Karnataka Assembly Election 2023: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಮುಕ್ತಾಯ ಗೊಂಡಿದ್ದು, ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗಾಗಿ ರಾಜ್ಯದ ನಾಯಕರು ಅಳೆದು ತೂಗಿ 224 ವಿಧಾನಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದಾರೆ.  ಪ್ರತಿ ಕ್ಷೇತ್ರಕ್ಕೂ ಮೂವರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ. ಇದರಲ್ಲಿ ಪಕ್ಷಕ್ಕಾಗಿ ದುಡಿದ ಹಲವರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದುಬಂದಿದೆ. 


COMMERCIAL BREAK
SCROLL TO CONTINUE READING

ಕಳೆದೆರಡು ದಿನದಿಂದ ಸುದೀರ್ಘ ಚರ್ಚೆ ಮಾಡಿ ಪಟ್ಟಿ ಸಿದ್ದಪಡಿಸಿರುವ ಬಿಜೆಪಿ ಕೋರ್ ಕಮಿಟಿ ನಾಯಕರು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಉಸ್ತುವಾರಿ ನಾಯಕರಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಹಸ್ತಾಂತರಿಸಿದ್ದಾರೆ.  ಈ ಪಟ್ಟಿ ಇಂದು ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ್ದು, ಶೀಘ್ರದಲ್ಲೇ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುವ ನಿರೀಕ್ಷೆ ಇದೆ. 


ಇದನ್ನೂ ಓದಿ- ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ ಘೋಷಿಸಲು ಬಿಜೆಪಿಯ ಕಿರುಕುಳವೇ ಕಾರಣ: ಕಾಂಗ್ರೆಸ್


224 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲವು ಕ್ಷೇತ್ರಗಳಲ್ಲಿ 15 ರಿಂದ 20 ಆಕಾಂಕ್ಷಿಗಳಿದ್ದು, ಅವುಗಳನ್ನೆಲ್ಲ ಫಿಲ್ಟರ್ ಮಾಡಿ ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಿಫಾರಸು ಮಾಡಿರುವ ರಾಜ್ಯ ಚುನಾವಣಾ ಕಮಿಟಿ ಕೆಲವು ಮಾನದಂಡಗಳನ್ನು ಅನುಸರಿಸಿ ಬಹುತೇಕ ಎಲ್ಲಾ ಹಾಲಿ ಶಾಸಕರ ಹೆಸರನ್ನೂ ಕೂಡ ಈ ಪಟ್ಟಿಯಲ್ಲಿ ಸೇರಿಸಿದೆ. ಆದಾಗ್ಯೂ, ಯಾರಿಗೆ ಟಿಕೆಟ್ ನೀಡಬೇಕು ಎಂಬ ವಿಚಾರದ ಬಗ್ಗೆ ಕೇಂದ್ರ ಸಂಸದೀಯ ಮಂಡಳಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ. 


ಬಿಜೆಪಿ ಅಭ್ಯರ್ಥಿ ಆಯ್ಕೆಯ ಮಾನದಂಡ: 
* ಸುಮಾರು 80 ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಪಟ್ಟಿ 
* ಪರಾಜಿ ಅಭ್ಯರ್ಥಿ, ಮಾಜಿ ಶಾಸಕರುಗಳಿಗೆ ಟಿಕೆಟ್ 
* ಕಡಿಮೆ ಅಂತರದಿಂದ ಸೋತಿದ್ದ ಅಭ್ಯರ್ಥಿಗಳಿಗೆ ಮತ್ತೆ ಟಿಕೆಟ್
* ಎರಡು ಭಾರಿ ಸೋತ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಆದ್ಯತೆ 
* ಸರ್ವೆ, ಆಂತರಿಕ ಮತದಾನ, ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ವಿಶ್ವಾಸ ಕಳೆದುಕೊಂಡ ಶಾಸಕರಿಗೆ ಕೋಕ್‍!?? ನೀಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 


ಇದನ್ನೂ ಓದಿ- ಸೋಲಿನ ಭೀತಿಯಲ್ಲಿರುವ ಬಿಜೆಪಿ ನಾಯಕರಿಂದ ಅಧಿಕಾರ ದುರುಪಯೋಗ: ಸಿದ್ದರಾಮಯ್ಯ


ಸುಮಾರು 90 ರಿಂದ 100 ಕ್ಷೇತ್ರಗಳಿಗೆ ಇಬ್ಬರೇ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಶೇಖಡ 90 ರಷ್ಟು ಹಾಲಿ ಶಾಸಕರಿಗೆ ಟಿಕೆಟ್ ಕನ್ಪರ್ಮ್ ಮಾಡಿದೆ. ಇದಲ್ಲದೆ, ಭ್ರಷ್ಟಾಚಾರ ಆರೋಪ, ಕಾರ್ಯಕರ್ತರ ವಿರೋಧ, ಕ್ಷೇತ್ರದಲ್ಲಿ ವರ್ಚಸ್ಸು ಕಳೆದುಕೊಂಡಿರುವ ಶಾಸಕರಿಗೆ ಕೋಕ್‍ ನೀಡಿರುವ ಸಾಧ್ಯತೆಯೂ ಇದೆ. ಅಷ್ಟೇ ಅಲ್ಲದೆ, ಕೆಲವು ವಲಸಿಗರಿಗೂ ಕೂಡ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ  ಎನ್ನಲಾಗುತ್ತಿದೆ. ಒಟ್ಟಾರೆಯಾಗಿ ಬಿಜೆಪಿ ಹೈಕಮಾಂಡ್ ಈ ಬಾರಿಯ ಚುನಾವಣೆಯಲ್ಲಿ ಯಾವೆಲ್ಲಾ ನಾಯಕರಿಗೆ ಮಣೆ ಹಾಕಲಿದೆ ಎಂಬುದನ್ನು ಕಾದುನೋಡಬೇಕಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.