ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ; ಸಿಎಂ ಬೊಮ್ಮಾಯಿ ವಿರುದ್ಧ ಮೊಹಮ್ಮದ್ ಸವಣೂರ ಕಣಕ್ಕೆ

ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಮಂಗಳವಾರದಂದು ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಳಗೊಂಡಿರುವ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Written by - Zee Kannada News Desk | Last Updated : Apr 18, 2023, 09:45 PM IST
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮೊಹಮ್ಮದ್ ಯುಸೂಫ್ ಸವಣೂರ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ,
  • ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.
ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ; ಸಿಎಂ ಬೊಮ್ಮಾಯಿ ವಿರುದ್ಧ ಮೊಹಮ್ಮದ್ ಸವಣೂರ ಕಣಕ್ಕೆ title=
file photo

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಮಂಗಳವಾರದಂದು ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಳಗೊಂಡಿರುವ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮೊಹಮ್ಮದ್ ಯುಸೂಫ್ ಸವಣೂರ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ, ಇನ್ನೊಂದೆಡೆಗೆ ಈಗಾಗಲೇ ಘೋಷಿಸಿದಂತೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.

ಎಸ್ಟಿ ಮೀಸಲು ಕ್ಷೇತ್ರವಾಗಿರುವ ಲಿಂಗಸೂರಿಗೆ ದುರ್ಗಪ್ಪ ಹೂಲಗೇರಿ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ದೀಪಕ್ ಚಿಂಚೋರೆ,ಹರಿಹರ ಕ್ಷೇತ್ರದಿಂದ ನಂದಗಾವಿ ಶ್ರೀನಿವಾಸ್,ಚಿಕ್ಕಮಗಳೂರಿನಿಂದ ಎಚ್.ಡಿ.ತಿಮ್ಮಯ್ಯ, ಹಾಗೂ ಶ್ರವಣಬೆಳಗೊಳದಿಂದ ಎಂ.ಎ.ಗೋಪಾಲಸ್ವಾಮೀ ಅವರನ್ನು ಪಕ್ಷದ ಅಭ್ಯರ್ಥಿಗಳಾಗಿ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News