ಅಮಿತ್ ಶಾ ಅವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು !

Karnataka Election 2023 : ಬಿಜೆಪಿ ಪ್ರಚಾರ ಸಮಯದಲ್ಲಿ ಕಾಂಗ್ರೆಸ್ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿರುವ  ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ವಿರುದ್ಧ  ಕಾಂಗ್ರೆಸ್ ದೂರು ದಾಖಲಿಸಿದೆ. ಅಮಿತ್ ಶಾ ಅವರ ಬಂಧನವಾಗಬೇಕು ಎಂದು ಆಗ್ರಹಿಸಿದ್ದಾರೆ.    

Written by - Prashobh Devanahalli | Edited by - Ranjitha R K | Last Updated : Apr 27, 2023, 12:58 PM IST
  • ಅಮಿತ್ ಶಾ ವಿರುದ್ದ ಕಾಂಗ್ರೆಸ್ ದೂರು
  • ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಂಬಂಧ ದೂರು
  • ಅಮಿತ್ ಶಾ ಬಂಧನಕ್ಕೆ ಆಗ್ರಹ
ಅಮಿತ್ ಶಾ ಅವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು !  title=

ಬೆಂಗಳೂರು :  ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಂಬಂಧ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಕಾಂಗ್ರೆಸ್ ದೂರು ನೀಡಿದೆ. ಕಾಂಗ್ರೆಸ್ ಪಕ್ಷದ ನಿಯೋಗವು  ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಅಮಿತ್ ಶಾ ವಿರುದ್ದ ದೂರು ದಾಖಲಿಸಿದೆ. 

ಜಾತಿ ಧರ್ಮಗಳ ಹೆಸರಿನಲ್ಲಿ ದ್ವೇಷ ಹರಡಿ ಕರ್ನಾಟಕ ರಾಜ್ಯದ ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಲ್ಲದೆ ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪ ಮಾಡಲಾಗಿದೆ ಎಂದು ಆಪಾದಿಸಲಾಗಿದೆ. 

ಇದನ್ನೂ ಓದಿ ನಾವೇಕೆ ಕಡ್ಡಾಯವಾಗಿ ಮತದಾನ ಮಾಡಬೇಕು?

ಏಪ್ರಿಲ್ 26ರಂದು ಕೇಂದ್ರ ಸಚಿವ ಅಮಿತ್ ಶಾ ಅವರು ಬಿಜೆಪಿ ಪ್ರಚಾರ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕೋಮು ಗಲಭೆಗಳು ಹೆಚ್ಚಲಿವೆ ಎಂಬ ಸುಳ್ಳು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಿಎಫ್ಐ ಮೇಲಿನ ನಿಷೇಧ ಹಿಂಪಡೆಯಲಿದೆ ಎಂಬ ಆಧಾರರಹಿತ ಹೇಳಿಕೆ ನೀಡಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ದ್ವೇಷ ಹರಡಿ ಕೋಮು ಸೌಹಾರ್ದತೆಗೆ ಧಕ್ಕೆ ತಂದು ಚುನಾವಣೆಯಲ್ಲಿ ಅಕ್ರಮ ನಡೆಸುವುದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. 

