ಬೀದರ್ : ಕಾಂಗ್ರೆಸ್ ನಾಯಕರು ಲಿಂಗಾಯತರು ಭ್ರಷ್ಟರು ಅಂತ ಹೇಳಿದರು. ರಾಜ್ಯದ ಅತ್ಯಂತ ಭ್ರಷ್ಟ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ನರೇಂದ್ರ ನೋದಿ ಅವರ ಬಗ್ಗೆ ಖರ್ಗೆ ಅವರು ಆರೋಪಿಸಿದ್ದಾರೆ. ನರೇಂದ್ರ ಮೋದಿ ಅವರು ಅಂದರೆ ಕಾಂಗ್ರೆಸ್ ನವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಹುಮ್ನಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ವಿಶ್ವಮಾನವ ಬಸವಣ್ಣ ಅವರ ನಾಡಲ್ಲಿ ವಿಶ್ವ ನಾಯಕ ನರೇಂದ್ರ ಮೋದಿ ಯವರಿಗೆ ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ ಅವರು, ಪ್ರಜಾಪ್ರಭುತ್ವದ ಮೊದಲನೇ ಕರ್ತವ್ಯ ಎಲ್ಲರನ್ನೂ ಸಮಾನವಾಗಿ ನೋಡುವುದು. ಕಾಂಗ್ರೆಸ್ ಇಷ್ಟು ವರ್ಷ ಅದನ್ನು ಮಾಡಿಲ್ಲ. ನಾವು ಎಲ್ಲ ಸಮುದಾಯಗಳನ್ನು ಸಮಾನವಾಗಿ ನೋಡುತ್ತಿದ್ದೇವೆ ಎಂದರು.
ಇದನ್ನೂ ಓದಿ: Photos: ಮತದಾರರ ಗಮನ ಸೆಳೆಯುತ್ತಿವೆ ಮಾದರಿ ಮತಗಟ್ಟೆಯ ವರ್ಲಿ ಚಿತ್ರಗಳು
ನಮ್ಮ ಪ್ರಧಾನ ಮಂತ್ರಿ ಇಡೀ ದೇಶ ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಕರ್ನಾಟಕದಲ್ಲಿ 13 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದಾರೆ. ಜಲ ಜೀವನ್ ಮಿಷನ್ ಅಡಿಯಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 54 ಲಕ್ಷ ರೈತರಿಗೆ 16000 ಕೋಟಿ ನೀಡಿದ್ದೇವೆ ಎಂದರು. ರಾಜ್ಯದಲ್ಲಿ ಟೆಕ್ಸ್ ಟೈಲ್ ಪಾರ್ಕ್ ನೀಡಿದ್ದಾರೆ. ಇದರಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ. ಬೀದರ್ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.