Karnataka Assembly Elections 2023: ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ ಹಾಗೂ ಪಿಎಫ್ಐ ಕಪಿಮುಷ್ಟಿಯಲ್ಲಿದ್ದು, ಅದರಿಂದ ಹೊರಬರಲು ಸಾಧ್ಯವಿಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತನಾಡಿದರೆ  ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ.  ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಪಿಎಫ್ಐ ಬ್ಯಾನ್ ಆಗಿದ್ದರೂ ತಮ್ಮ ಪರವಾಗಿ ಮಾತನಾಡುತ್ತಿಲ್ಲ  ಎಂಬ ಅಸಮಾಧಾನ ಪಿಎಪಿಐಗಿದೆ. ನಮಗೆ ರಕ್ಷಣೆ ಕೊಡುತ್ತಿಲ್ಲ. ನಾವು ಯಾಕೆ ನಿಮಗೆ ರಕ್ಷಣೆ ಕೊಡಬೇಕು ಅಂತ ಪಿ.ಎಫ್.ಐ ನಾಯಕರು ಪ್ರಶ್ನಿಸುತ್ತಿದ್ದಾರೆ ಎಂದರು.


ಇದನ್ನೂ ಓದಿ- No Alchohol: ಮದ್ಯ ಪ್ರಿಯರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಈ 3 ದಿನ ಎಣ್ಣೆ ಸಿಗೋದು ಡೌಟ್!


ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ:
ಪಿ.ಎಫ್.ಐ. ನ ಇನ್ನೊಂದು ರೂಪ ಎಸ್.ಡಿ.ಪಿ.ಐ ಬೆಂಬಲವನ್ನು ಕಾಂಗ್ರೆಸ್ ಬಹಿರಂಗವಾಗಿ ಕೇಳಿತ್ತು. ಆದರೆ ಅವರು ಕೊಡುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ನ ಕಾಲದಲ್ಲಿ ಎಸ್.ಡಿ‌.ಪಿ.ಐ., ಪಿ.ಎಫ್.ಐ ಪ್ರಬಲವಾಗಿ ಬೆಳೆದಿದ್ದವು. ಸದ್ಯ ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ ಇದೆ. ಎಸ್.ಡಿ.ಪಿ.ಐ‌ ಬಿಜೆಪಿಯ ಬಿ. ಟೀಂ ಅಲ್ಲ. ಬಿ ಟೀಂ ಆಗಿದ್ದರೆ ನಾವು ಪಿ.ಎಫ್.ಐ ಬ್ಯಾನ್ ಮಾಡುತ್ತಿದ್ದವಾ? ತಾವು ಮಾಡಿದ ತಪ್ಪನ್ನು ಮುಚ್ಚಲು ಈ ರೀತಿಯ ಆರೋಪ‌ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ವಾಗ್ಧಾಳಿ ನಡೆಸಿದರು. 


ರಾಮನಿಗೂ ಹನುಮನಿಗೂ ಇರುವ ಸಂಬಂಧ!
ಇದೇ ಸಂದರ್ಭದಲ್ಲಿ ಭಜರಂಗ ದಳಕ್ಕೆ ಆಂಜನೇಯನಿಗೆ ಏನು ಸಂಬಂಧ ಎಂಬ  ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,  ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ ಆಂಜನೇಯನಿಗೂ ಭಜರಂಗ ದಳಕ್ಕಿದೆ.  ಇದನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು. ಜನರ ಭಾವನೆಗಳ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲ ಎಂದರು.


ಇದನ್ನೂ ಓದಿ- ಕೊಪ್ಪಳದಲ್ಲಿ ಹೇಗಿದೆ ಚುನಾವಣಾ ಕಾವು ! ಇಲ್ಲಿ ಗೆಲ್ಲುವವರು ಯಾರು ?


ತುಷ್ಟೀಕರಣ ರಾಜಕಾರಣ:
ನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ಕಾಂಗ್ರೆಸ್  ಅವರು  ಭರವಸೆಗಳ ಮೇಲೆ ಚುನಾವಣೆ ಎದುರಿಸುತ್ತಿದ್ದಾರೆ.  ಅನವಶ್ಯಕವಾಗಿ ಕೆದಕಿ ಕೆದಕಿ ಚುನಾವಣೆಯ ವಾತಾವರಣವನ್ನು ಜಾತಿ, ಧರ್ಮ, ಕೋಮು ಭಾವನೆಗಳ ಮೂಲಕ ಕೆರಳಿಸೋದು ಸರಿಯಲ್ಲ.  ಇದು ಕಾಂಗ್ರೆಸ್ ನ ತುಷ್ಟೀಕರಣ ರಾಜಕಾರಣ ತೋರ್ಪಡಿಸುತ್ತೆ ಎಂದು ಇದೇ ವೇಳೆ ಸಿಎಂ ಆಕ್ರೋಶ ವ್ಯಕ್ತಪಡಿಸಿದರು. 


ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹುಬ್ಬಳ್ಳಿ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,  ಸೋನಿಯಾಗಾಂಧಿ ಬರಲಿ ನಾವು ಕಾಂಗ್ರೆಸ್ ನಾಯಕರ ರೀತಿ ಅಳೋಲ್ಲ.  ಮೋದಿ, ಅಮಿತ್ ಶಾ ಯಾಕೆ ಬಂದರು ಎಂದು  ಕಾಂಗ್ರೆಸ್ ನವರು ಕೇಳಿದಂತೆ ನಾವು ಕೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.


ಇದನ್ನೂ ಓದಿ- ತಮ್ಮ ಕಚೇರಿಯಲ್ಲಿರುವ ಪ್ರಧಾನಿ ಮೋದಿ ,ಶಾ ಫೋಟೋ ತೆಗೆಯಲ್ಲ ಎಂದ ಜಗದೀಶ್ ಶೆಟ್ಟರ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.