲ್ ಎಂಜಿನ್ ಸರ್ಕಾರ ಮೋದಿಯವರು ವ್ಯಾಕ್ಸಿನೇಷನ್ ಕೊಟ್ಟಿದ್ದರಿಂದ ನಾವೆಲ್ಲ ಕೋವಿಡ್ ಮುಕ್ತರಾಗಿದ್ದೇವೆ. ಕಾಂಗ್ರೆಸ್ ನವರು ಲಸಿಕೆ ವಿರುದ್ಧ ಅಪ ಪ್ರಚಾರ ಮಾಡಿದ್ದರು. ಪ್ರವಾಹ ಬಂದಾಗ ಬೆಳೆ ಪರಿಹಾರ ಡಬಲ್ ಪರಿಹಾರ ಕೊಟ್ಟಿದ್ದೇವೆ ಎಂದರು.
ಇದನ್ನೂ ಓದಿ: ಖರ್ಗೆ ಕುಟುಂಬವನ್ನು ಏಕೆ ಸಾಯಿಸಬೇಕು ಎನ್ನುವುದಕ್ಕೆ ಬಿಜೆಪಿಗರು ಉತ್ತರಿಸಬೇಕು: ಪ್ರಿಯಾಂಕ್ ಖರ್ಗೆ
ಅಶೋಕ್ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಕ್ರಾಂತಿ ಮಾಡಿದ್ದೇವೆ. ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮಗಳಲ್ಲಿನ ಜನರ ಸಮಸ್ಯೆಗೆ ಪರಿಹಾರ ನೀಡಿದ್ದಾರೆ. ಇಂತಹ ವ್ಯಕ್ತಿ ಇಲ್ಲಿ ಶಾಸಕರಾಗಬೇಕೊ? ಬೇಡ್ವೊ. ನಾನು ಸಿಎಂ ಆದ ತಕ್ಷಣ ವಿದ್ಯಾನಿಧಿ ಯೋಜನೆ ಕೊಟ್ಟಿದ್ದೇನೆ. ಇದರಿಂದ 11 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ ಎಂದರು.
ಕಾಂಗ್ರೆಸ್ ನವರು ಗ್ಯಾರೆಂಟಿ ಅಂತ ಬರುತ್ತಿದ್ದಾರೆ. ಯಾವುದು ಮಾರಾಟವಾಗುವುದಿಲ್ಲವೋ, ಅದಕ್ಕೆ ಗ್ಯಾರೆಂಟಿ ಕೊಡುತ್ತಾರೆ. ಕಾಂಗ್ರೆಸ್ ಗೆ ಈಗ ಗ್ಯಾರೆಂಟಿ ಇಲ್ಲ. ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಈಗ ಹೇಳುತ್ತಿದ್ದಾರೆ. ನಾವು 2013 ರಲ್ಲಿಯೇ ಕೊಡುತ್ತಿದ್ದೇವೆ. ಅದನ್ನು ಕಡಿಮೆ ಮಾಡಿದವರು ಇವರೇ ಎಂದರು.
ಇದನ್ನೂ ಓದಿ: MES ಕಿಡಿಗೇಡಿಗಳ ಸಂಘಟನೆ, ಚುನಾವಣೆ ವೇಳೆ ಜನರ ಮನಸ್ಸು ಕೆಡಿಸುವ ಗಿಮಿಕ್ ಮಾಡ್ತಾರೆ- ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಪಕ್ಷ ಅಂದರೆ ಭ್ರಷ್ಟಾಚಾರ. ಅವರು ಭ್ರಷ್ಟಾಚಾರ ಮಾಡಿ ನಮ್ಮ ಕಡೆ ಬೆರಳು ತೋರುತ್ತಿದ್ದಾರೆ. ಆದರೆ ಮೂರು ಬೆರಳು ಅವರ ಕಡೆ ತೋರಿಸುತ್ತವೆ. ಕಾಂಗ್ರೆಸ್ ಸಮಾಜ ಒಡೆಯುವ ಪಕ್ಷ. ಸಮುದಾಯಗಳನ್ನು ಒಡೆದು ಲಾಭ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಸಮಾಜ ಒಡೆಯುವವರು ಬೇಕೊ, ಸಮಾಜ ಒಗ್ಗೂಡಿಸುವ ಬಿಜೆಪಿ ಬೇಕೋ ಎಂದರು.
ಸಮಾಜವನ್ನೂ ಒಗ್ಗೂಡಿಸುವುದು ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಕನಕಪುರದಲ್ಲಿ ಆರ್. ಅಶೋಕ್ ಅವರ ಕೈ ಬಲ ಪಡಿಸಿ, ಅಶೋಕ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ, ಕನಕಪುರ ಕ್ಷೇತ್ರಕ್ಕೆ ಎಷ್ಟು ಅನುದಾನ ಬೇಕೋ, ಅಷ್ಟು ನಾನು ಕೊಡುತ್ತೇನೆ ಎಂದರು.
ಇದನ್ನೂ ಓದಿ: ಚುನಾವಣೆಗೆ ಕೌಂಟ್ ಡೌನ್ ಶುರು: ಉದ್ಯಾನನಗರಿಯಲ್ಲಿ ಭರ್ಜರಿ ಪ್ರಚಾರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.