ಸಿಎಂ ಸ್ಥಾನಕ್ಕೆ ಸಿದ್ದು ಹೆಸರು ಘೋಷಣೆ : ಡಿಕೆಶಿ ತವರಲ್ಲಿ ಖಾಕಿ ಹೈ ಅರ್ಲಟ್
Siddaramaiah CM of Karnataka : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಪ್ರತಿಭಟನೆ ಮತ್ತು ಗಲಾಟೆ ಮಾಡುವ ಸಾಧ್ಯತೆ ಹೆಚ್ಚಿದ್ದು, ರಾಮನಗರ ಜಿಲ್ಲೆಯಾದ್ಯಂತ ಪೊಲೀಸ್ ಹೈ ಅರ್ಲಟ್ ಆಗಿದೆ.
ರಾಮನಗರ : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಘೋಷಣೆಯಾದ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತವರು ಜಿಲ್ಲೆಯಲ್ಲಿ ಪೊಲೀಸರಿಗೆ ಅಲರ್ಟ್ ಆಗಿರುವಂತೆ ಉನ್ನತ ಅಧಿಕಾರಿಗಳು ಸೂಚಿಸಿದ್ದಾರೆ. ಅಹಿತರಕ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಫಲಿತಾಂಶ ಬಂದಾಗಿನಿಂದ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿತ್ತು. ಇತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ ಅಂತ ಹೇಳಲಾಗುತ್ತಿತ್ತು. ಆದ್ರೆ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರ ತವರು ಜಿಲ್ಲೆಯ ಪೊಲೀಸರಿಗೆ ಅಲರ್ಟ್ ಆಗಿರುವಂತೆ ಉನ್ನತ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಪಾಪದ ಕೆಲಸ ಮಾಡಿದವರಿಗೆ ಚಪ್ಲಿಲಿ ಹೊಡಿರಿ: ಒಳೇಟಿನ ವಿರುದ್ಧ ಸೋಮಣ್ಣ ಕಿಡಿ
ಅಲ್ಲದೆ, ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು, ಮೈಸೂರಿನಿಂದ ಆರು ಕೆಎಸ್‌ಆರ್‌ಪಿ ತುಕಡಿ ಆಗಮಿಸಿವೆ. ಡಿಕೆಶಿಗೆ ಸಿಎಂ ಸ್ಥಾನ ತಪ್ಪಿರುವ ಹಿನ್ನೆಲೆ ಗಲಾಟೆ, ಪ್ರತಿಭಟನೆ ಸಾಧ್ಯತೆ ಇದ್ದು, ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯುವ ಮುನ್ಸೂಚನೆ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಅಲ್ಲದೆ, ಸಿದ್ದರಾಮಯ್ಯ ಸಿಎಂ ಎಂದು ಘೋಷಣೆ ನಂತರ ಡಿಕೆಶಿ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಒಕ್ಕಲಿಗ ಸಮುದಾಯದ ಮತಗಳು ಕೈತಪ್ಪುವ ಸಂಭವ ಹೆಚ್ಚಾಗಿದೆ. ಈ ಹಿನ್ನೆಲೆ ಸಂಧಾನ ಮೂಲಕ ಡಿಕೆ ಶಿವಕುಮಾರ್‌ಗೆ ಡಿಸಿಎಂ ಪಟ್ಟ ಆಫರ್ ನೀಡಲಾಗಿದೆ ಎಂದು ಹೇಳಲಾಗಿದೆ. ಸದ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ.
ಇದನ್ನೂ ಓದಿ: ಪ್ರಬಲ ಸಮುದಾಯದ ನಾಯಕನಿಗೆ ಪಕ್ಷದ ಜವಾಬ್ದಾರಿ ನೀಡಲು ಬಿಜೆಪಿ ಸಿದ್ದತೆ ! ಕಾಂಗ್ರೆಸ್ ಸಿಎಂ ಆಯ್ಕೆ ನಂತರ ಕಮಲ ಪಾಳಯದ ತೀರ್ಮಾನ
ಅಲ್ಲದೆ, ಮೂಲಗಳ ಪ್ರಕಾರ ಪಕ್ಷದ ಹಿತದೃಷ್ಟಿಯಿಂದ ಎರಡು ವರ್ಷ ಸಿದ್ದರಾಯಮ್ಮ ಅವರಿಗೆ ಸಿಎಂ ಪಟ್ಟ ಬಿಟ್ಟುಕೊಡುವಂತೆ ನಂತರ ಸಿಎಂ ಸ್ಥಾನ ನೀಡುವುದಾಗಿ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಭರವಸೆ ನೀಡಿದೆ ಎನ್ನಲಾಗಿದೆ. ಅಲ್ಲದೆ ಸದ್ಯ ಡಿಸಿಎಂ ಆಗಿ ಮುಂದುವರೆಯುವಂತೆ ಇತಿಳಿಸಿದೆ ಎನ್ನಲಾಗಿದೆ. ಆದ್ರೆ ಇಬ್ಬರು ನಾಯಕರು ಸಿಎಂ ಪಟ್ಟ ಬಿಡುವು ಹಾಗೆ ಕಾಣುತ್ತಿಲ್ಲ. ಮುಂದೆ ಎನಾಗುತ್ತೋ ಅಂತ ಕಾಯ್ದು ನೋಡಬೇಕಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