Karnataka assembly Election: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡಿರುವ ಭಾರತೀಯ ಜನತಾ ಪಾರ್ಟಿ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯಲ್ಲಿ ಬಿಜೆಪಿ ಭದ್ರಪಡಿಸಲು ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲು ರಾಜ್ಯ ನಾಯಕರ ತಂಡ ಹುಬ್ಬಳ್ಳಿಗೆ ಲಗ್ಗೆ ಇಡುತ್ತಿದೆ.


COMMERCIAL BREAK
SCROLL TO CONTINUE READING

ಹೌದು.. ಚುನಾವಣಾ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಲು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ಗೆ ಆಗಮಿಸಿದ್ದಾರೆ.


ಇದನ್ನೂ ಓದಿ- ನಾವು ಯಾವುದೇ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ: ಅಮಿತ್ ಶಾಗೆ ಡಿಕೆಶಿ ತಿರುಗೇಟು


ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಕ್ಯ ಅಮಿತ್ ಷಾ, ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಇಲ್ಲಿಗೆ ಲಗ್ಗೆ ಇಡುತ್ತಿದ್ದು ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಸಮಾಲೋಚನೆಯಲ್ಲಿ ನಿರತರಾಗಿದ್ದಾರೆ. 


ಇದನ್ನೂ ಓದಿ- Karnataka Assembly Election: ಮೈಸೂರಿನಲ್ಲಿ ಇಂದು ದಿಗ್ಗಜರಿಂದ ಚುನಾವಣಾ ಪ್ರಚಾರ


ಇನ್ನೂ ಬೆಳಿಗ್ಗೆಯಿಂದಲೂ ಕೇಂದ್ರ ಸಚಿವ ಅಮಿತ್ ಶಾ ಕಾರ್ಯಕರ್ತರ ಹಾಗೂ ನಾಯಕರ ಜೊತೆಗೆ ಗೌಪ್ಯ ಸಭೆ ನಡೆಸುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಪ್ರಮುಖರ ನಾಸಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.