ಇನ್ನೂ15 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬಾಕಿ..! ಆ ಕ್ಷೇತ್ರಗಳ ಪಟ್ಟಿ ಇಲ್ಲಿದೆ ನೋಡಿ..

43 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ಇನ್ನು 15 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಆಗಬೇಕಿದೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಸೇರಿದಂತೆ ಒಟ್ಟು 15 ಕ್ಷೇತ್ರಗಳಿಗೆ ನಾಲ್ಕನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

Written by - RACHAPPA SUTTUR | Edited by - Krishna N K | Last Updated : Apr 15, 2023, 03:55 PM IST
  • ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ.
  • ಇನ್ನು 15 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಆಗಬೇಕಿದೆ.
  • ನಾಲ್ಕನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಇನ್ನೂ15 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬಾಕಿ..! ಆ ಕ್ಷೇತ್ರಗಳ ಪಟ್ಟಿ ಇಲ್ಲಿದೆ ನೋಡಿ.. title=

ಬೆಂಗಳೂರು : ಬಾಕಿ ಉಳಿದಿದ್ದ 58 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ಇನ್ನು 15 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಆಗಬೇಕಿದೆ. ಈ ಪೈಕಿ ಹರಿಹರ, ಪುಲಕೇಶಿ ನಗರ, ಶಿಡ್ಲಘಟ್ಟ ಹಾಲಿ ಶಾಸಕರ ಕ್ಷೇತ್ರಗಳ ಹೆಸರು ಘೋಷಣೆ ಆಗಿಲ್ಲ. 

ಘೋಷಣೆ ಆಗದೆ ಬಾಕಿ ಉಳಿದ ಕ್ಷೇತ್ರಗಳು ಯಾವುವು ಅಂತ ನೋಡುವುದಾದರೆ, ಪುಲಕೇಶಿ ನಗರ, ಸಿವಿ ರಾಮನ್ ನಗರ, ಮುಳಬಾಗಿಲು, ರಾಯಚೂರು ಸಿಟಿ, ಶಿಗ್ಗಾಂವಿ, ಶ್ರವಣಬೆಳಗೊಳ, ಅರಕಲಗೂಡು, ಲಿಂಗಸೂರು, ಹುಬ್ಬಳ್ಳಿ ಧಾರವಾಡ ಸೆಂಟ್ರಲ್, ಹುಬ್ಬಳ್ಳಿ ಧಾರವಾಡ ವೆಸ್ಟ್, ಮಂಗಳೂರು ‌ಉತ್ತರ, ಶಿಡ್ಲಘಟ್ಟ, ಚಿಕ್ಕಮಗಳೂರು, 
ಕೆ.ಆರ್ ಪುರಂ, ಸೇರಿದಂತೆ ಹರಿಹರಕ್ಕೂ ಕಾಂಗ್ರೆಸ್‌ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

ಇದನ್ನೂ ಓದಿ:

ಇನ್ನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಗೋಣಿ ಮಾಲತೇಶ್‌ಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಲ್ಲಿ ನಾಗರಾಜ್ ಗೌಡ ಹಾಗೂ ಗೋಣಿ ಮಾಲತೇಶ್ ನಡುವೆ ಪೈಪೋಟಿ ಇತ್ತು. ಕೊನೆಗೂ ಗೋಣಿ ಮಾಲತೇಶ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬಿಡುಗಡೆಯಾದ ಕೈ ಮೂರನೇ ಪಟ್ಟಿಯಲ್ಲಿ ಒಟ್ಟು 43 ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು  ಘೋಷಣೆ ಮಾಡಲಾಗಿದೆ. ಈ ಪೈಕಿ ಲಕ್ಷ್ಮಣ್‌ ಸವದಿ ಕೂಡ ಒಬ್ಬರು.

 

Trending News