Karnataka CM Announcement: ನಾಳೆ ಬೆಂಗಳೂರಿನಲ್ಲೇ ನೂತನ ಮುಖ್ಯಮಂತ್ರಿ ಹೆಸರು ಘೋಷಣೆ?!
Who Will Become Karnataka CM: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಜನಾದೇಶದ ಹೊರತಾಗಿಯೂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು ರೇಸ್‍ನಲ್ಲಿರುವುದರಿಂದ ಮುಖ್ಯಮಂತ್ರಿ ಯಾರು ಅನ್ನೋ ಸಸ್ಪೆನ್ಸ್ ಮುಂದುವರೆದಿದೆ.
ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಚರ್ಚೆ ನಡೆಸುತ್ತಿದೆ. ಬಲ್ಲ ಮೂಲಗಳ ಪ್ರಕಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ನಾಳೆ(ಮೇ 16) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹೆಸರು ಘೋಷಿಸಲಿದ್ದಾರೆಂದು ತಿಳಿದುಬಂದಿದೆ.
ಕಾಂಗ್ರೆಸ್ ಅಧಿನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚಿಸಿದ ನಂತರ ಖರ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕರ್ನಾಟಕ ಸಿಎಂ ಸ್ಥಾನದ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂ ಡಿಲ್ಲ. ಕಾಂಗ್ರೆಸ್ ಅಧ್ಯಕ್ಷರು ಎಲ್ಲರನ್ನೂ ಭೇಟಿ ಮಾಡಿದ್ದಾರೆ. ಇದೀಗ ರಾಹುಲ್ ಗಾಂಧಿ ಮತ್ತು ಸೋನಿಯಾಗಾಂ ಧಿ ಅವರೊಂದಿಗೆ ಸಮಾಲೋಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸಿಎಂ ಆಯ್ಕೆ ವಿಚಾರ ನಾಳೆಯವರೆಗೆ ವಿಳಂಬವಾಗಬಹುದು ಮತ್ತು ಬೆಂಗಳೂರಿನಲ್ಲಿಯೇ ಸಿಎಂ ಯಾರೆಂದು ಘೋಷಣೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಉಚಿತ ಭಾಗ್ಯಗಳಿಗೆ ಷರತ್ತು ವಿಧಿಸುವುದು ಸರಿಯಲ್ಲ: ಡಾ.ಅಶ್ವತ್ಥ್ ನಾರಾಯಣ್
ಇದಕ್ಕೂ ಮುನ್ನ ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸಂಭಾವ್ಯ ಅಭ್ಯರ್ಥಿಗಳಾದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು. ಸಿದ್ದರಾಮಯ್ಯನವರು ತಮ್ಮ ಪುತ್ರ ಯತೀಂದ್ರ ಹಾಗೂ ಶಾಸಕರಾದ ಜಮೀರ್ ಅಹ್ಮದ್, ಭೈರತಿ ಸುರೇಶ್, ಹಿರಿಯ ನಾಯಕ ಕೆ.ಜೆ.ಜಾರ್ಜ್ ಅವರೊಂದಿಗೆ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಜನಾದೇಶದ ಹೊರತಾಗಿಯೂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು ರೇಸ್‍ನಲ್ಲಿರುವುದರಿಂದ ಮುಖ್ಯಮಂತ್ರಿ ಯಾರು ಅನ್ನೋ ಸಸ್ಪೆನ್ಸ್ ಮುಂದುವರೆದಿದೆ. ರಾಹುಲ್ ಗಾಂಧಿ ಮಂಗಳವಾರ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿ ಮಾಡಿದ್ದು, ಸೋಮವಾರ ಸಲ್ಲಿಸಿದ ಕಾಂಗ್ರೆಸ್ ಕೇಂದ್ರ ವೀಕ್ಷಕರ ವರದಿಯನ್ನು ಪರಿಶೀಲಿಸಿದ ನಂತರ ಅವರು ತಮ್ಮ ನಿರ್ಧಾರ ತೆಗೆದುಕೊಳ್ಳ ಲಿದ್ದಾರೆ. ಆದರೆ ಅನಾರೋಗ್ಯದ ಕಾರಣ ನೀಡಿ ಸೋ ಮವಾರ ಸಂಜೆ ರಾಷ್ಟ್ರ ರಾಜಧಾನಿ ಪ್ರವಾಸ ರದ್ದುಗೊಳಿಸಿದ್ದ ಡಿಕೆಶಿ ಮಂಗಳವಾರ ದೆಹಲಿಗೆ ಆಗಮಿಸಿದ್ದರು.
ಇದನ್ನೂ ಓದಿ: ನಾನೂ ಕೂಡ ಸಿಎಂ ಆಕಾಂಕ್ಷಿ: ಹೊಸ ಬಾಂಬ್ ಸಿಡಿಸಿದ ಡಾ. ಜಿ. ಪರಮೇಶ್ವರ್
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ‘ಪಕ್ಷದ ನಿರ್ಧಾರವನ್ನು ಲೆಕ್ಕಿಸದೆ ‘ಬೆನ್ನಿಗೆ ಚೂರಿ ಹಾಕುವ ಅಥವಾ ಬ್ಲ್ಯಾಕ್ಮೇಲ್ ರಾಜಕಾರಣವನ್ನು’ ನಾನು ಆಶ್ರಯಿಸುವುದಿಲ್ಲ ಎಂದು ಡಿಕೆಶಿ ಪರೋಕ್ಷವಾಗಿ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.