ಅಮಿತ್ ಶಾ ಅವರ ಸುಳ್ಳು ಆರೋಪಗಳು ಉದ್ದೇಶಪೂರ್ವಕವಾಗಿದೆ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಅನೇಕ ತಿಂಗಳುಗಳ ಕಾಲ ಪಿಎಫ್ಐ ನಿಷೇಧಕ್ಕೆ ಆಗ್ರಹ ಮಾಡಿದ್ದರೂ ಬೊಮ್ಮಾಯಿ ಸರ್ಕಾರ  ನಿಷೇಧಕ್ಕೆ ಮುಂದಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರ ದಶಕಗಳ ಕಾಲ ರಾಜ್ಯವನ್ನು ಆಳಿದೆ.  2013ರಿಂದ 2018ರ ಸರ್ಕಾರದಲ್ಲಿ ಕಾಂಗ್ರೆಸ್ ಸರ್ಕಾರ ಕೋಮುಗಲಭೆಗೆ ಆಸ್ಪದ ನೀಡಿರಲಿಲ್ಲ. ಕಾಂಗ್ರೆಸ್ ಪಿಎಫ್ಐ ನಿಷೇಧಕ್ಕೆ ಆಗ್ರಹಿಸಿತ್ತೇ ಹೊರತು, ಪಿಎಫ್ಐ ನಿಷೇಧ ಹಿಂಪಡೆಯುವ ಭರವಸೆ ನೀಡಿಲ್ಲ ಎಂದು ಹೇಳಿದೆ. ಬಿಜೆಪಿ ಸೋಲುವ ಭಯದಲ್ಲಿ, ಕಾಂಗ್ರೆಸ್ ವಿರುದ್ದ ಸುಳ್ಳು ಆರೋಪ ಮಾಡುತ್ತಿದೆ ಎಂದು ಹೇಳಿದೆ. 40ಕ್ಕಿಂತ ಕಡಿಮೆ ಸೀಟು ಸಿಗುವ ಕಾರಣ ಅಮಿತ್ ಶಾ, ಜೆ.ಪಿ ನಡ್ಡಾ, ಯೋಗಿ ಆದಿತ್ಯನಾಥ್ ಅವರು ಹತಾಶರಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದೆ. 

ಇದನ್ನೂ ಓದಿ : ಕರುನಾಡಿನಲ್ಲಿ ರಾಹುಲ್‌ ಗಾಂಧಿ, ಮಂಗಳೂರಿನಲ್ಲಿ ರಾಗಾ ಭರ್ಜರಿ ರೋಡ್‌ ಶೋ

ಕೇಂದ್ರ ಗೃಹ ಸಚಿವರು ಇಂತಹ ಷಡ್ಯಂತ್ರಗಳನ್ನು ಬೇರೆ ರಾಜ್ಯಗಳಲ್ಲಿ ಪ್ರಯೋಗಿಸಬಹುದು. ಆದರೆ ಕರ್ನಾಟಕದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಕಾನೂನಿನ ಅರಿವಿದೆ. ಅಮಿತ್ ಶಾ ಹಾಗೂ ಬಿಜೆಪಿಯ ನಾಯಕರ ಸುಳ್ಳು ಹಾಗೂ ಆಧಾರರಹಿತ ಆರೋಪ ಹಾಗೂ ದ್ವೇಷ ಭಾಷಣದ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 171ಜಿ, 505, 120ಬಿ, 123 ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕು ಎಂದು ದೂರು ನೀಡಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ. ಅಮಿತ್ ಶಾ ಅವರ ಬಂಧನವಾಗಬೇಕು ಎಂದು ಆಗ್ರಹಿಸಿದ್ದಾರೆ. 

ಈ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ.  ಮುಖ್ಯಚುನಾವಣಾಧಿಕಾರಿಗಳು ನನಗೆ ಪತ್ರ ಬರೆದಿದ್ದು, ನಾಳೆ ಸಂಜೆ 4 ಗಂಟೆಗೆ ಈ ವಿಚಾರವಾಗಿ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ರಣದೀಪ್ ಸಿಂಗ್ ಸುರ್ಜೆವಾಲ  ಹೇಳಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣವಾಗಿರುವುದರಿಂದ ಅಮಿತ್ ಶಾ ಅವರನ್ನು ರಾಜ್ಯ ಚುನಾವಣಾ ಪ್ರಕ್ರಿಯೆಯಿಂದ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. 

ಇದನ್ನೂ ಓದಿ : "ಅಮಿತ್ ಶಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ"-ಸಿದ್ದರಾಮಯ್ಯ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News