Karnataka Election 2023: ವಿಧಾನಸಭಾ ಚುನಾವಣೆಗೆ ಪೊಲೀಸ್ ಸರ್ಪಗಾವಲು, ಭದ್ರತೆಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

Karnataka Election 2023: ನಾಳೆ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಹಾಗೂ ಅಹಿತಕರ ಘಟನೆ ನಡೆಯಂತೆ ಮುಂಜಾಗ್ರತ ಕ್ರಮ ರಾಜ್ಯ ಪೊಲೀಸ್ ಇಲಾಖೆ ಭರ್ಜರಿ ಸಿದ್ಧತೆ ನಡೆಸಿದೆ. ಕೇಂದ್ರಿಯ ಪಡೆ, ಅನ್ಯ ರಾಜ್ಯಗಳ ಪೊಲೀಸರು ಸೇರಿದಂತೆ‌ ಒಟ್ಟು 1,56 ಲಕ್ಷ ಪೊಲೀಸರು ಕಾರ್ಯ ನಿರ್ವಹಿಸಲು ಸನ್ನದ್ಧರಾಗಿದ್ದಾರೆ.  

Written by - VISHWANATH HARIHARA | Edited by - Chetana Devarmani | Last Updated : May 9, 2023, 09:13 PM IST
  • ಕರ್ನಾಟಕ ವಿಧಾನಸಭಾ ಚುನಾವಣೆ 2023
  • ವಿಧಾನಸಭಾ ಚುನಾವಣೆಗೆ ಪೊಲೀಸ್ ಸರ್ಪಗಾವಲು
  • ಭದ್ರತೆಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ
Karnataka Election 2023: ವಿಧಾನಸಭಾ ಚುನಾವಣೆಗೆ ಪೊಲೀಸ್ ಸರ್ಪಗಾವಲು, ಭದ್ರತೆಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ  title=
Vidhanasoudha

ಬೆಂಗಳೂರು: ಚುನಾವಣಾ ಕರ್ತವ್ಯಕ್ಕಾಗಿ  304 ಡಿವೈಎಸ್‌ಪಿಗಳು, 991 ಇನ್ ಸ್ಪೆಕ್ಟರ್, 2,610 ಪಿಎಸ್‌ಐ, 5,803 ಎಎಸ್‌, 46,421 ಹೆಚ್‌ಸಿ ಹಾಗೂ ಪಿಸಿ 27,990 ಹೋಂ ಗಾರ್ಡ್ಸ್ ಸೇರಿದಂತೆ ಒಟ್ಟು 84,119 ಮತ್ತು ಸಿಬ್ಬಂದಿಯನ್ನ ನೇಮಿಸಲಾಗಿದೆ.  ಅವಶ್ಯಕತೆಗನುಗುಣವಾಗಿ ಅಧಿಕಾರಿ ಹಾಗೂ ಸಿಬ್ಬಂದಿ ಕೊರತೆಯನ್ನು ಸರಿದೂಗಿಸಲು ಹೊರ ರಾಜ್ಯಗಳಿಂದ ಸುಮಾರು 8,500 ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಕರೆಸಲಾಗಿದೆ. 650 ಸಿಎಪಿಎಫ್ ಕಂಪನಿಗಳ ಜೊತೆಗೆ ರಾಜ್ಯ ಸಶಸ್ತ್ರ ಮೀಸಲು ಪಡೆ ಸಹ ನಿಯೋಜಿಸಲಾಗಿದೆ. ಒಟ್ಟಾರೆಯಾಗಿ 1,56,000 .ಪೊಲೀಸ್‌ ಅಧಿಕಾರಿ/ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನೇಮಿಸಲಾಗಿದೆ. ಒಟ್ಟು 58,282 ಮತಗಟ್ಟೆಗಳಿದ್ದು, ಅದರಲ್ಲಿ 11,617 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಅನುಗುಣವಾಗಿ ಸೂಕ್ಷ್ಮ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿ ಜೊತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಕಂಪನಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಜಿಲ್ಲಾ ಚುನಾವಣಾಧಿಕಾರಿ, ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ- ಪರಿಶೀಲನೆ

