ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಖಾಡ ದಿನೆ ದಿನೇ ರಂಗೇರುತ್ತಿದೆ. ಎಲ್ಲ ಪಕ್ಷಗಳ ನಾಯಕರು ಮತದಾರರ ಮನವೊಲಿಸುವ ಯತ್ನದಲ್ಲಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಮತಬೇಟೆಯಾಡುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಭಾನುವಾರ ನಡೆಯಲಿರುವ ಬಸವ ಜಯಂತಿ ಆಚರಣೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾಗವಹಿಸಲಿದ್ದು, ವಿಧಾನಸಭಾ ಚುನಾವಣೆಗೂ ಮುನ್ನ ಲಿಂಗಾಯತರ ಮತ ಬ್ಯಾಂಕ್‌ ಸೆಳೆಯಲು ಕೈ ನಾಯಕರು ಭರ್ಜರಿ ತಂತ್ರ ರೂಪಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಾಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸುವ ರಾಹುಲ್ ಗಾಂಧಿ ಬಾಗಲಕೋಟೆಯ ಕೂಡಲಸಂಗಮ ಕ್ಷೇತ್ರಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಿ ಅಲ್ಲಿ ಕೂಡಲಸಂಗಮ ದೇವಸ್ಥಾನ ಹಾಗೂ ಬಸವಣ್ಣನವರ ಏಕತಾ ಭವನಕ್ಕೆ ಭೇಟಿ ನೀಡಲಿದ್ದಾರೆ.


ಇದನ್ನೂ ಓದಿ: HD Kumaraswamy: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಜ್ವರ! ಮಣಿಪಾಲ್ ಆಸ್ಪತ್ರೆಗೆ ದಾಖಲು


ಕೂಡಲಸಂಗಮದ ಬಸವ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ದಾಸೋಹ ಭವನದಲ್ಲಿ ಪ್ರಸಾದ ವಿನಿಯೋಗ ಮಾಡುವರು. ಸಂಜೆ ವಿಜಯಪುರಕ್ಕೆ ತೆರಳಿ ಸಂಜೆ 5ರಿಂದ 6.30ರವರೆಗೆ ಪಥಸಂಚಲನ ನಡೆಸಲಿದ್ದಾರೆ. 


ರಾಹುಲ್ ಗಾಂಧಿ ಈ ತಿಂಗಳ ಆರಂಭದಲ್ಲಿ ಕೋಲಾರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಹೊಸ ವಿಧಾನಸಭೆಯನ್ನು ಆಯ್ಕೆ ಮಾಡಲು ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ ಎಲ್ಲ ಪಕ್ಷಗಳು ತಮ್ಮದೇ ರಣತಂತ್ರ ಹೆಣೆದು ಚುನಾವಣಾ ಅಖಾಡದಲ್ಲಿ ಮತ ಸೆಳೆಯುವ ಕಾರ್ಯದಲ್ಲಿ ತೊಡಗಿವೆ. 


ಇದನ್ನೂ ಓದಿ: ಬಿಜೆಪಿಯ ಷಡ್ಯಂತ್ರಗಳಿಗೆ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ: ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.