ಅಲರ್ಟ್ ಆದ ಕಾಂಗ್ರೆಸ್ : ಗೆದ್ದವರನ್ನು ಬೆಂಗಳೂರಿಗೆ ಕರೆ ತರಲು ಜಿಲ್ಲಾಧ್ಯಕ್ಷರಿಗೆ ಸೂಚನೆ
ಅತಂತ್ರ ಫಲಿತಾಂಶ ಬಂದರೆ ಮತ್ತೆ ಅಪರೇಷನ್ ಭಯ ಪಕ್ಷಗಳನ್ನು ಕಾಡುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೆಚ್ಚು ಅಲರ್ಟ್ ಆಗಿವೆ. ಗೆದ್ದವರನ್ನು ಬೆಂಗಳೂರಿಗೆ ಕರೆ ತರಲು ಪಕ್ಷದ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು : ಮತದಾನದ ನಂತರ ಬಂದ ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ರಚನೆಯಾಗುವ ಮುನ್ಸೂಚನೆ ಸಿಕ್ಕಿದೆ. ಆದರೆ ತನಗೆ ಸ್ಪಷ್ಟ ಬಹುಮತ ಸಿಗಲಿದೆ ಎನ್ನುವ ವಿಶ್ವಾಸವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಅನ್ನು ಈಗಾಗಲೇ ಎರಡೂ ರಾಷ್ಟ್ರೀಯ ಪಕ್ಷಗಳು ಸಂಪರ್ಕಿಸಿವೆ ಎನ್ನುವ ಮಾತುಗಳು ಕೂಡಾ ಕೇಳಿ ಬರುತ್ತಿವೆ.
ಅಲರ್ಟ್ ಆದ ಕಾಂಗ್ರೆಸ್ :
ಅತಂತ್ರ ಫಲಿತಾಂಶ ಬಂದರೆ ಮತ್ತೆ ಅಪರೇಷನ್ ಭಯ ಪಕ್ಷಗಳನ್ನು ಕಾಡುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೆಚ್ಚು ಅಲರ್ಟ್ ಆಗಿವೆ. ಗೆದ್ದವರನ್ನು ಬೆಂಗಳೂರಿಗೆ ಕರೆ ತರಲು ಪಕ್ಷದ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ. ಗೆದ್ದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಯಾರ ಕೈಗೂ ಸಿಗಬಾರದು. ಗೆದ್ದ ಅಭ್ಯರ್ಥಿಗಳನ್ನು ಬೆಂಗಳೂರಿಗೆ ಸುರಕ್ಷಿತವಾಗಿ ಕರೆದುಕೊಂಡು ಬರಬೇಕು ಎನ್ನುವ ಜವಾಬ್ದಾರಿಯನ್ನು ಪ್ರತಿ ಜಿಲ್ಲೆಯ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಿಗೆ ಡಿಕೆಶಿ, ಸುರ್ಜೆವಾಲಾ ನೀಡಿದ್ದಾರೆ.
ಇದನ್ನೂ ಓದಿ : ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಹುಮತದ ವಿಶ್ವಾಸ :
ಇದೇ ವೇಳೆ, ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸವನ್ನು ಸುರ್ಜೇವಾಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಭರ್ಜರಿ ಬಹುಮತದಿಂದ ಗೆಲ್ಲಲಿದೆ ಎಂದಿದ್ದಾರೆ. ಕಾಂಗ್ರೆಸ್ ಮೊದಲು ತನ್ನ ಐದು ಭರವಸೆಗಳನ್ನ ಕಾಂಗ್ರೆಸ್ ಮೊದಲು ಈಡೇರಿಸಲಿದೆ ಎಂದು ಕೂಡಾ ಅವರು ಹೇಳಿದ್ದಾರೆ. ಅಲ್ಲದೆ, ಮೋದಿ ಮತ್ತು ಬಿಜೆಪಿ ಗೊಂದಲಕ್ಕೊಳಗಾಗಿದ್ದಾರೆ. ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ
ಕನ್ನಡಿಗರೇ ನಮಗೆ ಕೇಂದ್ರ ಬಿಂದು ಎಂದು ಸುರ್ಜೆವಾಲ ಹೇಳಿದ್ದಾರೆ.
ದೇವರ ಮೊರೆ ಹೋದ ಡಿಕೆಶಿ :
ಇನ್ನು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಮಿಳುನಾಡಿನ ತಿರುನಾಮಲೈ ದೇವಸ್ಥಾನಕ್ಕೆ ತೆರಳಲಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಹೆಲಿಕಾಪ್ಟರ್ ಮೂಲಕ ಡಿಕೆಶಿ ಪ್ರಯಾಣ ಬೆಳಸಲಿದ್ದಾರೆ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಲಿರುವ ಡಿಕೆಶಿ ಅರುಣಾಚಲೇಶ್ವರಿಗೆ ಪೂಜೆ ಸಲ್ಲಿಸಲಿದ್ದಾರೆ. ರಾಜ್ಯದ ಗದ್ದುಗೆ ಹಿಡಿಯಲು ಡಿಕೆಶಿ ದೇವರ ಮೊರೆ ಹೋಗುತ್ತಿದ್ದಾರೆ ಎನ್ನುವ ಮಾತು ಕೂಡಾ ಕೇಳಿ ಬಂದಿದೆ.
ಇದನ್ನೂ ಓದಿ : Chakraborty Sulibele : ಅವಿದ್ಯಾವಂತರು ಹೆಚ್ಚಾಗಿ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ - ಚಕ್ರವರ್ತಿ ಸೂಲಿಬೆಲೆ !
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.