ಒಟ್ಟು 2,930 ಸೆಕ್ಟರ್ ಮೊಬೈಲ್ಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಒಂದೊಂದು ಸೆಕ್ಟರ್ ಮೊಬೈಲ್‌ಗಳಿಗೆ 20 ಬೂತ್‌ಗಳನ್ನು ನಿಗದಿಪಡಿಸಲಾಗಿದೆ. ಇದಕ್ಕಾಗಿ ಪಿ.ಎಸ್.ಐ ಅಥವಾ ಎಎಸ್‌ಐ ದರ್ಜೆಯ ಅಧಿಕಾರಿ ಮತ್ತು ಸಿಬ್ಬಂದಿ ನೇಮಿಸಿ ನಿರಂತರವಾದ ಗಸ್ತು ತಿರುಗಲಾಗುತ್ತದೆ. ಸೆಕ್ಟರ್ ಮೇಲ್ವಿಚಾರಣೆಗಾಗಿ 149 ಮೇಲ್ವಿಚಾರಣಾ ಮೊಬೈಲ್‌ಗಳಿದ್ದು, ಮೇಲ್ವಿಚಾರಣ ಮೊಬೈಲ್ಸ್‌ನ ಉಸ್ತುವಾರಿಗಾಗಿ ಒರ್ವ ಪೊಲೀಸ್ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ನೇಮಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ಅವ್ಯವಹಾರ ತಡೆಗಟ್ಟುಲು  200ಕ್ಕೂ ಹೆಚ್ಚು ವಿಚಕ್ಷಣಾ ದಳ ನೇಮಿಸಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನೊಳಗೊಂಡಂತೆ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಗಡಿಭಾಗದಲ್ಲಿ ಸುಮಾರು 700ಕ್ಕೂ ಹೆಚ್ಚು ಚೆಕ್‌ ಪೋಸ್ಟ್‌ ತೆರೆಯಲಾಗಿದೆ.

ಕಳೆದ 6 ತಿಂಗಳಿನಿಂದ ಜಾರಿಯಾಗದಿರುವ 5,500 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿ ಮಾಡಲಾಗಿದ್ದು, ಕಳೆದ 03 ತಿಂಗಳಲ್ಲಿ ಒಟ್ಟು 24,959 ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 30,418 ಭದ್ರತಾ ಪಕರಣಗಳನ್ನು ದಾಖಲಿಸಲಾಗಿದ್ದು, ಅವುಗಳಲ್ಲಿ ಸನ್ನಡತೆ ಆಧಾರದ ಮೇಲೆ 53,406 ವ್ಯಕ್ತಿಗಳನ್ನು ಬಾಂಡ್ ಓವರ್ ಮಾಡಲಾಗಿದೆ. ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ 115 ಪ್ರಕರಣಗಳಲ್ಲಿ ರೂ. 157 ಕೋಟಿ‌ ರೂ. ಮುಟ್ಟುಗೋಲು ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ರಾಜ್ಯದ ಎಲ್ಲೆಡೆ ಮತದಾನಕ್ಕೆ ಸಕಲ ಸಿದ್ಧತೆ: ಬಿಗಿ ಬಂದೋಬಸ್ತ್ ವ್ಯವಸ್ಥೆ

ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ತೊಡಕಾಗದಂತೆ ಶಾಂತಿಯುತವಾದ ಮತದಾನಕ್ಕಾಗಿ ಕ್ರಿಮಿನಲ್ ಹಿನ್ನೆಲೆಯುಳ್ಳ 714 ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. 68 ಹವ್ಯಾಸಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ‌. ಪಕ್ಕದ ರಾಜ್ಯಗಳ ಗಡಿಭಾಗಗಳಲ್ಲಿ ಶಾಂತಿ, ಸೌಹಾರ್ದತೆಯ ಕಾಪಾಡುವ ನಿಟ್ಟಿನಲ್ಲಿ ವಿವಿಧ ಹಂತದ ಅಧಿಕಾರಿಗಳಾದ ಐಜಿಪಿ, ಎಸ್‌ಪಿ, ಡಿಸಿ ಹಾಗೂ ಇತರ ಅಧಿಕಾರಿಗಳ ನೇತೃತ್ವದಲ್ಲಿ ಅಂತರ್ ರಾಜ್ಯ ಗಡಿಭಾಗದ ಜಿಲ್ಲೆಯ ಅಧಿಕಾರಿಗಳೊಂದಿಗೆ 50ಕ್ಕೂ ಹೆಚ್ಚು ಸಮನ್ವಯ ಸಭೆಗಳನ್ನು ನಡೆಸಲಾಗಿದೆ. ಚುನಾವಣೆಯಲ್ಲಿ ನೆರೆ ರಾಜ್ಯಗಳಿಂದ ಅನಧಿಕೃತ ಹಣ, ಮದ್ಯ, ಉಚಿತ ಹಾಗೂ ಇತರೆ ವಸ್ತುಗಳು ಮತ್ತು ರೌಡಿ ಆಸಾಮಿಗಳು ಹಾಗೂ ಸಮಾಜಘಾತುಕ ವ್ಯಕ್ತಿಗಳ ಚಲನವಲನದ ಬಗ್ಗೆ ಸೂಕ್ಷ್ಮ ನಿಗಾವಹಿಸಲು ಗಡಿಭಾಗದ ಚೆಕ್‌ ಪೋಸ್ಟ್‌ಗಳಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ. ಇದೇ ಕಾರಣಕ್ಕಾಗಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.

ಚುನಾವಣಾ ಕರ್ತವ್ಯಕ್ಕಾಗಿ ನೇಮಿಸಲಾದ ಒಟ್ಟು 650 ಸಿಎಪಿಎಫ್ ಕಂಪನಿಗಳಲ್ಲಿ 101 ಸಿಆರ್‌ಪಿಎಫ್, 108 ಬಿಎಸ್‌ಎಫ್, 75 ಸಿಐಎಸ್‌ಎಫ್, 70 ಐಟಿಬಿಪಿ, 75 ಎಸ್‌ಎಸ್‌ಬಿ, 35 ಆರ್ ಪಿಎಫ್ ಮತ್ತು 186 ಎಸ್‌ಪಿ ಕಂಪನಿಗಳಿದ್ದು, ಅವುಗಳನ್ನು ಸೂಕ್ಷ್ಮ ವಿಧಾನಸಭಾ ಕ್ಷೇತ್ರಗಳ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ನಿಯೋಜಿಸಲಾಗಿದೆ. ರಾಜಕೀಯ ಮತ್ತು ವೆಚ್ಚ ನಿರ್ವಹಣೆಯಲ್ಲಿ ಸೂಕ್ಷ್ಮವಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ರೂಟ್, ಮಾರ್ಚ್ ಮಾಡಿಸುವ ಮೂಲಕ ಕಾನೂನು ಸುವ್ಯವಸ್ಥೆ ಜಾಗೃತಿ ಮೂಡಿಸಲಾಗಿದೆ ಹಾಗೂ ಎಫ್‌ಎಸ್‌ಟಿ, ಎಸ್‌.ಎಸ್‌ಟಿ, ಇವಿಎಂ ರಕ್ಷಣೆ, ಸೂಕ್ಷ್ಮ ಮತಗಟ್ಟೆಗಳನ್ನು ಹೊಂದಿರುವ ಕ್ಲಸ್ಟರ್, ಮತಗಟ್ಟೆಗಳಲ್ಲಿ ಈ ಕಂಪನಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ಒಟ್ಟಾರೆಯಾಗಿ ಶಾಂತಿಯುತ ಮತದಾನ, ಚುನಾವಣಾ ಅಕ್ರಮ ತಡೆಯಲು ಪೊಲೀಸರು ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ:  ಬಳ್ಳಾರಿ, ಯಾದಗಿರಿ ಜಿಲ್ಲೆಯಲ್ಲಿ ಹೇಗಿದೆ ಚುನವಣಾ ಸಿದ್ಧತೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News