ಬೆಂಗಳೂರು: ಕಾಂಗ್ರೆಸ್ ಪಕ್ಷವು ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಆದರೆ ಅಚ್ಚರಿ ಎನ್ನುವಂತೆ ಈಗ ಅದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಿಸದೆ ಹಾಗೆ ಬಿಟ್ಟಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಉಂಡ ಮನೆಗೆ ಕನ್ನ ಹಾಕಿದ್ದ ಲೇಡಿ ಸೇರಿ ಮೂವರು ಐನಾತಿಗಳ ಬಂಧನ


ಹೌದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರವು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರವಾಗಿದ್ದು, ಇದರ ಜೊತೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿರುವ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್  ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸದೆ ಇರುವುದು ಈಗ ಹಲವು ವದಂತಿಗಳಿಗೆ ಎಡೆಮಾಡಿಕೊಟ್ಟಿದೆ.


ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಈಗಾಗಲೇ ಬಿಜೆಪಿಗೆ ಭಾರಿ ಹೊಡೆತ ಬಿದ್ದಿದೆ.ಈ ಬೆನ್ನಲ್ಲೇ ಈಗ ಮುಂಬೈ ಕರ್ನಾಟಕದ ಭಾಗದಲ್ಲಿ ಶೆಟ್ಟರ್ ಅವರನ್ನು ಕಾಂಗ್ರೆಸ್ ಗೆ ಆಹ್ವಾನ ನೀಡುವ ಮೂಲಕ ಬಿಜೆಪಿಗೆ ಚೆಕ್ ಮೆಟ್ ನೀಡುವ ಲೆಕ್ಕಾಚಾರ ಕಾಂಗ್ರೆಸ್ ಪಕ್ಷದ್ದಾಗಿದೆ.ಹಾಗಾಗಿ ಈಗ ಕಾಂಗ್ರೆಸ್ ಪಕ್ಷವು ಶೆಟ್ಟರ್ ಅವರ ಮುಂದಿನ ರಾಜಕೀಯ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.


ಇದನ್ನೂ ಓದಿ: Karnataka election 2023: ಮತ್ತೆ ಐವರು ಅಭ್ಯರ್ಥಿಗಳನ್ನು ಘೋಷಿಸಿದ ಎಚ್.ಡಿ.ಕುಮಾರಸ್ವಾಮಿ


ಈಗ ಶೆಟ್ಟರ್ ಈಗಾಗಲೇ ತಮ್ಮ ನಡೆಯನ್ನು ಸ್ಪಷ್ಟಪಡಿಸಿದ್ದು, ಕೇಂದ್ರ ಬಿಜೆಪಿ ನಾಯಕರ ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದ್ದಾರೆ ಒಂದು ವೇಳೆ ಅವರಿಗೆ ನಿರೀಕ್ಷಿತ ಉತ್ತರ ಹೈಕಮಾಂಡ್ ನಿಂದ ಬರದೆ ಹೋದಲ್ಲಿ ಶೆಟ್ಟರ್ ಬಂಡಾಯ ಏಳುವುದು ಖಚಿತ ಎಂದು ಹೇಳಲಾಗುತ್ತಿದೆ.ಈಗ ಈ ಕುರಿತಾಗಿ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಶೆಟ್ಟರ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಸಭೆಯ ನಂತರ ಶೆಟ್ಟರ್ ತಮ್ಮ ಬೆಂಬಲಿಗರೊಂದಿಗೆ ಮತ್ತೊಂದು ಸಭೆ ನಡೆಸುತ್ತಿದ್ದು, ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.


ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಿಸಿದರೆ ರಾಜ್ಯದಲ್ಲಿ ಕನಿಷ್ಠ 20 ರಿಂದ 25 ಸ್ಥಾನಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. ತಮ್ಮ ಮುಂದಿನ ಕ್ರಮವನ್ನು ನಿರ್ಧರಿಸಲು ಭಾನುವಾರದವರೆಗೆ ಟಿಕೆಟ್ ಕುರಿತು ಪಕ್ಷದ ನಿರ್ಧಾರಕ್ಕಾಗಿ ಕಾಯುವುದಾಗಿ ಅವರು ಹೇಳಿದ್ದಾರೆ.


ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿದಂತೆ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇನ್ನೂ ಬಿಡುಗಡೆ ಮಾಡಿಲ್ಲ.ನಾಳೆಯವರೆಗೂ ಕಾದು ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಶೆಟ್ಟರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.ಪಕ್ಷದ ಹಿರಿಯ ಕಾರ್ಯಕರ್ತರನ್ನು ಈ ರೀತಿ ನಡೆಸಿಕೊಳ್ಳುವುದರಿಂದ ಬಿಜೆಪಿಯ ಮೇಲೆ ಪರಿಣಾಮ ಬೀರುವ ಬಗ್ಗೆ ಪ್ರಶ್ನಿಸಿದಾಗ, ಈ ಬಗ್ಗೆ ಪಕ್ಷವು ಯೋಚಿಸಬೇಕು ಎಂದು ಹೇಳಿದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.