ʼಬಿಜೆಪಿʼ ತಂತ್ರಗಾರಿಕೆಗೆ ಬಲಿಯಾಗದಂತೆ ತಡೆಯಲು ಅಭ್ಯರ್ಥಿಗಳ ಸಭೆ ಕರೆದ ʼಕಾಂಗ್ರೆಸ್ʼ..!
Congress candidates Meeting : ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಯ ವರದಿ ಪ್ರಕಟವಾಗಿದೆ. ಈ ಬಾರಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ತಮ್ಮ ಅಭ್ಯರ್ಥಿಗಳನ್ನು ಬಿಜೆಪಿ ಆಮಿಷಕ್ಕೆ ಒಳಗಾಗದಂತೆ ತಡೆಯಲು ಸಭೆ ಕರೆದಿದೆ.
ಬೆಂಗಳೂರು : ಈಗಾಗಲೇ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನವಾಗಿದೆ. ವಿವಿಧ ಸಂಸ್ಥೆಗಳು ಮತ್ತು ಮಾಧ್ಯಮಗಳು ನಡೆಸಿದ ಎಕ್ಸಿಪ್ ಪೋಲ್ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮತ್ತೊಮ್ಮೆ ಅತಂತ್ರ ಫಲಿತಾಂಶ ಬರುವ ನಿಟ್ಟಿನಲ್ಲಿ ಮೂರು ಪಕ್ಷಗಳು ತಮ್ಮ ಅಭ್ಯರ್ಥಿಗಳ ಕಾಪಾಡಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಸಭೆ ಕರೆದು ಬಿಜೆಪಿ ಆಮಿಷಕ್ಕೆ ಬಲಿಯಾಗದಂತೆ ತೆಡೆಯಲು ಸಭೆ ಕರೆದಿದೆ.
ಹೌದು.. ಅತಂತ್ರ ಫಲಿತಾಂಶದ ಸಾಧ್ಯತೆ ಹಿನ್ನೆಲೆ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಈ ನಿಟ್ಟಿನಲ್ಲಿ ಇಂದು ತಡರಾತ್ರಿ ಕೈ ನಾಯಕರು ಝೂಮ್ ಮೀಟಿಂಗ್ ನಡೆಸಲಿದ್ದಾರೆ. ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಜೊತೆಗೂ ಝೂಮ್ ಮೀಟಿಂಗ್ ಚರ್ಚೆ ಮಾಡಲಿದ್ದಾರೆ. ಸುರ್ಜೇವಾಲ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಇದನ್ನೂ ಓದಿ: ಮೇ 13 ರಂದು ಮತ ಎಣಿಕೆ ಹಿನ್ನೆಲೆ ಬೆಂಗಳೂರಿನಾದ್ಯಂತ 144 ಸೆಕ್ಷನ್ ಜಾರಿ..!
ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಾರದಿದ್ದರೆ ಗೆದ್ದವರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿಯ ಆಮಿಷಗಳಿಗೆ ಒಳಗಾಗದಂತೆ ನೋಡಿ ಕೊಳ್ಳಲು ಹಾಗು ಮುಂದಿನ ತಂತ್ರಗಾರಿಕೆ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರು, ಸೂಚ್ಯವಾಗಿ ಸೂಚನೆ ನೀಡಲಿದ್ದಾರೆ. ಅಲ್ಲದೆ, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಕೈಗೊಳ್ಳಬೇಕಾದ ನಿರ್ಧಾರ ಬಗ್ಗೆಯೂ ಕೆಲವು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.
ಇನ್ನು ಮೇ 13ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಅಲ್ಲದೆ, ಮಾಧ್ಯಮ ಮತ್ತು ವಿವಿಧ ಸಂಸ್ಥೆಗಳ ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ ಈ ಭಾರಿ ಕಾಂಗ್ರೆಸ್‌ಗೆ ಹೆಚ್ಚಿನ ಮತಗಳು ಬರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಆದರೂ ಬಿಜೆಪಿ ತಂತ್ರಗಾರಿಕೆಯಿಂದ ತಮ್ಮ ಅಭ್ಯರ್ಥಿಗಳನ್ನು ರಕ್ಷಿಸಲು ಕೈ ಪಡೆ ಸಿದ್ಧವಾಗಿದ್ದು, ಸಭೆ ಕರೆದಿದೆ. ಒಂದು ವೇಳೆ ಬಹುಮತ ಬಂದರೆ ಯಾವ ರೀತಿಯ ನಿರ್ಧಾರ ಕೈಗೊಳ್ಳಬೇಕು ಎನ್ನುವುದಾಗಿಯೂ ಸಹ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