ಬೆಂಗಳೂರು :  ಲಿಂಗಾಯತ ಮುಖ್ಯಮಂತ್ರಿ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ. ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ಆಗಿದೆ ಎಂದು ಸಿಎಂ ಬೊಮ್ಮಾಯಿ ಲಿಂಗಾಯತ ಸಿಎಂ ವಿಚಾರವಾಗಿ ಸ್ಪಷ್ಟತೆ ನೀಡಿದರು.


COMMERCIAL BREAK
SCROLL TO CONTINUE READING

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ನಾಮಪತ್ರ ಪ್ರಕ್ರಿಯೆ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು. ಅಲ್ಲದೆ, ಲಿಂಗಾಯತ ಸಿಎಂ ಘೋಷಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಯಡಿಯೂರಪ್ಪ ನೇತೃತ್ವದಲ್ಲಿ ಲಿಂಗಾಯತ ನಾಯಕರ ಸಭೆ ನಡೆದ ಕುರಿತು ಮಾತನಾಡಿ 
ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ಆಗಿದೆ. ಕಾಂಗ್ರೆಸ್ ನವರ ಅಪಪ್ರಚಾರಕ್ಕೆ  ಹೇಗೆ ಪ್ರತ್ತುತ್ತರ ನೀಡಬೇಕು, ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರೂ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ. ಲಿಂಗಾಯತ ಸಿಎಂ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟ ಪಡಿಸಿದರು.


ಇದನ್ನೂ ಓದಿ: ಇಷ್ಟೆಲ್ಲಾ ಮಾತಾಡುವ ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲಿ: ಸೋಮಣ್ಣ ಸವಾಲ್


ಮಿಲಿಟರಿ ಹೊಟೇಲಿಂದಲೇ ಪ್ರಚಾರ ಆರಂಭ : ಅಶೋಕ್ ಅವರಿಗೆ ಕನಕಪುರದಲ್ಲಿ ಮಿಲಿಟರಿ ಹೊಟೇಲ್‌ಗೆ ಬಂದು ಹೋಗಿ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಉತ್ತರಿಸಿದ ಸಿಎಂ, ನಮ್ಮ ಪ್ರಚಾರ ಮಿಲಿಟರಿ ಹೊಟೇಲಿಂದಲೇ ಆರಂಭವಾಗಲಿದೆ. ಅಲ್ಲಿ ಸ್ಥಳೀಯ ಸಾಮಾನ್ಯ ಜನರಿರುತ್ತಾರೆ. ಅಂಥ ಸಾಮಾನ್ಯ ಜನರನ್ನು ಡಿಕೆಶಿ ಭೇಟಿ ಮಾಡುವುದಿಲ್ಲ. ಸಾಮಾನ್ಯ ಜನರನ್ನು ಭೇಟಿ ಮಾಡಲು ಅಶೋಕ್ ತೆರಲಿದ್ದಾರೆ. ಇದರಲ್ಲಿ ತಪ್ಪೇನಿದೆ. ಮಿಲಿಟರಿ ಹೊಟೇಲ್‌ಗೆ ಯಾಕೆ ಹೋಗಬಾರದು ಎಂದು ಪ್ರಶ್ನಿಸಿದರು. ಅಲ್ಲದೆ, ವಲಸೆ ಹೋದವರನ್ನು ವಾಪಸ್ಸು ಕರೆತರುವ ಕೆಲಸ ಮಾದುತ್ತಿದ್ದು, ಜಿಲ್ಲಾ, ಹೋಬಳಿ ಮಟ್ಟದಲ್ಲಿ ಆ ಕೆಲಸ ಮಾಡಲಾಗುತ್ತಿದೆ ಎಂದರು.


ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿ : ಕಾಂಗ್ರೆಸ್ ನದ್ದು ಲಿಂಗಾಯತ ವಿರೋಧಿ ನಡೆ. 1967 ರಿಂದ ಈ ವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು  ಕಾಂಗ್ರೆಸ್ ಸಿಎಂ ಮಾಡಿಲ್ಲ. ಮಧ್ಯೆ ವಿರೇಂದ್ರ ಪಾಟೀಲರು ಒಂಭತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ, ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಮಾನನಿಲ್ದಾಣದಲ್ಲಿಯೇ ಅವರನ್ನು ಅವರನ್ನು ತೆಗೆದು ಹಾಕಲಾಗಿದೆ. ರಾಜಶೇಖರ ಮೂರ್ತಿಯವರನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ. ಲಿಂಗಾಯತ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು. ಮತಬ್ಯಾಂಕ್ ಗಾಗಿ ಧರ್ಮ ಒಡೆಯಲು ಹೋಗಿದ್ದನ್ನು, ಜನ‌ ಮರೆಯೋಲ್ಲ. ಕಾಂಗ್ರೆಸ್‌ನವರು ದಲಿತರು, ಹಿಂದುಳಿದವರು, ಲಿಂಗಾಯತರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.